spot_img
Tuesday, October 13, 2026
spot_img

ಕುಂದಾಪುರದಲ್ಲಿ ಯುಜಿಡಿ ಆರಂಭಗೊಂಡು 11 ವರ್ಷ: ಅಧಿಕಾರಿಗಳ ಮೇಲೆ ಪೌರಾಡಳಿತ ಸಚಿವ ಹೆಚ್.ಸಿ ಬಾಲಕೃಷ್ಣ ಕೆಂಡಮಂಡಲ

ಸರಕಾರದ ಹಣ, ಹುಡುಗಾಟ ಆಡ್ತಾ ಇದ್ದೀರೆನ್ರಿ…. ಹಿನ್ನೆಡೆಗೆ ಕಾರಣರಾದ ಅಂದಿನ ಮುಖ್ಯಾಧಿಕಾರಿ ಸಹಿತ ಸಂಬಂಧಪಟ್ಟವರ ಮೇಲೆ ಕ್ರಮಕೈಗೊಳ್ಳಿ

ಕುಂದಾಪುರ: 11 ವರ್ಷಗಳ ಹಿಂದೆ ಯೋಜನೆ ಆರಂಭಗೊಂಡು ಇನ್ನೂ ಕೂಡಾ ಹಾಗೆಯೇ ಇದೆ ಎಂದರೆ ಏನರ್ಥ? ಭೂಸ್ವಾದೀನ ಮಾಡಿಕೊಳ್ಳದೆ ಯೋಜನೆ ಆರಂಭಿಸಿದ್ದೀರಾ? ಅಂದಿನ ಮುಖ್ಯಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳು ಏನು ಮಾಡ್ತಾ ಇದ್ದರು? ಸರಕಾರದ ಹಣ, ಹುಡುಗಾಟ ಆಡ್ತಾ ಇದ್ದೀರೆನ್ರಿ, ಯೋಜನೆ ಹಿನ್ನೆಡೆಗೆ ಕಾರಣರಾದ ಅಂದಿನ ಅಧಿಕಾರಿಗಳು ಸಹಿತ ಎಲ್ಲರೂ ಇದರಲ್ಲಿ ಹೊಣೆಗಾರರು, ಅವರ ಮೇಲೆ ಕ್ರಮ ಆಗಬೇಕು” ಇದು ಪೌರಾಡಳಿತ ಸಚಿವ ಹೆಚ್.ಸಿ ಬಾಲಕೃಷ್ಣ ಕುಂದಾಪುರ ಪುರಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತಗೆದುಕೊಂಡ ಪರಿ.

ಅವರು ಅ.13ರಂದು ಕುಂದಾಪುರ ಪುರಸಭೆಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಉಡುಪಿ ಜಿಲ್ಲೆ ಹಾಗೂ ಪುರಸಭೆ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಪೌರಾಡಳಿತ ಇಲಾಖೆ ಕುಂದಾಪುರ ಪುರಸಭೆಯ ಯುಜಿಡಿ ಕಾಮಗಾರಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಯುಜಿಡಿ ಅಧಿಕಾರಿಗಳ ಬಗ್ಗೆ ಗರಂ ಆಗಿ ಪ್ರತಿಕ್ರಿಯಿಸಿದ ಸಚಿವರು, ಒಂದು ಯೋಜನೆ ಇಷ್ಟು ವಿಳಂಬವಾಗಿದೆ ಎಂದರೆ ಜನ ಸರಕಾರದ ಮೇಲೆ ಯಾವ ರೀತಿ ಅಭಿಪ್ರಾಯ ಹೊಂದಬೇಕು, 2017ರಲ್ಲಿ ಮುಗಿಯಬೇಕಾದ ಯೋಜನೆ ಇನ್ನೂ ಮುಗಿದಿಲ್ಲ. ಈ ವೈಫಲ್ಯಕ್ಕೆ ಕಾರಣವೇನು? ಜಿಲ್ಲಾಧಿಕಾರಿಗಳು, ಸಹಾಯಕ ಆಯುಕ್ತರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕ ನಿರ್ಧಾರ ಕೈಗೊಳ್ಳಲಿಲ್ಲ ಏಕೆ? ಎಂದು ಅವರು ಪ್ರಶ್ನಿಸಿದರು.

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಸುಮಾರು 56.54 ಕೋಟಿ ರೂ ವೆಚ್ಚದಲ್ಲಿ ಯುಜಿಡಿ ಕಾಮಗಾರಿ ಕೈಗೊಳ್ಳಲು ಸರಕಾರದಿಂದ ಅನುಮೋದನೆ ದೊರಕಿದ್ದು, ಸುಮಾರು 11 ವಷರ್Àಗಳು ಕಳೆದರೂ ಅನುದಾನದ ಕೊರತೆ, ಭೂಸ್ವಾಧೀನ ಸೇರಿದಂತೆ ಮತ್ತಿತರ ಕಾರಣಗಳಿಂದ ಕಾಮಗಾರಿ ಪೂರ್ಣಗೊಂಡಿಲ್ಲ. ಸಹಾಯಕ ಕಮಿಷನರ್ ಅವರು ಸಂಬಂಧಪಟ್ಟ ಅಧಿಕಾರಿಗಳು, ಅಭಿಯಂತರುಗಳೊಂದಿಗೆ ಸ್ಥಳ ಭೇಟಿ ಮಾಡಿ, ಕಾಮಗಾರಿ ವಿಳಂಬಕ್ಕೆ ಕಾರಣರಾದವರ ವಿವರ, ಕಾಮಗಾರಿ ಕೈಗೊಳ್ಳಲು ಉಂಟಾದ ಅಡಚಣೆಯ ಮಾಹಿತಿ, ಕಾಮಗಾರಿ ಮುಂದುವರೆಸಲು ಅವಶ್ಯವಿರುವ ಅನುದಾನ ಸೇರಿದಂತೆ ಮತ್ತಿತರ ಸಮರ್ಪಕ ವಿವರಗಳನ್ನು ಸಲ್ಲಿಸುವಂತೆ ತಿಳಿಸಿದ ಅವರು, ಯೋಜನೆಯ ವಿಳಂಬಕ್ಕೆ ಉಂಟಾಗಿರುವ ವರದಿಗಳ ಬಗ್ಗೆ ಬೆಂಗಳೂರಿನಲ್ಲಿ ಪ್ರತ್ಯೇಕ ಸಭೆ ಕರೆದು ಸರಕಾರದ ಹಂತದಲ್ಲಿ ಕೂಲಂಕುಷÀವಾಗಿ ಚರ್ಚಿಸಿ ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಪೌರ ಕಾರ್ಮಿಕರುಗಳಿಗೆ ಖಾಯಂ ವಸತಿಗೃಹ ನಿರ್ಮಾಣಕ್ಕೆ 2 ಎಕರೆ ಜಾಗವನ್ನು ನಗರ ಪ್ರದೇಶದಲ್ಲಿ ಗುರುತಿಸಿ ಅವರುಗಳಿಗೆ ನೀಡುವುದರೊಂದಿಗೆ ಸಕ್ರೀಯ ಪೌರಕಾರ್ಮಿಕರು ನಗರದಲ್ಲೇ ವಾಸವಿರುವಂತೆ ನೋಡಿಕೊಳ್ಳಬೇಕು ಎಂದ ಅವರು, ಸ್ವಚ್ಛ ಭಾರತ್ ಮಿಷÀನ್ ಯೋಜನೆಯನ್ನು ನಗರದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದರು.

ತೆರಿಗೆ ಪಾವತಿ, ನಳ್ಳಿ ನೀರಿನ ಶುಲ್ಕ ಪಾವತಿಗೆ ಸಂಬಂಧಿಸಿದಂತೆ ನಿಗಧಿತ ಗುರಿ ಸಾಧನೆಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮುಂದಾಗಬೇಕು. ನಗರದ ಸ್ವಚ್ಛತೆಗೆ ಸ್ಥಳೀಯಾಡಳಿತಗಳು ಮೊದಲ ಆದ್ಯತೆ ನೀಡಬೇಕು. ದಾರಿದೀಪ ಅಳವಡಿಕೆ ಅವುಗಳ ನಿರ್ವಹಣೆ ಸೇರಿದಂತೆ ಅಗತ್ಯ ಸೌಕರ್ಯ ಕಲ್ಪಿಸಬೇಕು ಎಂದರು.

ಪುರಸಭೆಗಳ ಮುಖ್ಯಾಧಿಕಾರಿಗಳು ಬೆಳಗ್ಗೆ 6ಕ್ಕೆ ಕಚೇರಿಯಲ್ಲಿ ಹಾಜರಿದ್ದು, ಹಾಜರಾತಿ ದಾಖಲಿಸಬೇಕು. 6 ರಿಂದ 9 ರ ವರೆಗೆ ಸ್ಪಾಟ್ ಇನ್ಸ್ಪೆಕ್ಷನ್ ಕೈಗೊಳ್ಳಬೇಕು. ಅಧಿಕಾರಿಗಳು ಮಧ್ಯಾಹ್ನ 3.30 ರಿಂದ 5.30 ರ ವರೆಗೆ ಕಚೇರಿಗಳಲ್ಲಿ ಹಾಜರಿದ್ದು, ಸಾರ್ವಜನಿಕರ ಭೇಟಿಗೆ ಅವಕಾಶ ಮಾಡಿಕೊಡಬೇಕು. ತಿಂಗಳಲ್ಲಿ ಒಂದು ಬಾರಿ ಸ್ಥಳೀಯ ಸಂಸ್ಥೆಗಳಿಗೆ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಭೇಟಿ ನೀಡಿ, ಅಲ್ಲಿನ ಕೆಲಸ ಕಾರ್ಯಗಳನ್ನು, ಸಮಸ್ಯೆಗಳನ್ನು ಪರಿಶೀಲಿಸಬೇಕು ಎಂದ ಅವರು ಮಧ್ಯಾಹ್ನದ ಅವಧಿಯಲ್ಲಿ ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅಹವಾಲು / ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದರು.

ಸಭೆಯಲ್ಲಿ ಕುಂದಾಪುರ ಶಾಸಕ ಎ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ಕುಂದಾಪುರ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ, ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್, ಜಿಲ್ಲಾ ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ ಕ್ರಾಸ್ಟೋ, ನಗರಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಶೆಟ್ಟಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ್ ಜೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

 

 

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!