spot_img
Monday, September 7, 2026
spot_img

ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

ಕುಂದಾಪುರ : ಶಿಕ್ಷಕರು ವಿದ್ಯಾರ್ಥಿಗಳ ಬದುಕಿನ ಗುರಿ ನಿರ್ಮಾಣ ಮಾಡುವಲ್ಲಿ ಅತೀ ಪ್ರಮುಖ
ಪಾತ್ರವಹಿಸುತ್ತಾರೆ. ಹೀಗಾಗಿ ಗುರಿಯೆಡೆಗೆ ತಳ್ಳುವ ಕೆಲಸದೊಂದಿಗೆ ಯಶಸ್ಸನ್ನು ಬಯಸುವ ಗುರುಗಳು ಮತ್ತು
ಹೆತ್ತವರನ್ನು ಬದುಕಿನ ಕೊನೆಯ ತನಕ ನೆನಪಿಡಿ ಎಂದು ಶ್ರೀ ವೆಂಕಟರಮಣ ಪದವಿ-ಪೂರ್ವ ಕಾಲೇಜಿನ
ಪ್ರಾಂಶುಪಾಲರಾದ  ಸಂದೀಪ್ ಗಾಣಿಗ ಹೇಳಿದರು.

ಅವರು ಇಲ್ಲಿನ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಮುಖ್ಯ
ಅತಿಥಿಯಾಗಿ ಮಾತನಾಡಿದರು.

ಇನ್ನೋರ್ವ ಮುಖ್ಯ ಅತಿಥಿಗಳಾದ ಕುಂದಾಪುರದ ಸರಕಾರಿ ಪದವಿ-ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ
ಶ್ರೀಮತಿ ಜ್ಯೋತ್ಸ್ನಾ ಮಾತನಾಡಿ, ಕೇವಲ ಗುರು ಮಾತ್ರವಲ್ಲ ಕೆಲವೊಮ್ಮೆ ಕಾಲ, ಸನ್ನಿವೇಶ ಪರಿಸ್ಥಿತಿಗಳು
ಪಾಠವನ್ನು ಕಲಿಸುತ್ತವೆ. ಹೀಗಾಗಿ ಸಂದರ್ಭಕ್ಕೆ ತಕ್ಕಂತೆ ವರ್ತಿಸುವುದನ್ನು ವಿದ್ಯಾರ್ಥಿಗಳು ಕಲಿಯಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ  ರಕ್ಷಿತ್‌ ರಾವ್‌ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಅಪೇಕ್ಷಾ ಸ್ವಾಗತಿಸಿ, ನಮನಾ ಜಿ., ಅಪೂರ್ವ ಅತಿಥಿಗಳನ್ನು ಪರಿಚಯಿಸಿ, ಪ್ರದೀಪ್ ವಂದಿಸಿ,
ನಿಶ್ಮಿತಾ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!