spot_img
Saturday, October 3, 2026
spot_img

ಚಿತ್ರಕೂಟ ಆಯುರ್ವೇದ ಹಬ್ಬಕ್ಕೆ ಖ್ಯಾತ ನಟ ನೀನಾಸಂ ಸತೀಶ್ ಶುಭ ಹಾರೈಕೆ| ಡಾ. ರಾಜೇಶ್ ಬಾಯರಿ ಅವರ ವಿನೂತನ ಪರಿಕಲ್ಪನೆಯಲ್ಲಿ ಅ.4ರಂದು ಆರೋಗ್ಯ ಸಂಭ್ರಮ

ಕುಂದಾಪುರ:  ನಮ್ಮ ಮಣ್ಣಿನ ನೈಜ ಪರಂಪರೆ ಹಾಗೂ ಪ್ರಾಚೀನ ಚಿಕಿತ್ಸಾ ಪದ್ಧತಿಯಾದ ಆಯುರ್ವೇದವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಲೂರಿನ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದಲ್ಲಿ ಆಯೋಜಿಸಲಾಗಿರುವ ‘ಚಿತ್ರಕೂಟ ಆಯುರ್ವೇದ ಹಬ್ಬ 2026’ಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ನೀನಾಸಂ ಸತೀಶ್ ಶುಭ ಹಾರೈಸಿದ್ದಾರೆ.
‘ಇಂದಿನ ಒತ್ತಡದ ಬದುಕಿನಲ್ಲಿ ನೈಸರ್ಗಿಕ ಜೀವನಶೈಲಿ ಮತ್ತು ಆಯುರ್ವೇದದ ಮಹತ್ವವನ್ನು ಪ್ರತಿಯೊಬ್ಬರೂ ಅರಿಯಬೇಕಿದ್ದು, ಹಳ್ಳಿಯ ಮಡಿಲಿನಲ್ಲಿ ನಡೆಯುತ್ತಿರುವ ಇಂತಹ ಅಪರೂಪದ ಆಯುರ್ವೇದ ಹಬ್ಬಕ್ಕೆ ಸಾರ್ವಜನಿಕರು ಕುಟುಂಬ ಸಮೇತರಾಗಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಖ್ಯಾತ ಆಯುರ್ವೇದ ತಜ್ಞ ಡಾ. ರಾಜೇಶ್ ಬಾಯರಿ ಅವರ ವಿನೂತನ ಪರಿಕಲ್ಪನೆಯಲ್ಲಿ ಈ ಮಹೋತ್ಸವ ರೂಪುಗೊಂಡಿದೆ. ಇದೇ ಅಕ್ಟೋಬರ್ 4ರ ಭಾನುವಾರದಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಆಲೂರಿನ ಕಳಿಯಲ್ಲಿರುವ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯದ 18 ಎಕರೆ ಹಸಿರು ಪರಿಸರದಲ್ಲಿ ಈ ಹಬ್ಬ ನಡೆಯಲಿದ್ದು, ಸಾರ್ವಜನಿಕರಿಗೆ ಪ್ರವೇಶ ಸಂಪೂರ್ಣ ಉಚಿತವಾಗಿದೆ.
ಡಾ. ರಾಜೇಶ್ ಬಾಯರಿ ಕಲ್ಪನೆಯಲ್ಲಿ ಮೂಡಿಬಂದಿರುವ ಚಿತ್ರಕೂಟ ಆಯುರ್ವೇದ ಚಿಕಿತ್ಸಾಲಯವು ವಿಶ್ವದ 30ಕ್ಕೂ ಹೆಚ್ಚು ದೇಶಗಳ ಜನರಿಗೆ ಅಧಿಕೃತ ಆಯುರ್ವೇದ ಚಿಕಿತ್ಸೆ ನೀಡಿ ಗಮನಸೆಳೆದಿದೆ. ಭಾರತೀಯ ಪರಂಪರೆ ಮೇಲಿ ವಿಶ್ವಾಸ ಇರಿಸಿಕೊಂಡಿರುವ ವಿದೇಶದ ಮಂದಿ ಇಲ್ಲಿ ತುಂಬಾ ಸಂಖ್ಯೆಯಲ್ಲಿ ಬರುತ್ತಾರೆ. ಭಾನುವಾರದ ರಜಾ ದಿನದಂದು ಸಾರ್ವಜನಿಕರು, ಯುವಜನರು, ಮಕ್ಕಳು ಮತ್ತು ಕುಟುಂಬ ಸಮೇತರಾಗಿ ಈ ಆರೋಗ್ಯ ಹಬ್ಬದಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9187471578 ಸಂಪರ್ಕಿಸಬಹುದು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!