spot_img
Tuesday, September 29, 2026
spot_img

ಮೂವರು ಸಾಧಕರಿಗೆ ಹುಯ್ಯಾರು ಪಠೇಲ್ ಟ್ರಸ್ಟ್ ಪುರಸ್ಕಾರ : ಅ.2ರಂದು ಹೈಕಾಡಿಯಲ್ಲಿ ಟ್ರಸ್ಟ್‌ನ 14ನೇ ವಾರ್ಷಿಕ ದಿನಾಚರಣೆ

ಕುಂದಾಪುರ: ಹುಯ್ಯಾರು ಪಠೇಲ್ ಚಾರಿಟೇಬಲ್ ಟ್ರಸ್ಟ್ ರಿ., ಇದರ 14ನೇ ವರ್ಷದ ವಾರ್ಷಿಕ ದಿನಾಚರಣೆ ಪ್ರಯುಕ್ತ ನೀಡುವ ಪುರಸ್ಕಾರಕ್ಕೆ ರಾಜ್ಯ ಹೋಟೆಲ್ ಮಾಲಿಕರ ಸಂಘ ಬೆಂಗಳೂರು ಇದರ ಗೌರವಾಧ್ಯಕ್ಷರಾದ ಗೋಪಾಲಕೃಷ್ಣ ಶೆಟ್ಟಿ, ಸಹಕಾರಿ ಕ್ಷೇತ್ರದ ಸಾಧಕ, ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಧ್ಯಕ್ಷ ಜಯರಾಮ ಶೆಟ್ಟಿ ಸುರ್ಗೋಳಿ, ಸಾಹಿತ್ಯ, ಕಲೆ, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ರವಿರಾಜ ಹಾಲಂಬಿ ಅವರನ್ನು ಆಯ್ಕೆ ಮಾಡಲಾಗಿದೆ.

ಅ.2 ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಹೈಕಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ರತ್ನಾಕರ ಶೆಟ್ಟಿ ಕೊಳ್ಕೆಬೈಲು ವಹಿಸಲಿದ್ದಾರೆ. ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಲಾಗುವುದು ಎಂದು ಹುಯ್ಯಾರು ಪಠೇಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಉಡುಪಿ ಜಿಲ್ಲಾ ರೈತ ಸಂಘದ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!