spot_img
Saturday, October 3, 2026
spot_img

ಪ್ರತಿ ಅರ್ಜಿಗೂ 21 ದಿನದಲ್ಲಿ ಪರಿಹಾರ ನೀಡಿ- ಪ್ರಜಾಸೇವೆ ಆಂದೋಲನದಲ್ಲಿ ಶಾಸಕ ಕಿರಣ್ ಕೊಡ್ಗಿ

ಕುಂದಾಪುರ: ಕಾಳಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಕ್ವಾಡಿ, ಅಸೋಡು ಮತ್ತು ಕಾಳಾವರ ಗ್ರಾಮಗಳಲ್ಲಿ ಪ್ರಜಾಸೇವೆ ಆಂದೋಲನ’ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಕಂದಾಯ, ಪಂಚಾಯತ್ ರಾಜ್, ಆರೋಗ್ಯ, ಕೃಷಿ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ನಾಗರಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು, “ನಾವು ನೀಡುವ ಭರವಸೆ ಕಾಗದದ ಮೇಲೆ ಉಳಿಯಬಾರದು. ಪ್ರತಿ ಅರ್ಜಿಗೂ ಸ್ವೀಕೃತಿ ನೀಡಿ, 21 ದಿನಗಳ ಒಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದು ಕೇವಲ ಅಹವಾಲು ಸ್ವೀಕಾರ ಕಾರ್ಯಕ್ರಮವಲ್ಲ, ಪರಿಹಾರ ನೀಡುವ ಆಂದೋಲನ” ಎಂದರು.

ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಪ್ರಾಸ್ತಾವಿಕವಾಗಿ ಕಾರ್ಯಕ್ರಮದ ರೂಪುರೇಷೆ ವಿವರಿಸಿದರು.

ವೇದಿಕೆಯಲ್ಲಿ ತಾ.ಪಂ. ಇ‌ಒ ಮಹೇಶ್ ಕೆ.ಜಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಡಿವೈ‌ಎಸ್ಪಿ ಎಚ್.ಡಿ. ಕುಲಕರ್ಣಿ, ಗ್ರಾ.ಪಂ ಆಡಳಿತಾಧಿಕಾರಿ, ನಿಕಟಪೂರ್ವ ಸದಸ್ಯರು, ವಿವಿಧ ಇಲಾಖಾಧಿಕಾರಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!