spot_img
Thursday, September 17, 2026
spot_img

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿಯ ದಾಖಲೆಯ 8 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಸತತ 5ನೇ ಬಾರಿ ಉಡುಪಿ ಜಿಲ್ಲಾ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಜನತಾ ವಿದ್ಯಾ ಸಂಸ್ಥೆ.

ಹೆಮ್ಮಾಡಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ, ಭಂಡಾರ್ ಕಾರ್ಸ್ ಪದವಿ ಪೂರ್ವ ಕಾಲೇಜ್ ಕುಂದಾಪುರ ಇವರ ಆಸರೆಯಲ್ಲಿ ಜಿಲ್ಲಾ ಮಟ್ಟದ ಬಾಲಕರ ವಿಭಾಗದ ಫ್ರಿ ಸ್ಟೆಲ್ ಹಾಗೂ ಗ್ರಿಕೋ ರೋಮನ್ ಮತ್ತು ಬಾಲಕಿಯರ ವಿಭಾಗದಲ್ಲಿ ನಡೆದ
ಕುಸ್ತಿ ಪಂದ್ಯಾಟದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿಯ 8 ವಿದ್ಯಾರ್ಥಿಗಳು ಅತ್ಯುತ್ತಮ ಸಾಹಸವನ್ನು ಪ್ರದರ್ಶಿಸಿ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ 8ವಿದ್ಯಾರ್ಥಿಗಳು ಚಿನ್ನದ ಪದಕ 10ವಿದ್ಯಾರ್ಥಿಗಳು ಬೆಳ್ಳಿಯ ಪದಕ 8ವಿದ್ಯಾರ್ಥಿಗಳು ಕಂಚಿನ ಪದಕ ಪಡೆದು ಸತತವಾಗಿ 5ನೇ ಬಾರಿ ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಕೊಂಡರು.
*ಚಿನ್ನದ ಪದಕದ ಸಾಧಕರು*
ವಿದ್ಯಾರ್ಥಿಗಳಾದ ನವೀಶ್ (87kg),ಕಮಲೇಶ್ (82kg),
ಸಾನ್ವಿತ್ ಖಾರ್ವಿ( 74kg)ನಯನ (72kg)ಪ್ರತೀಕ್ಷಾ (72kg)ಮಂಥನ್(70kg),ಕೃತಿಕಾ (62kg)ಅನನ್ಯ (57kg)ಇವರು ಚಿನ್ನದ ಪದಕ ಪಡೆಯುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ.

ಬೆಳ್ಳಿಯ ಪದಕ ಪಡೆದ ಸಾಧಕರು:
ಪ್ರಜ್ವಲ್, ಶೋಭಿತ್, ಧೀರಜ್, ಜಾಸಿಮ್, ಪ್ರಜ್ವನ್, ಇಫ್ರಾಜ್, ನಾಗಶ್ರೀ,ದೀಕ್ಷಾ, ಮೋನಿಷಾ, ಆಕಾಂಕ್ಷ

ಕಂಚಿನ ಪದಕ ಪಡೆದ ಸಾಧಕರು:
ಸಾಗರ್, ಆದರ್ಶ, ಪ್ರಮೋದ್, ಪ್ರಜ್ವಲ್, ಸುನಿಲ್, ಧನುಷ್, ಸೌಲತ್, ಸಿಂಚನ.

ಶಿಕ್ಷಣದ ಜೊತೆಗೆ ಕ್ರೀಡಾ ಸಾಧನೆ ಮಾಡಿದ
ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಇಂದಿನ ಬದಲಾಗುತ್ತಿರುವ ಸಮಾಜದಲ್ಲಿ ಎಲ್ಲ ವಿಭಾಗ ದಲ್ಲಿಯೂ ಮಕ್ಕಳಿಗೆ ಮುಕ್ತ ಅವಕಾಶ ಇರುವುದರಿಂದ ಕೇವಲ ಇಂಜಿನಿಯರ್, ಡಾಕ್ಟರ್ ಮಾತ್ರವಲ್ಲದೆ ಕ್ರೀಡೆಗೂ ಈ ದೇಶದಲ್ಲಿ ಸಮನ ಅವಕಾಶ ಸಿಗುತ್ತಿದೆ ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಜನತಾ ಪದವಿ ಪೂರ್ವ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕ್ರೀಡಾ ಕ್ಷೇತ್ರದಲ್ಲೂ ಸಂಚಲನ ಉಂಟು ಮಾಡಿದೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ.
ಗಣೇಶ್ ಮೊಗವೀರ. ಪ್ರಾಂಶುಪಾಲರು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!