spot_img
Tuesday, September 29, 2026
spot_img

ಅಮಾಸೆಬೈಲು, ಹೆಂಗವಳ್ಳಿ ವಲಯದ ಒಕ್ಕೂಟಗಳ ಪದಾಧಿಕಾರಿಗಳಿಗೆ ತರಬೇತಿ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ-೨ ಯೋಜನ ಕಚೇರಿಯ ಅಮಾಸೆಬೈಲು ಹಾಗೂ ಹೆಂಗವಳ್ಳಿ ವಲಯದ ಒಕ್ಕೂಟಗಳ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ವಲಯ ಅಧ್ಯಕ್ಷರಾದ ಭೋಜರಾಜ್ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಅವರು ಸಂಘಗಳ ಗುಣಮಟ್ಟದ ವಾರದ ಸಭೆ, ಶಿಸ್ತು, ನಿಯಮಗಳ ಕುರಿತು ಮಾಹಿತಿ ನೀಡಿದರು. ಉತ್ತಮ ಸಂಸ್ಕಾರ ಇರುವ ಜನರು ಜೀವನದಲ್ಲಿ ಗೆಲುವನ್ನು ಸಾಧಿಸುತ್ತಾರೆ. ಒಕ್ಕೂಟದ ಪದಾಧಿಕಾರಿಗಳು ಸಂಘಗಳ ಸದಸ್ಯರುಗಳಿಗೆ ಯೋಜನೆಯ ಹೊಸ ಕಾರ್ಯಕ್ರಮಗಳ ಪರಿಚಯಿಸುವ ಕೆಲಸಗಳನ್ನು ಮಾಡಬೇಕು ಎಂದರು.

ಯೋಜನಾಧಿಕಾರಿ ಸುಧೀರ್ ಹಂಗಳೂರು ಯೋಜನೆಯಿಂದ ನೀಡಲಾಗುವ ಅನುದಾನಗಳ ಕುರಿತು, ಬಡ್ಡಿದರ, ಸಂಘಗಳ ಮೌಲ್ಯವರ್ಧನೆ, ಕುರಿತು ಮಾಹಿತಿ ನೀಡಿದರು.

ಕೃಷಿ ಮೇಲ್ವಿಚಾರಕರಾದ ಪ್ರದೀಪ್ ಕುಮಾರ್ ಸ್ವಾಗತಿಸಿದರು. ಮೇಲ್ವಿಚಾರಕರಾದ ಸಂದೀಪ್ ಕಾರ್ಯಕ್ರಮ ನಿರೂಪಿಸಿ ಎಲ್ಲರಿಗೂ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!