spot_img
Friday, October 2, 2026
spot_img

ಕುಂದಾಪುರ ಎಜುಕೇಶನ್ ಸೊಸೈಟಿ: ‘ವಿಕಸನ ಕಲಿಕೆಯನ್ನು ಸಬಲೀಕರಿಸುವತ್ತ ಒಂದು ಹೆಜ್ಜೆ’ ವಿಶೇಷ ಕಾರ್ಯಾಗಾರ

ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್.ಎಮ್. ಹಾಗೂ ವಿ.ಕೆ.ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಶಾಲೆಗಳ ವತಿಯಿಂದ ಶಿಕ್ಷಕರಿಗಾಗಿ ವಿಕಸನ ಕಲಿಕೆಯನ್ನು ಸಬಲೀಕರಿಸುವತ್ತ ಒಂದು ಹೆಜ್ಜೆ ಎಂಬ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಾಗಾರಕ್ಕೆ ಪಿ. ಎಮ್. ಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್ ಚಿತ್ತೂರು ಶಾಲೆಯ ಸಹ ಶಿಕ್ಷಕರಾದ ಗುರುಪ್ರಸಾದ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಪರಿಣಾಮಕಾರಿ ಬೋಧನಾ ವಿಧಾನಗಳು, ಹೊಸ ಕಲಿಕಾ ಚಿಂತನೆಗಳು ಹಾಗೂ ವಿದ್ಯಾರ್ಥಿಗಳ ಕಲಿಕೆಯನ್ನು ಸಬಲೀಕರಿಸುವ ಕುರಿತು ಮಾರ್ಗದರ್ಶನ ನೀಡಿದರು.

ಉಪಪ್ರಾಂಶುಪಾಲರಾದ ಶ್ರೀಮತಿ ಶುಭಾ ಕೆ.ಎನ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಾಗಾರದಲ್ಲಿ ಎಲ್ಲಾ ವಿಭಾಗಗಳ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಪವಿತ್ರಾ ಎಸ್. ಪುತ್ರನ್ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!