spot_img
Tuesday, September 22, 2026
spot_img

ಯುವ ಸಾಹಿತಿ ಅಲ್ತಾರು ನಾಗರಾಜ್ ರವರಿಗೆ 2026ನೇ ಸಾಲಿನ ರಾಜ್ಯ ಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ

ಉಡುಪಿ: ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ವಾರ್ಷಿಕವಾಗಿ ಆಯೋಜಿಸಲಾಗುವ ’ಗುರು ನಮನ’ ಸಮಾರಂಭದಲ್ಲಿ ನೀಡಲಾಗುವ 2026ನೇ ಸಾಲಿನ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಯನ್ನು ಯುವ ಸಾಹಿತಿ, ಬ್ರಹ್ಮಾವರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಕೋಶಾಧಿಕಾರಿ , ಹೆಮ್ಮಾಡಿ ಜನತಾ ಪಿಯು ಕಾಲೇಜಿನ ಕನ್ನಡ ಉಪನ್ಯಾಸಕ ಅಲ್ತಾರು ನಾಗರಾಜ್ ಅವರ ಶಿಕ್ಷಣ, ಸಾಹಿತ್ಯ ಸೇವೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಹಿಂದೆ ಇವರು ೨೦೧೫ನೇ ಸಾಲಿನ ಪುಟ್ಟಣ್ಣ ಕುಲಾಲ್ ಪ್ರತಿಷ್ಠಾನ ಮಂಗಳೂರು, ಕುಂದ ಪ್ರಭ ಟ್ರಸ್ಟ್ ಕುಂದಾಪುರ ಇವರು ಕೊಡಮಾಡುವ ಶ್ರೇಷ್ಠ ಯುವ ಕವಿ ಪ್ರಶಸ್ತಿ ಹಾಗೂ ರೋಟರಿ ಸಂಸ್ಥೆ ಕೊಡಮಾಡುವ ನೇಶನ್ ಬಿಲ್ಡರ್ ಆವಾರ್ಡ್ ಪಡೆದಿರುತ್ತಾರೆ.ಮಂಗಳೂರು ಆಕಾಶವಾಣಿ ಮತ್ತು ರೇಡಿಯೋ ಕುಂದಾಪ್ರ ದಲ್ಲಿ ಇವರ ಕತೆ, ಕವನ, ಭಾಷಣಗಳು ನಿರಂತರವಾಗಿ ಬೆಳಕು ಕಂಡಿವೆ.ವಿವಿಡೆದೆ ಮಕ್ಕಳ ವ್ಯಕ್ತಿತ್ವ ವಿಕಸನ ಶಿಬಿರ,ಮಹಿಳಾ ಸ್ವಯಂ ಸೇವಾ ಸಂಘದ ತರಬೇತಿ ಶಿಬಿರಗಳಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ.

ಸೆಪ್ಟೆಂಬರ್ 20, ಭಾನುವಾರ ಬೆಂಗಳೂರು ಟೌನ್‌ಹಾಲ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯಾಧ್ಯಕ್ಷ ಎಸ್ ರಾಮಸ್ವಾಮಿ,ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್ ಜಿ ಸೇರಿದಂತೆ ಅತಿಥಿ ಗಣ್ಯರು ಉಪಸ್ಥಿತರಿದ್ದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!