spot_img
Wednesday, September 2, 2026
spot_img

ಸೆ.5ರಂದು ಶಂಕರನಾರಾಯಣ ಕಾಲೇಜಿನಲ್ಲಿ ಚಂಢೀಗಡ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಅವರಿಂದ ಸ್ಪರ್ಧಾತ್ಮಕ ಪರೀಕ್ಷೆ ಮಾರ್ಗದರ್ಶನ

ಶಂಕರನಾರಾಯಣ: ಶಂಕರನಾರಾಯಣ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳೆದ ಶೈಕ್ಷಣಿಕ ಸಾಲಿನಿಂದ ನಿರಂತರವಾಗಿ ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಕ್ರಮವು ತಾಲ್ಲೂಕಿನ ಗಡಿಯ ಭಾಗದ ನೂರಾರು ಬಡ ವಿದ್ಯಾರ್ಥಿಗಳಲ್ಲಿ ಉನ್ನತ ಉದ್ಯೋಗ ಪಡೆಯಲು ಆಶಾಕಿರಣದಂತೆ ಪ್ರಜ್ವಲಿಸುತ್ತಿದೆ. ಕಾಲೇಜಿನ ಪ್ರಾಂಶುಪಾಲರು ಮತ್ತು ಬೋಧಕರು ಆಸಕ್ತಿ ವಹಿಸಿ ವಿದ್ಯಾರ್ಥಿಗಳ ಯಶಸ್ಸಿನ ಕನಸಿಗೆ ಸ್ಪೂರ್ತಿ ನೀಡಿದ್ದಾರೆ.

ಉನ್ನತ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಮನೋಭಾವವನ್ನು ಮೂಡಿಸಿ ಅವರಿಗೆ ಸರಕಾರಿ ಉದ್ಯೋಗಗಳನ್ನು ಪಡೆಯುವಂತೆ ಮಾಡುವ ದೃಷ್ಟಿಯಿಂದ ಈ ಯೋಜನೆ ಆರಂಭಗೊಂಡಿದೆ. ಪೊಲೀಸ್, ಅಬಕಾರಿ, ಎಸ್.ಡಿ.ಎ, ಎಫ್.ಡಿ.ಎ, ಪಿಡಿ‌ಒ, ಕೆ‌ಎ‌ಎಸ್, ಬ್ಯಾಂಕ್ ಮೊದಲಾದ ನೇಮಕಾತಿ ಪರೀಕ್ಷೆಗಳನ್ನು ಎದುರಿಸಲು ಅಗತ್ಯ ಮಾರ್ಗದರ್ಶನ ಮತ್ತು ತರಬೇತಿಯನ್ನು ಪ್ರತಿದಿನ ತರಗತಿ ಅವಧಿಯ ನಂತರ ನಿರಂತರವಾಗಿ ನೀಡಲಾಗುತ್ತಿದೆ. ಕಾಲೇಜಿನ ಪ್ರಾಧ್ಯಾಪಕರು ವಿವಿಧ ವಿ?ಯಗಳನ್ನು ಹಂಚಿಕೊಂಡು ಸುಮಾರು 85 ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿದ್ದಾರೆ. ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕಾಲೇಜಿನಲ್ಲಿಯೇ ಅರ್ಜಿ ಹಾಕಿಸುವ ವ್ಯವಸ್ಥೆಯನ್ನು ಮಾಡಲಾಗಿದೆ. ಇದರ ಪರಿಣಾಮವಾಗಿ ಇದುವರೆಗೂ 67 ವಿದ್ಯಾರ್ಥಿಗಳು ವಿವಿಧ ಸರ್ಕಾರಿ ಮತ್ತು ಅರೆಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನಿರಂತರ ಪ್ರಯತ್ನಶೀಲರಾಗಿರುತ್ತಾರೆ. ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ,ಬ್ಯಾಂಕ್ ಮತ್ತು ಖಾಸಗಿ ಕಂಪನಿಗಳ ಉನ್ನತ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗಿದೆ.

ಮುಂದುವರಿದು ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಇವರ ಮಾರ್ಗದರ್ಶನದಲ್ಲಿ ದಿನಾಂಕ 5.9.2026 ಶನಿವಾರ ಬೆಳಿಗ್ಗೆ 10.30ಕ್ಕೆ ಮೂಲತಃ ಉಡುಪಿ ಜಿಲ್ಲೆಯವರಾದ ಪ್ರಸ್ತುತ ಚಂಢೀಗಡ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಚ್. ರಾಜೇಶ್ ಪ್ರಸಾದ್ ಐ‌ಎ‌ಎಸ್ ಇವರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷಾ ಪ್ರೇರಣೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಆಸಕ್ತರೆಲ್ಲರು ಭಾಗವಹಿಸಬೇಕೆಂದು ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!