spot_img
Saturday, September 5, 2026
spot_img

ಬೈಂದೂರು ವಲಯ ಮಟ್ಟದ ಶಿಕ್ಷಕರ ದಿನಾಚರಣೆ, ಸಾಧಕ ಶಿಕ್ಷಕರಿಗೆ ಸನ್ಮಾನ

ತ್ರಾಸಿ: ಉತ್ತಮ ಸಮಾಜವನ್ನು ನಿರ್ಮಾಣ ಮಾಡುವ ನಿರ್ಮಾತೃ ಶಿಕ್ಷಕರು. ಸಂಸ್ಕಾರಯುತ ಸುಶಿಕ್ಷಿತ ಸಮಾಜದ ನಿರ್ಮಾಣ ಕೂಡಾ ಶಿಕ್ಷಕರ ಜವಾಬ್ದಾರಿ. ಶಿಕ್ಷಕರಿಗೆ ಸಮಾಜದಲ್ಲಿ ಶ್ರೇಷ್ಠವಾದ ಗೌರವವಿದೆ. ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.

ಅವರು ಸೆ.೫ರ ಶನಿವಾರದಂದು ತ್ರಾಸಿಯ ಪ್ರೆಸ್ಟೀಜ್ ಪ್ಯಾಲೇಸ್‌ನಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಶಿಕ್ಷಕರ ಕಲ್ಯಾಣನಿಧಿ, ಬೆಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ & ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿವಿಧ ಶಿಕ್ಷಕರ ಸಂಘಟನೆಗಳು ಅಂಗವಾಗಿ ಬೈಂದೂರು ವಲಯ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಪ್ರೌಡಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ, ಅನುದಾನಿತ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ,ಪ್ರೌಡಶಾಲಾ ದೈಹಿಕ ಶಿಕ್ಷಕರ ಸಂಘದ ಆದ್ಯಕ್ಷ ಮಂಜುನಾಥ ಉಪ್ಪುಂದ, ವಿನಾಯಕ ಮೇರ್ಟ, ಅತಿಥಿಗಳಾಗಿ ವಿಶ್ವನಾಥ ಪೂಜಾರಿ, ಶಿಕ್ಷಕರ ಸಂಘದ ಅಧ್ಯಕ್ಷೆ ರೋಶನ್ ಡಿ.ಬಿ , ಗಣಪತಿ ಹೋಬಳಿದಾರ್, ಕೇಶವ ನಾಯ್ಕ್, ಗೋವಿಂದ ಬಿಲ್ಲವ, ಪ್ರೆಸ್ಟೀಜ್ ಪ್ಯಾಲೇಸ್‌ನ ಸದೀಪ್ ಶೆಟ್ಟಿ ಅವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ನಿವೃತ್ತಿಗೊಂಡ ಶಿಕ್ಷಕರನ್ನು ಸನ್ಮಾನಿಸಲಾಯತು.

ಪ್ರದೀಪ ಕುಮಾರ್ ಶೆಟ್ಟಿ ಅವರು ಸ್ವಾಗತಿಸಿ, ಬಿ‌ಆರ್‌ಪಿ ರಾಜೇಶ್ , ಮತ್ತು ಮಂಜುನಾಥ ಕಾರ್ಯಕ್ರಮ ನಿರೂಪಿಸಿ, ವಂಡ್ಸೆ ಶಿಕ್ಷಣ ಸಂಯೋಜಕರಾದ ವೆಂಕಪ್ಪ ಉಪ್ಪಾರ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!