spot_img
Thursday, October 1, 2026
spot_img

ಕುಂದಾಪುರ ಜ್ಞಾನವಿಕಾಸ ಕೇಂದ್ರಗಳ ತಾಲೂಕು ಮಟ್ಟದ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಠಿ

ಕುಂದಾಪುರ: ಮಹಿಳೆಯರು ಸ್ವತಂತ್ರವಾಗಿ ಎಲ್ಲಾ ಕ್ಷೇತ್ರದಲ್ಲೂ ಅಭಿವೃದ್ಧಿಯನ್ನು ಹೊಂದುತ್ತಿದ್ದಾರೆ. ಮಹಿಳೆ ಮನೆಯ ಶಕ್ತಿ ಆಕೆ ಸ್ವಾವಲಂಬಿಯಾಗಿ ಬದುಕಿದರೆ ಯಶಸ್ಸು ಸಾಧ್ಯ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸ್ತ್ರೀ ಸಬಲೀಕರಣ, ಮಾಹಿತಿ ಮಾರ್ಗದರ್ಶನ, ಕೌಶಲ್ಯ ಅಭಿವೃದ್ದಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಹೇಳಿದರು.

ಅವರು ಸೆ.30ರಂದು ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕುಂದಾಪುರ ಜ್ಞಾನವಿಕಾಸ ಕೇಂದ್ರಗಳ ತಾಲೂಕು ಮಟ್ಟದ ಮಹಿಳಾ ಸಮಾವೇಶ ಮತ್ತು ವಿಚಾರಗೋಷ್ಠಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಮಣಿಪಾಲ ತಪೋವನದ ಮುಖ್ಯ ವೈದ್ಯಾಧಿಕಾರಿ ಡಾ.ವಾಣಿಶ್ರೀ ಐತಾಳ್ ಕಾರ್ಯಕ್ರಮ ಉದ್ಘಾಟಿಸಿದರು.

ಕುಂದಾಪುರ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಸುಬ್ರಮಣ್ಯ ಶೆಟ್ಟಿ ಮಾತನಾಡಿ, ಇಡೀ ಸಮಾಜದ ಏಳಿಗೆಗೆ ಗಾಮಾಭಿವೃದ್ಧಿ ಯೋಜನೆಯ ಮೂಲಕ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ವಿಶೇಷ ಕೊಡುಗೆಯನ್ನು ನೀಡಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯಿಂದ ಎಷ್ಟೋ ಬಡ ಕುಟುಂಬಗಳ ಮನೆಯಲ್ಲಿ ಬೆಳಕು ಮೂಡಿದೆ ಎಂದರು.

ಬಿಲ್ಲವ ಸೇವಾ ಸಂಘದ ಕಾರ್ಯದರ್ಶಿ ಯೋಗೀಶ್ ಪೂಜಾರಿ, ಕೊಡ್ಲಾಡಿ ಮೂಕಾಂಬಿಕಾ ಪ್ರೌಢಶಾಲೆ ಸಹಶಿಕ್ಷಕಿ ಕೀರ್ತನ ಉಮೇಶ್ ಶೆಟ್ಟಿ, ೨೦ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮ್ಮೇಳಾನಧ್ಯಕ್ಷರಾದ ಯು.ಎಸ್. ಶೆಣೈ, ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭ ತಾಲೂಕಿನ ಸಹಾಯ ಸಂಘದ ಸದಸ್ಯರ ಮಕ್ಕಳಿಗೆ ವೃತ್ತಿಪರ ಶಿಕ್ಷಣದ ಕೋರ್ಸುಗಳಿಗೆ ಕ್ಷೇತ್ರದಿಂದ ನೀಡಲಾಗುವ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ಮಂಜೂರಾತಿ ಪತ್ರವನ್ನು ಹಸ್ತಾಂತರಿಸಲಾಯಿತು.

ಕೃಷಿ ಮೇಲ್ವಿಚಾರಕ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು. ಕುಂದಾಪುರ ತಾಲೂಕಿನ ಯೋಜನಾಧಿಕಾರಿ ಉಮೇಶ್ ಶೆಟ್ಟಿ ಎಚ್ ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!