spot_img
Monday, September 28, 2026
spot_img

ಕಾಳಾವರ: ಜ್ಞಾನವಿಕಾಸ ಸದಸ್ಯರಿಗೆ ಮಲ್ಲಿಗೆ ಕೃಷಿ ಮಾಹಿತಿ, ಗಿಡ ವಿತರಣೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ., ಕುಂದಾಪುರ ೨ ಯೋಜನ ಕಚೇರಿ ವ್ಯಾಪ್ತಿಯ ಕಾಳಾವರ ವಲಯದ ಜ್ಞಾನವಿಕಾಸ ಕೇಂದ್ರ ಸದಸ್ಯರಿಗೆ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಮಲ್ಲಿಗೆ ಕೃಷಿ ತರಬೇತಿ ಹಾಗೂ ಗಿಡ ವಿತರಣೆ ಕಾರ್ಯಕ್ರಮವನ್ನು ಕಾಳಾವರ ವಲಯ ಕಛೇರಿ ನಡೆಯಿತು.
ಕಾರ್ಯಕ್ರಮವನ್ನು ತಾಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು ಉದ್ಘಾಟಿಸಿ ಗ್ರಾಮಾಭಿವೃದ್ಧಿ ಯೋಜನೆಯು ಸಮಾಜಕ್ಕೆ ಪೂರಕವಾದ ಅನೇಕ ಕಾರ್ಯಕ್ರಮಗಳನ್ನು ನಡೆಸಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮವು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುತ್ತಿದ್ದು ಮಲ್ಲಿಗೆ ಕೃಷಿ ತರಬೇತಿಯು ನಿಮ್ಮನ್ನು ಸ್ವ ಉದ್ಯೋಗಗಳನ್ನಾಗಿ ಮಾಡುವುದರಲ್ಲಿ ಸಂಶಯವಿಲ್ಲ. ಮಲ್ಲಿಗೆ ಕೃಷಿ ತರಬೇತಿಯನ್ನು ಪಡೆದುಕೊಂಡು ಶ್ರದ್ದೆಯಿಂದ ಮಲ್ಲಿಗೆ ಕೃಷಿ ಮಾಡಿ ಉತ್ತಮ ಆದಾಯ ಗಳಿಸಿ ಸ್ವಾವಲಂಬಿಗಳಾಗಬೇಕು ಎಂದರು.
ಎಡಮೊಗೆಯ ಬ್ರಾಹ್ಮಿ ನರ್ಸರಿ ಮಾಲೀಕರಾದ ಅಶೋಕ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಮಲ್ಲಿಗೆ ಗಿಡ ನಾಟಿ, ಪೋಷಣೆಯ ಬಗ್ಗೆ, ಗೊಬ್ಬರ, ಸಸ್ಯ ಸಂರಕ್ಷಣಾ ವಿಧಾನಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
15 ವರ್ಷಗಳಿಂದ ಮಲ್ಲಿಗೆ ಕೃಷಿ ಮಾಡಿಕೊಂಡು ಸಾಧನೆ ಮಾಡಿದ ಮಾಲತಿ ಶೆಟ್ಟಿಯವರು ತಮ್ಮ ಮಲ್ಲಿಗೆ ಕೃಷಿಯ ಬಗ್ಗೆ ಸ್ವಂತ ಅನುಭವಗಳನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಕಾಳವಾರ ವಲಯ ಅಧ್ಯಕ್ಷರಾದ ಸುಬ್ರಹ್ಮಣ್ಯ ಆಚಾರ್ಯ, ಸ್ಥಳೀಯ ಒಕ್ಕೂಟದ ಅಧ್ಯಕ್ಷರಾದ ಸುನಿಲ್ ಕುಮಾರ್, ಮಲ್ಲಿಗೆ ಕೃಷಿಯಲ್ಲಿ ಸಾಧನೆ ಮಾಡಿದ ಜ್ಞಾನವಿಕಾಸದ ಸದಸ್ಯರಾದ ಮಾಲತಿ ಶೆಟ್ಟಿ, ವಲಯದ ಮೇಲ್ವಿಚಾರಕರಾದ ದಿವಾಕರ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತಾ, ಸ್ಥಳೀಯ ಸೇವಾ ಪ್ರತಿನಿಧಿಗಳಾದ ಶ್ರೀದೇವಿ ,ಲಲಿತ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ೧೫ ಜ್ಞಾನವಿಕಾಸ ಸದಸ್ಯರಿಗೆ ತಲಾ ೧೫ರಂತೆ ಉತ್ತಮ ಗುಣಮಟ್ಟದ ಮಲ್ಲಿಗೆ ಗಿಡವನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತ ನಿರೂಪಿಸಿ, ಮೇಲ್ವಿಚಾರಕ ದಿವಾಕರ ಸ್ವಾಗತಿಸಿ, ಸೇವಾ ಪ್ರತಿನಿಧಿ ಶ್ರೀದೇವಿ ವಂದಿಸಿದರು

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!