spot_img
Monday, September 7, 2026
spot_img

ಜ್ಞಾನ ಮತ್ತು ಪರಿಶ್ರಮ ಯಶಸ್ಸಿನ ಸೂತ್ರ: ಎಚ್. ರಾಜೇಂದ್ರ ಪ್ರಸಾದ್| ಶಂಕರನಾರಾಯಣ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಪ್ರೇರಣಾ ಕಾರ್ಯಕ್ರಮ

ಶಂಕರನಾರಾಯಣ: ಕರಾವಳಿ ಭಾಗದ ವಿದ್ಯಾರ್ಥಿಗಳು ಐ‌ಎ‌ಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ಸು ಸಾಧಿಸಿ, ಸರ್ಕಾರಿ ಸೇವೆಯಲ್ಲಿ ತಮ್ಮ ಪ್ರಾತಿನಿಧ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿ ಎಚ್. ರಾಜೇಂದ್ರ ಪ್ರಸಾದ್, ಐ‌ಎ‌ಎಸ್ ಹೇಳಿದರು.

ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು, ಶಂಕರನಾರಾಯಣದ ಸಭಾಂಗಣದಲ್ಲಿ ಆಯೋಜಿಸಿದ್ದ ಸ್ಪರ್ಧಾತ್ಮಕ ಪರೀಕ್ಷಾ ಪ್ರೇರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರಾವಳಿ ಭಾಗದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದರೂ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನದ ಕೊರತೆಯಿಂದ ಸರ್ಕಾರಿ ಕ್ಷೇತ್ರದ ಉನ್ನತ ಹುದ್ದೆಗಳಲ್ಲಿ ಈ ಭಾಗದವರ ಸಂಖ್ಯೆ ನಿರೀಕ್ಷಿತ ಮಟ್ಟದಲ್ಲಿಲ್ಲ. ಈ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಕರಾವಳಿ ಭಾಗದ ವಿದ್ಯಾರ್ಥಿಗಳಿಗೆ ಐ‌ಎ‌ಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಐ‌ಎ‌ಎಸ್ ತರಬೇತಿ ಅಕಾಡೆಮಿ ಆರಂಭಿಸುವ ಚಿಂತನೆ ಇದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗುರಿಯಾಗಿಸಿಕೊಂಡು ಆರಂಭದಿಂದಲೇ ವ್ಯವಸ್ಥಿತವಾಗಿ ಸಿದ್ಧತೆ ನಡೆಸಬೇಕು. ನಿರಂತರ ಅಧ್ಯಯನ, ಸಮಯದ ಸದ್ಬಳಕೆ, ಸಾಮಾನ್ಯ ಜ್ಞಾನ ಹಾಗೂ ಪ್ರಚಲಿತ ವಿದ್ಯಮಾನಗಳ ಅರಿವಿನೊಂದಿಗೆ ಪರೀಕ್ಷೆಗಳಿಗೆ ಸಿದ್ಧರಾಗಬೇಕು. ತಮಗೆ ದೊರೆಯುವ ಮಾರ್ಗದರ್ಶನವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ತಮ್ಮ ಗುರಿ ಸಾಧನೆಯತ್ತ ಮುನ್ನಡೆಯಬೇಕು ಎಂದು ರಾಜೇಂದ್ರ ಪ್ರಸಾದ್ ಸಲಹೆ ನೀಡಿದರು.

ಕಾರ್ಯಕ್ರಮದ ಬಳಿಕ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ, ಪರೀಕ್ಷಾ ವಿಧಾನ, ಅಧ್ಯಯನ ಕ್ರಮ ಹಾಗೂ ಸರ್ಕಾರಿ ಸೇವೆಗೆ ಸೇರುವ ಅವಕಾಶಗಳ ಕುರಿತು ಕೇಳಿದ ವಿವಿಧ ಪ್ರಶ್ನೆಗಳಿಗೆ ರಾಜೇಂದ್ರ ಪ್ರಸಾದ್ ಉತ್ತರ ನೀಡಿ, ಅಗತ್ಯ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ ವಹಿಸಿದ್ದರು. ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ, ನಿವೃತ್ತ ಮುಖ್ಯಸ್ಥರು, ರಾಜ್ಯಶಾಸ್ತ್ರ ವಿಭಾಗ, ಎಂಜಿ‌ಎಂ ಕಾಲೇಜು, ಉಡುಪಿ ಪ್ರಸ್ತಾವನೆಗೈದರು. ಕಾಲೇಜಿನ ಪ್ರಾಂಶುಪಾಲ ಡಾ. ವೆಂಕಟರಾಮ್ ಭಟ್ ಸ್ವಾಗತಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕ ಸಚಿನ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ದಿವ್ಯಾ ಎಂ ಎಸ್ ವಂದಿಸಿದರು.

 

 

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!