spot_img
Sunday, September 6, 2026
spot_img

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ: ಶೇ.13 ಡಿವಿಡೆಂಡ್  | ವಾರ್ಷಿಕ ಮಹಾಸಭೆ: ರ್‍ಯಾಂಕ್ ವಿಜೇತರಿಗೆ ಸನ್ಮಾನ

ಬೈಂದೂರು: ಕಳೆದ ಹದಿನೇಳು ವರ್ಷಗಳಿಂದ ಸಂಸ್ಥೆಯು ಯಶಸ್ವಿಯಾಗಿ ಮುನ್ನಡೆಯುತ್ತಾ ಬಂದಿದೆ. ಹಿರಿಯರ ಮಾರ್ಗದರ್ಶನ, ಪ್ರೇರಣೆಯಿಂದ ಸಂಸ್ಥೆಯು ದಿನದಿಂದ ದಿನಕ್ಕೆ ಅಭಿವೃದ್ಧಿ ಪಥದತ್ತ ಸಾಗಿ ಲಾಭ ಗಳಿಸುತ್ತಾ ಬಂದಿದೆ. ಈ ವರ್ಷ 300 ಕೋಟಿ ವ್ಯವಹಾರವನ್ನು ಮಾಡಿ 80 ಲಕ್ಷಕ್ಕೂ ಮಿಕ್ಕಿ ಲಾಭ ಗಳಿಸಿದೆ ಎಂದು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಸ್.ರಾಜು ಪೂಜಾರಿ ಹೇಳಿದರು.

ಅವರು ಭಾನುವಾರ ಸೊಸೈಟಿಯ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಸಂಸ್ಥೆಯು ಸುದೃಢವಾಗಿ ನಿಂತಿದೆ. ಸಂಸ್ಥೆಯು ೫೭ ಕೋಟಿ ಠೇವಣಿಯನ್ನು ಹೊಂದಿದೆ. ೪೯ ಕೋಟಿ ಸಾಲ ನೀಡಲಾಗಿದೆ. ೧ ಕೋಟಿ ೧೬ ಲಕ್ಷ ಪಾಲು ಬಂಡವಾಳ ಹೊಂದಿದೆ. ವಿವಿಧ ಆರ್ಥಿಕ ಸಂಸ್ಥೆಗಳಲ್ಲಿ ೧೪ ಕೋಟಿ ೫೭ ಲಕ್ಷ ಹೂಡಿಕೆ ಮಾಡಲಾಗಿದೆ. ಸಂಸ್ಥೆಯು ೪ ಕೋಟಿಗೂ ಮಿಕ್ಕಿ ನಿಧಿಗಳನ್ನು ಹೊಂದಿದೆ ಎಂದು ತಿಳಿಸಿದ ಎಸ್.ರಾಜು ಪೂಜಾರಿಯವರು ಇದೇ ಸಂದರ್ಭದಲ್ಲಿ ೧೩% ಡಿವಿಡೆಂಡ್ ಘೋಷಣೆ ಮಾಡಿದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ವಾರ್ಷಿಕ ವರದಿಯನ್ನು ಮಂಡಿಸಿದರು. ಸಂಸ್ಥೆಯ ಅಭಿವೃದ್ಧಿಯನ್ನು ಅಂಕಿ‌ಅಂಶ ಸಮೇತ ಸಭೆಯ ಗಮನಕ್ಕೆ ತಂದು ಸದಸ್ಯರ ಒಪ್ಪಿಗೆ ಪಡೆದರು.

ಸಂಸ್ಥೆಯ ಉಪಾಧ್ಯಕ್ಷರಾದ ಎಂ.ವಿನಾಯಕ ರಾವ್ ಮರವಂತೆ, ನಿರ್ದೇಶಕರಾದ ಪ್ರಶಾಂತ ಪೂಜಾರಿ, ಮಂಜು ಪೂಜಾರಿ, ಮಂಜುನಾಥ ಪೂಜಾರಿ, ಸೀತರಾಮ ಮಡಿವಾಳ, ರಾಮಕೃಷ್ಣ ಖಾರ್ವಿ, ಪುಟ್ಟ ಎಂ ಬಿಲ್ಲವ, ಅಣ್ಣಪ್ಪ ಪೂಜಾರಿ, ಬೇಬಿ, ನಾಗರತ್ನ ಉಪಸ್ಥಿತರಿದ್ದರು.
ಸಂಸ್ಥೆಯ ಸಿಬ್ಬಂದಿ ಸಂತೋಷ ಸ್ವಾಗತಿಸಿದರು. ಎಂ.ವಿನಾಯಕ ರಾವ್ ವಂದಿಸಿದರು.

ನತರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಲಾವಣ್ಯ ಕಲಾ ಸಂಸ್ಥೆಯ ಗಣೇಶ ಕಾರಂತ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಗಣೇಶ ಪೂಜಾರಿ ಅವರನ್ನು ಸನ್ಮಾನಿಸಲಾಯಿತು.

ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ೭ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೆ ೭೦% ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ೨೦ಕ್ಕೂ ಹೆಚ್ಚು ಮಂದಿಗೆ ಆರೋಗ್ಯ ಸಹಾಯಧನ ವಿತರಿಸಲಾಯಿತು.

ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮದನ್ ಕುಮಾರ್, ಹಿರಿಯ ಗುತ್ತಿಗೆದಾರರಾದ ಸೂಲಿಯಣ್ಣ ಶೆಟ್ಟಿ ಭಾಗವಹಿಸಿದ್ದರು. ಧರ್ಮಸ್ಥಳ ಆಯುರ್ವೇದ ಕಾಲೇಜು ಉದ್ಯಾವರ ಇಲ್ಲಿನ ಉಪ ಪ್ರಾಂಶುಪಾಲರಾದ ಡಾ.ನಾಗರಾಜ ಪೂಜಾರಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!