spot_img
Tuesday, October 20, 2026
spot_img

ಕೊಲ್ಲೂರಿನಲ್ಲಿ ಸಂಭ್ರಮದ ಮಹಾನವಮಿ ರಥೋತ್ಸವ ಸಂಪನ್ನ ತೇರು ಎಳೆದು ಸಂಭ್ರಮಿಸಿದ ಸಹಸ್ರಾರು ಭಕ್ತರು

ಕೊಲ್ಲೂರು: ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಮಹಾನವರಾತ್ರಿ ಮಹೋತ್ಸವ ಅಂಗವಾಗಿ ಮಂಗಳವಾರ ಬೆಳಗ್ಗೆ ೮=೪೫ಕ್ಕೆ ವೃಶ್ಚಿಕ ಲಗ್ನ ಮೂರ್ತದಲ್ಲಿ ಸಾವಿರಾರು ಭಕ್ತರು ಉಪಸ್ಥಿತಿಯಲ್ಲಿ ಶ್ರೀ ಮೂಕಾಂಬಿಕಾ ದೇವಿಯ ವೈಭವದ ಮಹಾನವಮಿ ರಥೋತ್ಸವ ಸಂಪನ್ನಗೊಂಡಿತು.

ನವರಾತ್ರಿ ಪ್ರಾರಂಭವಾದ ದಿನದಿಂದ ಮಹಾನವಮಿಯ ತನಕವೂ ದೇವಸ್ಥಾನದಲ್ಲಿ ವಿವಿಧ ಪೂಜೆ ಹಾಗೂ ಧಾರ್ಮಿಕ ಆಚರಣೆಯನ್ನು ನಡೆಸಲಾಗಿತ್ತು. ಮಂಗಳವಾರ ಬೆಳಗ್ಗೆ ತಂತ್ರಿ ರಾಮಚಂದ್ರ ಅಡಿಗರ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ವಿಧಿಗಳ ಬಳಿಕ ದೇಗುಲದಿಂದ ಹೊರಕ್ಕೆ ತರಲಾದ ಶ್ರೀ ದೇವಿಯ ಉತ್ಸವ ಮೂರ್ತಿಯ ಪ್ರದಕ್ಷಿಣೆ ಹಾಗೂ ಬಲಿ ಸೇವೆ ನಡೆಸಿದ ಬಳಿಕ ಶ್ರೀ ದೇವಿಯನ್ನು ಅಲಂಕರಿಸಿದ ಪುಷ್ಪ ರಥದಲ್ಲಿ ಕುಳ್ಳಿರಿಸಲಾಯಿತು.

ರಥ ಪೂಜೆ ನಡೆಸಿದ ತಂತ್ರಿಗಳು ಬಳಿಕ ಶ್ರೀದೇವಿಗೆ ಪೂಜೆ ನೆರವೇರಿಸಿ, ಮಂಗಳಾರತಿ ಎತ್ತಿದ ಬಳಿಕ, ಸೇರಿದ್ದ ಸಾವಿರಾರು ಜನರು ಶ್ರೀ ದೇವಿಯ ಜಯ ಘೋಷದೊಂದಿಗೆ ರಥವನ್ನು ಎಳೆದರು. ದೇವಳದ ಒಳ ಪ್ರಾಂಗಣದಲ್ಲಿ ಒಂದು ಸುತ್ತು ರಥ ಕ್ರಮಿಸಿತು.

ಮಂಗಳವಾರ ನಡೆದ ಮಹಾನವರಾತ್ರಿ ಉತ್ಸವಕ್ಕೆ ದೇಶದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಕೋಟಿ ಹರಿದು ಬಂದಿತ್ತು. ಭಕ್ತಾಭಿಮಾನಿಗಳ ನೂಕುನುಗ್ಗಲು ಆಗದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತಗ್ಗರ್ಸೆ, ದೇವಳದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ತುಂಬಿಗೆ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಪಿ.ವಿ.ಅಭಿಲಾಷ್, ರಘುರಾಮ ದೇವಾಡಿಗ ಆಲೂರು, ಮಹಾಲಿಂಗ ನಾಯ್ಕ, ರಾಜೇಶ್ ಕಾರಂತ್, ಸುರೇಂದ್ರ ಶೆಟ್ಟಿ, ಧನಾಕ್ಷೀ ಪೂಜಾರಿ, ಸುಧಾ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಸುಕುಮಾರ್ ಶೆಟ್ಟಿ , ಕೊಲ್ಲೂರು ಮಾಜಿ ತಾಲೂಕು ಪಂಚಾಯತ್ ಸದಸ್ಯ ರಮೇಶ್ ಗಾಣಿಗ, ಬೈಂದೂರು ತಾಲೂಕು ಕೆಡಿಪಿ ಸದಸ್ಯ ಗ್ರೀಷ್ಮಾ ಗಿರಿಧರ ಭಿಡೆ, ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿ, ಮುಂತಾದವರಿದ್ದರು. ಬುಧವಾರ ವಿಜಯದಶಮಿ ಆಚರಣೆಯ ಅಂಗವಾಗಿ ಬೆಳಿಗ್ಗೆ ೪ ಗಂಟೆಯಿಂದ ಪುಟಾಣಿಗಳಿಗೆ ದೇವಸ್ಥಾನದ ಋತ್ವೀಜರ ಮೂಲಕ ಅಕ್ಷರಾಭ್ಯಾಸ ಕಾರ್ಯಕ್ರಮ, ಕದಿರು ಹಬ್ಬದ ಆಚರಣೆ ಹಾಗೂ ನವನ್ನಾಪ್ರಾಶನ ಹಾಗೂ ಸಂಜೆ ವಿಜಯೋತ್ಸವ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!