spot_img
Monday, September 7, 2026
spot_img

ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರ ಸಂಘ (ನಿ.) ಬ್ರಹ್ಮಾವರ: ವಾರ್ಷಿಕ ಮಹಾಸಭೆ, 1000 ಕೋಟಿ ಮಿಕ್ಕಿ ವ್ಯವಹಾರ ಸಾಧನೆ

ಬ್ರಹ್ಮಾವರ : ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರ ಸಂಘದ 2025-2026ನೇ ಸಾಲಿನ ವಾರ್ಷಿಕ ಮಹಾಸಭೆಯು ದಿನಾಂಕ 05-09-2026 ರಂದು ಸಂಘದ ಪ್ರಧಾನ ಕಛೇರಿಯ ಮಹಾಸಭಾ ಭವನದಲ್ಲಿ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಬಿರ್ತಿಯವರ ಅಧ್ಯಕ್ಷತೆಯಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಬಿರ್ತಿ ಅವರು ಮಾತನಾಡಿ, ಸಂಘವು ವರದಿ ಸಾಲಿನಲ್ಲಿ ಸರ್ವತೋಮುಖ ಅಭಿವೃದ್ಧಿ ಸಾಧಿಸಿದ್ದು, 2025-26ನೇ ಸಾಲಿನಲ್ಲಿ ಅತ್ಯತ್ತುಮ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ‘ಅಪೆಕ್ಸ್ ಬ್ಯಾಂಕ್ ರಾಜ್ಯ ಪ್ರಶಸಿ’್ತ ಹಾಗೂ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನಿಂದ ಅಡಿಟ್ ವರ್ಗಿಕರಣದ ‘ಎ’ ವರ್ಗದ ವಿಭಾಗದ ಸಾಧನೆಗಾಗಿ “ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ” ಪಡೆದುಕೊಂಡಿದೆ. ಸಂಘವು ರೂ. 244.75 ಕೋಟಿಗೂ ಮಿಕ್ಕಿ ಠೇವಣಿ ಹೊಂದಿದ್ದು, ತನ್ನ ಸದಸ್ಯರಿಗೆ 182.67 ಕೋಟಿಗೂ ಮಿಕ್ಕಿ ಸಾಲ ನೀಡಿ, ಶೇ. 99.35 ವಸೂಲಾತಿ ಸಾಧಿಸಿ, ರೂ 4.48 ಕೋಟಿ ನಿವ್ವಳ ಲಾಭ ಗಳಿಸಿದೆ. ರೂ. 282.84 ಕೋಟಿಗೂ ಮಿಕ್ಕಿ ದುಡಿಯುವ ಬಂಡವಾಳ ಹೊಂದಿರುವ ಸಂಘವು 2025-26ನೇ ಸಾಲಿನಲ್ಲಿ ವಾರ್ಷಿಕ ರೂ. 1069.28 ಕೋಟಿ ವ್ಯವಹಾರ ನಡೆಸಿದೆ. ಸಂಘದ ಅಭಿವೃದ್ಧಿಗೆ ಸಹಕರಿಸಿದ ಸರ್ವ ಸದಸ್ಯರಿಗೆ ಸಂಸ್ಥೆ ಅಭಾರಿಯಾಗಿದೆ. ಅಲ್ಪಾವಧಿ ಕೃಷಿ ಸಾಲಕ್ಕೆ ಶೂನ್ಯ ಬಡ್ಡಿ ಮತ್ತು ಮಧ್ಯಮಾವಧಿ ಕೃಷಿ ಸಾಲಕ್ಕೆ ಕೇವಲ 3% ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದ್ದು, ಗೃಹಸಾಲಕ್ಕೆ ಕಡಿಮೆ ಬಡ್ಡಿದರದಲ್ಲಿ ಸಾಲ ವಿತರಿಸುತ್ತಿದ್ದು ಸಂಘವು ಕೇವಲ ಲಾಭದ ಉದ್ದೇಶದಿಂದ ವ್ಯವಹಾರ ನಡೆಸದೇ ಸಂಘದ ಸದಸ್ಯರ ಸೇವೆಗಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಸಂಘದ ಸದಸ್ಯರಿಗೆ ಈ ಸಂದರ್ಭದಲ್ಲಿ ಶೇ.19.50 ಡಿವಿಡೆಂಡ್ ಘೋಷಿಸಲಾಯಿತು. ಈ ಸಂದರ್ಭದಲ್ಲಿ ಪ್ರಗತಿಪರ ರೈತರು ಹಾಗೂ ಹೈನುಗಾರರು ಸೇರಿದಂತೆ ಒಟ್ಟು 15 ಸದಸ್ಯರನ್ನು ಸಮ್ಮಾನಿಸಲಾಯಿತು. ಸಂಘದಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿ ಸಹಾಯಕ ವ್ಯವಸ್ಥಾಪಕರಾಗಿ ನಿವೃತ್ತಿ ಹೊಂದಿದ ಶ್ರೀಪತಿ ರಾವ್‍ರವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಈ ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷರಾದ ಗಣೇಶ್‍ಪ್ರಸಾದ ಶೆಟ್ಟಿ, ನಿರ್ದೇಶಕರಾದ, ಜ್ಞಾನವಸಂತ ಶೆಟ್ಟಿ, ಕಮಲಾಕ್ಷ ಹೆಬ್ಬಾರ್, ರಾಜೇಶ್ ಮರಕಾಲ, ಉಲ್ಲಾಸ್ ನಾಯಕ್, ಶ್ರೀಮತಿ ನಾಗವೇಣಿ ಗಾಣಿಗ, ಶ್ರೀಮತಿ ನಳಿನಿ ಪ್ರದೀಪ್ ರಾವ್, ಎಸ್. ದಯಾನಂದ ನಾಯಕ್, ಶ್ರೀನಿವಾಸ ಶೆಟ್ಟಿ, ಸಂತೋಷ್ ಜತ್ತನ್, ಎಸ್. ನಾರಾಯಣ, ನಿತ್ಯಾನಂದ ನಾಯ್ಕ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಹೆಚ್. ಸುಭಾಶ್ಚಂದ್ರ ಶೆಟ್ಟಿ, ಸೇರಿದಂತೆ ಸಂಘದ ಎಲ್ಲಾ ಸಿಬ್ಬಂದಿಗಳು, ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!