spot_img
Tuesday, September 22, 2026
spot_img

ಖಂಬದಕೋಣೆ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ ಜನತಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಕಿರಿಮಂಜೇಶ್ವರ: ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯವರು ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಗಾಂಧಿ ಮೈದಾನದಲ್ಲಿ ನಡೆಸಿದ ಖಂಬದಕೋಣೆ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿಯರು 200 ಮೀ. ಓಟದ ಸ್ಪರ್ಧೆಯಲ್ಲಿ ಜಯಶಾಲಿಗಳಾಗಿ ತಾಲೂಕು ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ.

14 ರ ವಯೋಮಾನದ ಬಾಲಕಿಯರ ವಿಭಾಗದ 200 ಮೀಟರ್ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಶರಣ್ಯ ಪ್ರಥಮ ಸ್ಥಾನ ಪಡೆದುಕೊಂಡರೆ,
*17ರ ವಯೋಮಾನದ ಬಾಲಕಿಯರ ವಿಭಾಗದ* 200 ಮೀಟರ್ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿನಿ ಚಾರ್ವಿ ಪ್ರಥಮ ಸ್ಥಾನ ಹಾಗೂ 100 ಮೀಟರ್ ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿಕೊಂಡರು.

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಮಿಂಚು ಹರಿಸಿ, ತಾಲೂಕು ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖ್ಯ ಶಿಕ್ಷಕಿ ಶುಭ ಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ- ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ವಿಜೇತರನ್ನು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!