spot_img
Saturday, September 26, 2026
spot_img

‘ಚಿತ್ರಕೂಟ’ದ ರೂವಾರಿ ಡಾ.ರಾಜೇಶ್ ಬಾಯರಿ ಅವರಿಗೆ ಪ್ರತಿಷ್ಠಿತ ಆಯುರ್ ಭೂಷಣ ಪ್ರಶಸ್ತಿ ಪ್ರದಾನ

ಕನ್ನಡ ಪ್ರಭ – ಏಷ್ಯಾನೆಟ್ ಸುವರ್ಣ ನ್ಯೂಸ್ ವತಿಯಿಂದ ಅದ್ಧೂರಿ ಗೌರವ ಸಮರ್ಪಣೆ
ಬೆಂಗಳೂರು, ಸೆ.26: ಪಾರಂಪರಿಕ ಆಯುರ್ವೇದ ವೈದ್ಯಕೀಯ ಪದ್ಧತಿಯ ಸಂರಕ್ಷಣೆ, ಔಷಧ ಸಂಶೋಧನೆ ಹಾಗೂ ನೈಸರ್ಗಿಕ ಚಿಕಿತ್ಸೆಯಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ಕುಂದಾಪುರದ ಖ್ಯಾತ ಆಯುರ್ವೇದ ವೈದ್ಯ ಡಾ. ರಾಜೇಶ್ ಬಾಯರಿ ಅವರಿಗೆ ಮಾಧ್ಯಮ ರಂಗದ ಅಗ್ರಗಣ್ಯ ಸಂಸ್ಥೆಗಳಾದ ಕನ್ನಡ ಪ್ರಭ ಹಾಗೂ ಏಷ್ಯಾನೆಟ್ ಸುವರ್ಣ ನ್ಯೂಸ್ ಜಂಟಿಯಾಗಿ ನೀಡುವ ಪ್ರತಿಷ್ಠಿತ ಆಯುರ್ ಭೂಷಣ ಪುರಸ್ಕಾರವನ್ನು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪಾವಗಡ ರಾಮಕೃಷ್ಣ ಸೇವಾಶ್ರಮದ ಶ್ರೀ ಜಪಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಖ್ಯಾತ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ, ಖ್ಯಾತ ನಟ ಹಾಗೂ ನಿರ್ದೇಶಕ ಸುಚೇಂದ್ರ ಪ್ರಸಾದ್, ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ. ಶರವಣ, ಹಿರಿಯ ಆಯುರ್ವೇದ ವೈದ್ಯ ಡಾ. ಗಿರಿಧರ ಕಜೆ, ಪರ್ವ ಗ್ರೂಪ್ ಎಂಡಿ ನೀಲೇಶ್ ಹಾಗೂ ಕನ್ನಡ ಪ್ರಭ – ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಸಮೂಹ ಸಂಪಾದಕೀಯ ನಿರ್ದೇಶಕ ರವಿ ಹೆಗಡೆ, ಕನ್ನಡಪ್ರಭ ಸಂಪಾದಕ ಗಿರೀಶ್ ರಾವ್ ಹತ್ವಾರ್ (ಜೋಗಿ) ಉಪಸ್ಥಿತರಿದ್ದು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಡಾ. ರಾಜೇಶ್ ಬಾಯರಿ ಅವರ ತಂದೆ ಮಹಾಬಲ ಬಾಯರಿ, ತಾಯಿ ಕಲಾವತಿ ಬಾಯರಿ ಹಾಗೂ ಪತ್ನಿ ಡಾ. ಅನುಲೇಖಾ ಬಾಯರಿ, ಮಕ್ಕಳಾದ ಅರ್ಣವ್ ಹಾಗೂ ಆರಾಧ್ಯ ಉಪಸ್ಥಿತರಿದ್ದು ಸಮಾರಂಭಕ್ಕೆ ಸಾಕ್ಷಿಯಾದರು.

ಕುಂದಾಪುರದ ಆಲೂರಿನ ಕಳಿಯಂತಹ ಗ್ರಾಮೀಣ ಭಾಗದಲ್ಲಿ ಆರಂಭವಾದ ಚಿತ್ರಕೂಟ ಕೇಂದ್ರವು, ಇಂದು ಅಮೆರಿಕ ಹಾಗೂ ಯುರೋಪ್ ಸೇರಿದಂತೆ ವಿಶ್ವದ 30ಕ್ಕೂ ಹೆಚ್ಚು ರಾಷ್ಟ್ರಗಳ ಜನರಿಗೆ ಚಿಕಿತ್ಸೆ ನೀಡುವ ಮಟ್ಟಕ್ಕೆ ಬೆಳೆದು ನಿಂತಿದೆ. 18 ಎಕರೆ ವಿಸ್ತಾರದಲ್ಲಿ ದೇಸಿ ಗೋಶಾಲೆ, ಅಪರೂಪದ ಗಿಡಮೂಲಿಕೆಗಳ ಔಷಧ ವನ ಹಾಗೂ ಶುದ್ಧ ಪಂಚಕರ್ಮ ಚಿಕಿತ್ಸೆಯೊಂದಿಗೆ ಸ್ಥಳೀಯರಿಗೆ ಉದ್ಯೋಗ ನೀಡಿ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸಿದ ಡಾ. ಬಾಯರಿ ಅವರ ನಿಸ್ವಾರ್ಥ ಸಾಧನೆಯನ್ನು ಸಮಾರಂಭದಲ್ಲಿ ಗಣ್ಯರು ಮುಕ್ತಕಂಠದಿಂದ ಶ್ಲಾಘಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!