spot_img
Thursday, September 10, 2026
spot_img

ಕರಾಟೆ ಸ್ಪರ್ಧೆಯಲ್ಲಿ ಜನತಾ ವಿದ್ಯಾಸಂಸ್ಥೆಯ 3 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

kundapura: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕ್ರಿಯೇಟಿವ್ ಕಾಲೇಜು, ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಗೊಂಡು ಇತಿಹಾಸ ಸೃಷ್ಟಿಸಿದ್ದಾರೆ.

೧೭ರ ವಯೋಮಾನದ ಹುಡುಗರ-೫೮ಕೆಜಿ ವಿಭಾಗದಲ್ಲಿ ಸಾಯಿನಾಥ್ ಆಚಾರ್ಯ,-೭೮ ಕೆಜಿ ವಿಭಾಗದಲ್ಲಿ ಪ್ರೀತಮ್ ಹಾಗೂ ೧೪ರ ವಯೋಮಾನದ ಬಾಲಕರ -೬೦ ಕೆಜಿ ವಿಭಾಗದಲ್ಲಿ ಸಾಕ್ಷಿತ್ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿಕೊಂಡರು.
೧೭ರ ವಯೋಮಾನದ ಹುಡುಗರ-೫೪ ಕೆಜಿ ವಿಭಾಗದಲ್ಲಿ ರಜತ್ ಆರ್ ಮತ್ತು ೧೪ರ ವಯೋಮಾನದ ಹುಡುಗರ +೬೦ಕೆಜಿ ವಿಭಾಗದಲ್ಲಿ ಆಶೀಷ್ ಹಾಗೂ -೩೫ ಕೆಜಿ ವಿಭಾಗದಲ್ಲಿ ಸರ್ಮಥ್ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿಯ ಪದಕ ಪಡೆದರು.

ಅನುಭವಿ ಮತ್ತು ಪ್ರಭಾವಿ ತರಬೇತುದಾರರ ಮೂಲಕ ನಿತ್ಯದ ತರಬೇತಿ ತರಗತಿಗಳು, ಕಟ್ಟುನಿಟ್ಟಿನ ಫಿಟ್ನೆಸ್ ತಂತ್ರಗಳು, ಸ್ಪರ್ಧಾಳುಗಳ ನಿಯಮಿತ ಮೌಲ್ಯಮಾಪನಗಳು, ಸತ್ವಯುತ ಆಹಾರ ನಿಯಮಗಳ ಪಾಲನೆಯ ಮೂಲಕ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಯ ಹೊಸ ಅಲೆಯನ್ನು ಎಬ್ಬಿಸುತ್ತಿದೆ.

ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭರ್ಜರಿ ಪ್ರದರ್ಶನದೊಂದಿಗೆ ಸಂಸ್ಥೆಯ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿದ ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು , ಕಾರ್ಯದರ್ಶಿಗಳು,ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!