spot_img
Monday, October 5, 2026
spot_img

ವಂಡ್ಸೆ ಗ್ರಾಮ ಪಂಚಾಯಿತಿಗೆ ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಅಧೀನ ಕಾರ್ಯದರ್ಶಿ ಭೇಟಿ

ವಂಡ್ಸೆ :ಭಾರತ ಸರಕಾರದ ಪಂಚಾಯತ್ ರಾಜ್ ಸಚಿವಾಲಯದ ಅಧೀನ ಕಾರ್ಯದರ್ಶಿ ಪಂಕಜ್ ಕುಮಾರ್ ರವರು ಅ.5ರಂದು ವಂಡ್ಸೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದರು.

2025ನೇ ಸಾಲಿನಲ್ಲಿ ವಂಡ್ಸೆ ಗ್ರಾಮ ಪಂಚಾಯತ್ ಗೆ “ಆರೋಗ್ಯಕರ ಗ್ರಾಮ ಪಂಚಾಯತ್” ವಿಭಾಗದಲ್ಲಿ “ರಾಷ್ಟ್ರೀಯ ಪಂಚಾಯತ್ ರಾಜ್ ಪುರಸ್ಕಾರ” ಲಭಿಸಿರುವುದರಿಂದ ಗ್ರಾಮ ಪಂಚಾಯತ್ ಕಾರ್ಯವೈಖರಿಯನ್ನು ತಿಳಿದುಕೊಳ್ಳುವುದು ಭೇಟಿಯ ಉದ್ದೇಶವಾಗಿರುತ್ತದೆ. ಈ ಸಂದರ್ಭದಲ್ಲಿ ವಂಡ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡುತ್ತಿರುವ ಸೇವೆಗಳ ಬಗ್ಗೆ ವೈದ್ಯಾಧಿಕಾರಿ ಎಮ್.ಜಿ. ರಾಮ ರವರಿಂದ ಮಾಹಿತಿ ಪಡೆದರು.

ವಂಡ್ಸೆ ನಿರಾಮಯ ಸೊಸೈಟಿಗೆ ಭೇಟಿ ನೀಡಿ ಸೊಸೈಟಿಯ ಮೂಲಕ ಹಿರಿಯ ನಾಗರಿಕರು ಹಾಗೂ ದೀರ್ಘಕಾಲೀನ ಮತ್ತು ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ನೀಡಲಾಗುತ್ತಿರುವ ಸೇವೆಗಳ ಬಗ್ಗೆ ಮಾಹಿತಿ ಪಡೆದು ಪ್ರಶಂಸೆ ವ್ಯಕ್ತ ಪಡಿಸಿದರು. ನಂತರ ವಂಡ್ಸೆ ಬಹು ಗ್ರಾಮ ಪಂಚಾಯತ್ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಲಾಭದಾಯಕವಾಗಿ ನಡೆಯುತ್ತಿರುವ ಘಟಕದ ಬಗ್ಗೆ ಮಾಹಿತಿ ಪಡೆದು ಕೊಂಡರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸುಸ್ಥಿರ ಅಭಿವೃದ್ಧಿ ಕೋಶದ ನೋಡಲ್ ಅಧಿಕಾರಿ ಅನಿಲ್ ಶೆಟ್ಟಿ, ನಿರಾಮಯ ಸೊಸೈಟಿ ಅಧ್ಯಕ್ಷ ಉದಯ ಕುಮಾರ ಶೆಟ್ಟಿ, ಕುಂದಾಪುರ ತಾಲೂಕು ಪಂಚಾಯತ್ ನ ಸಹಾಯಕ ನಿರ್ದೇಶಕರಾದ ಸುಧಾಕರ ಶೆಟ್ಟಿ, ಬೈಂದೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಪೂರ್ಣಿಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಭಾಗ್ಯವತಿ, ಪಂಚಾಯತ್ ಕಾರ್ಯದರ್ಶಿ ಸುರೇಶ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು, ನಿರಾಮಯ ಸೊಸೈಟಿ ಸಿಬ್ಬಂದಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಹಾಗೂ ಎಸ್.ಎಲ್.ಆರ್.ಎಮ್. ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!