spot_img
Wednesday, September 2, 2026
spot_img

ಪಾರ್ವತಿ ಜಿ. ಐತಾಳ್ ಅವರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ: ‘ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ ಯಾವುದಾದರೊಂದು ಸನ್ನಿವೇಶವನ್ನು ಕಲಾತ್ಮಕವಾಗಿ ಚಿತ್ರಿಸುತ್ತವೆ. ಅವುಗಳಲ್ಲಿ ಮನುಷ್ಯನನ್ನು ಬದುಕಿನ ಬಗ್ಗೆ ಗಂಭೀರವಾಗಿ ಚಿಂತಿಸುವಂತೆ ಮಾಡಬಲ್ಲ ಮೌಲ್ಯ ಸಂದೇಶಗಳಿದ್ದರೆ ಕಥೆಗಳ ಘನತೆ ಇನ್ನೂ ಹೆಚ್ಚಾಗುತ್ತದೆ. ಪಾರ್ವತಿ ಐತಾಳರ ಕಥೆಗಳು ನೋಟಕ್ಕೆ ಸರಳವಾಗಿ ಕಂಡರೂ ಅವುಗಳಲ್ಲಿ ಬದುಕಿನ ಬಗೆಗಿನ ಗಂಭೀರ ಹಾಗೂ ಸೂಕ್ಷ್ಮ ಒಳನೋಟಗಳಿರುವ ಸತ್ಯವನ್ನು ಅಲ್ಲಗಳೆಯುವ ಹಾಗಿಲ್ಲ’ ಎಂದು ಲೇಖಕ-ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಹೇಳಿದರು.

ಅವರು ಕುಂದಾಪುರ ಜನಪ್ರತಿನಿಧಿ ಸಂಸ್ಥೆಯ ಕಚೇರಿಯಲ್ಲಿ ನಡೆದ ಲೇಖಕಿ ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಘಾತ ಕಥಾಸಂಕಲನ ಅನಾವರಣಗೊಳಿಸಿ ಮಾತನಾಡಿದರು.

ಲೇಖಕಿ-ಉಪನ್ಯಾಸಕಿ ಸುಮತಿ ಶೆಣೈಯವರು ಪಾರ್ವತಿ ಐತಾಳರ ‘ಮಲೆಯಾಳ ಸಾಹಿತ್ಯದ ಆರಂಭ ಕಾಲ’ ಎಂಬ ಇನ್ನೊಂದು ಕೃತಿಯ ಬಗ್ಗೆ ಮಾತನಾಡಿ ‘ಯಾವುದೇ ಸಾಹಿತ್ಯದ ಬೆಳವಣಿಗೆಗೆ ಓದುಗರು ಇತರ ಭಾಷೆಯ ಕೃತಿಗಳನ್ನು ಓದುವುದು ಮಾತ್ರವಲ್ಲದೆ ಆ ಭಾಷೆಯ ಸಾಹಿತ್ಯವು ನಡೆದು ಬಂದ ದಾರಿ ಹಾಗೂ ಅದರ ಇತಿಹಾಸದ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ. ಈ ದೃಷ್ಟಿಯಿಂದ ಮಲೆಯಾಳ ಸಾಹಿತ್ಯದ ಚರಿತ್ರೆಯ ಒಳನೋಟವನ್ನು ನೀಡುವ ಈ ಕೃತಿ ಅತ್ಯಂತ ಮಹತ್ವದ್ದಾಗಿದೆ’ ಎಂದರು.

ಕೃತಿಗಳ ಕರ್ತೃ ಪಾರ್ವತಿ ಐತಾಳ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನಪ್ರತಿನಿಧಿ ಪತ್ರಿಕೆಯ ಸಂಪಾದಕರಾದ ಸುಬ್ರಹ್ಮಣ್ಯ ಪಡುಕೋಣೆ ಅಧ್ಯಕ್ಷತೆ ವಹಿಸಿದ್ದರು. ಸುಮನಾ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಜೆಸ್ಸಿ ಎಲಿಝಬೆತ್ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!