spot_img
Saturday, September 12, 2026
spot_img

ಸೆ. 17-18: ಮೂಡ್ಲಕಟ್ಟೆ ಎಂ.ಐ.ಟಿ.ಕೆ ಆವರಣದಲ್ಲಿ Jobs Express-2026

ಕುಂದಾಪುರ: ಕರಾವಳಿ ಕರ್ನಾಟಕದ ಯುವಜನರಿಗೆ ಉದ್ಯೋಗ ಮತ್ತು ವೃತ್ತಿ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ನಡೆಯುತ್ತಿರುವ ಪ್ರಾದೇಶಿಕ ಪ್ರಮುಖ ಕಾರ್ಯಕ್ರಮವಾದ Jobs Express-2026 ಸೆಪ್ಟೆಂಬರ್ 17 ಮತ್ತು 18, 2026ರಂದು ಕುಂದಾಪುರದ ಮೂಡ್ಲಕಟ್ಟೆ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆಯಲಿದೆ ಎಂದು ಐ.ಎಂ.ಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ.ಶಂಕರನಾರಾಯಣ ಭಟ್ ಹೇಳಿದರು.

ಅವರು ಕುಂದಾಪುರದ ಪ್ರೆಸ್‍ಕ್ಲಬ್‍ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಈ ಉದ್ಯೋಗ ಮೇಳದಲ್ಲಿ ಸುಮಾರು 35ಕ್ಕೂ ಅಧಿಕ ಪ್ರಮುಖ ಕಂಪನಿಗಳು ಭಾಗವಹಿಸಲಿದ್ದು, 5,000ಕ್ಕೂ ಅಧಿಕ ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಮುಖ್ಯವಾಗಿ ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳು, ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸಿ ವೃತ್ತಿ ಅವಕಾಶಗಳನ್ನು ಪಡೆಯಲು ವೇದಿಕೆ ಕಲ್ಪಿಸಲಾಗುತ್ತಿದೆ ಎಂದರು.

Jobs Express-2026ನಲ್ಲಿ ನುವಿನ್ ಗ್ಲೋಬಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್, ಟಾಟಾ ವಿಸ್ಟ್ರಾನ್, ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್, ವಿಪೆÇ್ರೀ ಕವಾಸಕಿ. ಪ್ರಿಸಿಷನ್ ಮೆಕ್ ಲಿಮಿಟೆಡ್, ವಿನ್‍ಮ್ಯಾನ್ ಸಾಫ್ಟ್‍ವೇರ್, ಎಮ್ಮ್ವೀ, ಫ್ಲಿಪ್‍ಕಾರ್ಟ್ ಸೇರಿದಂತೆ 35ಕ್ಕೂ ಅಧಿಕ ಪ್ರಮುಖ ಕಂಪನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ ಎಂದರು.

ಐ ಎಂ ಜೆ ಇನ್ಸ್ಟಿಟ್ಯೂಷನ್ಸ್, ಕುಂದಾಪುರ, 1M1B ಫೌಂಡೇಶನ್ (A Million for a Billion) ವತಿಯಿಂದ, ಕರ್ನಾಟಕ ಸರ್ಕಾರ, ಮೈಕ್ರೋಸಾಫ್ಟ್ ಹಾಗೂ ಮೈಟಿ (MeitY) ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಸೆಪ್ಟೆಂಬರ್ 17ರಂದು ಮೈಕ್ರೋಸಾಫ್ಟ್ ಜಾಬ್ ರೆಡಿನೆಸ್ ಬೂಟ್ ಕ್ಯಾಂಪ್ ನೊಂದಿಗೆ ಆರಂಭವಾಗಲಿದ್ದು, ಸೆಪ್ಟೆಂಬರ್ 18ರಂದು ಉದ್ಘಾಟನೆ , ಸಂದರ್ಶನ ಪ್ರಕ್ರಿಯೆ ನಡೆಯಲಿದೆ. ಈ ಮೂಲಕ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ವಿವಿಧ ಕಂಪನಿಗಳೊಂದಿಗೆ ನೇರವಾಗಿ ಸಂಪರ್ಕ ಸಾಧಿಸಿ ಉದ್ಯೋಗ ಹಾಗೂ ವೃತ್ತಿ ಅವಕಾಶಗಳನ್ನು ಪಡೆಯಲು ಅವಕಾಶ ದೊರೆಯಲಿದೆ ಎಂದರು.

2024, 2025, 2026 ಮತ್ತು 2027ನೇ ಬ್ಯಾಚ್‍ಗಳ ವಿದ್ಯಾರ್ಥಿಗಳು ಹಾಗೂ ಪದವೀಧರರು ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ವಿಶೇಷವಾಗಿ ಟಿಯರ್-2, ಟಿಯರ್-3 ಶಿಕ್ಷಣ ಸಂಸ್ಥೆಗಳ ಪ್ರತಿಭೆಗಳಿಗೆ ಕೈಗಾರಿಕಾ ಅವಕಾಶಗಳನ್ನು ಅವರದೇ ಪ್ರದೇಶಕ್ಕೆ ತಲುಪಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಜಾಬ್ ಎಕ್ಸ್ ಪ್ರೆಸ್-2026, ಕೈಗಾರಿಕೆ-ಶೈಕ್ಷಣಿಕ ಸಂಸ್ಥೆಗಳು-ಪ್ರತಿಭೆಗಳ ನಡುವಿನ ಸಂಪರ್ಕ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವುದರ ಜೊತೆಗೆ ಭೌಗೋಳಿಕ ಅಂತರವು ಕರಾವಳಿ ಕರ್ನಾಟಕದ ಯುವಜನರ ವೃತ್ತಿ ಅವಕಾಶಗಳಿಗೆ ಯಾವುದೇ ಅಡೆತಡೆಯಾಗದಂತೆ ಉದ್ಯೋಗಾವಕಾಶಗಳನ್ನು ಅವರ ಸಮೀಪಕ್ಕೆ ತರುವ ಮಹತ್ವದ ಹೆಜ್ಜೆಯಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ನೋಂದಣಿ ಕಡ್ಡಾಯವಾಗಿದ್ದು, ಸ್ಥಳದಲ್ಲಿಯೇ ನೊಂದಣಿ ವ್ಯವಸ್ಥೆಯೂ ಲಭ್ಯವಿರುತ್ತದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಮೂಡ್ಲಕಟ್ಟೆ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ ಇದರ ಪ್ರಾಂಶುಪಾಲರಾದ ಡಾ.ರಾಮಕೃಷ್ಣ ಹೆಗಡೆ, ಐ.ಎಂ.ಜೆ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಇದರ ಪ್ರಾಂಶುಪಾಲರಾದ ಡಾ.ಪ್ರತಿಭಾ ಎಂ.ಪಟೇಲ್, Jobs Express-2026 ಇದರ ಡಾ.ವರುಣಕುಮಾರ್, ಆದಿತ್ಯ ಪೂಜಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!