spot_img
Friday, October 23, 2026
spot_img

ಎಸ್‌ಐ‌ಆರ್ ವಿರುದ್ಧ ಪ್ರತಿಭಟನಾ ವಾಹನಜಾಥಾ, ಸಾರ್ವಜನಿಕ ಸಭೆ

ಕುಂದಾಪುರ : ಮತದಾನದ ಪಾರದರ್ಶಕತೆ ನಮ್ಮ ಹಕ್ಕಾಗಬೇಕು, ಇವತ್ತು ಕೇಂದ್ರ ಸರ್ಕಾರದ ನೀತಿ ಪ್ರಜಾಪ್ರಭುತ್ವ ವ್ಯವಸ್ಥೆಗೇ ಮಾರಕವಾಗಿದೆ. ಈ ಬಗ್ಗೆ ಜಾಗೃತಿ ಮೂಡಬೇಕಾಗಿದೆ. ಪ್ರಜಾಪ್ರಭುತ್ವವನ್ನು ಬಲಪಡಿಸುವ ನಿಟ್ಟಿನಲ್ಲಿಯೂ ಪ್ರತಿಯೊಬ್ಬರೂ ಕೂಡಾ ಪ್ರತಿರೋದ ತೋರಲೇಬೇಕಾಗಿದೆ ಎಂದು ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಹೇಳಿದರು.

ಅವರು ಬ್ಲಾಕ್ ಕಾಂಗ್ರೆಸ್ ಸಮಿತಿ ಕುಂದಾಪುರ ಹಾಗೂ ಇತರ ಸಹಭಾಗಿ ಸಂಘಟನೆಗಳ ವತಿಯಿಂದ ಕುಂದಾಪುರದಲ್ಲಿ ನಡೆದ ಎಸ್.ಐ.ಆರ್ ಅಕ್ರಮಗಳ ವಿರುದ್ಧ ಪ್ರತಿಭಟನಾರ್ಥ ವಾಹನ ಜಾಥಾ ಹಾಗೂ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.
ಎಸ್.ಐ.ಆರ್ ಪ್ರಕ್ರಿಯೆಯಲ್ಲಿನ ಅಕ್ರಮ ಆರೋಪಗಳ ವಿರುದ್ಧ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿದೆ. ಚುನಾವಣಾ ಆಯೋಗ ಸ್ವಾಯತ್ತತೆಯನ್ನು ಕಾಯ್ದುಕೊಳ್ಳಬೇಕು, ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಿಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆದೂರು ಸದಾನಂದ ಶೆಟ್ಟಿ, ಸಹಭಾಳ್ವೆಯ ರಾಮಕೃಷ್ಣ ಹೇರ್ಳೆ, ಕಾಂಗ್ರೆಸ್ ಮುಖಂಡ ದಿನೇಶ ಹೆಗ್ಡೆ ಮೊಳಹಳ್ಳಿ, ಸಿ.ಐಟಿಯುವ ಮುಖಂಡರಾದ ಚಂದ್ರಶೇಖರ, ಕಾಂಗ್ರೆಸ್ ಜಿಲ್ಲಾ ವಕ್ತಾರ ವಿಕಾಸ ಹೆಗ್ಡೆ, ದಲಿತ ಸಂಘರ್ಷ ಸಮಿತಿಯ ಮಂಜುನಾಥ ಗಿಳಿಯಾರು ಮೊದಲಾದವರು ಮಾತನಾಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಮಲ್ಯಾಡಿ ಶಿವರಾಮ ಶೆಟ್ಟಿ, ಮಹಿಳಾ ಕಾಂಗ್ರೆಸ್‌ನ ದೇವಕಿ ಸಣ್ಣಯ್ಯ,ಹರೀಶ ಕಿಣಿ, ದಿನೇಶ ಪುತ್ರನ್, ದಿವಾಕರ ಕುಂದರ್, ಚಂದ್ರಶೇಖರ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕುಂದಾಪುರದ ನೆಹರೂ ಮೈದಾನದಿಂದ ವಾಹನ ಜಾಥಾ ಆರಂಭವಾಗಿ, ತೆಕ್ಕಟ್ಟೆ-ಕೊಮೆ ಮಾರ್ಗವಾಗಿ ಕುಂದಾಪುರ ಕೋಡಿಗೆ ತೆರಳಿ ಅಲ್ಲಿಂದ ವಿನಾಯಕ ಮಾರ್ಗವಾಗಿ ಶಾಸ್ತ್ರಿ ಸರ್ಕಲ್‌ಗೆ ಆಗಮಿಸಿತು. ಶಾಸ್ತ್ರಿ ಸರ್ಕಲ್‌ನಲ್ಲಿ ಸಾರ್ವಜನಿಕ ಸಭೆ ನಡೆಯಿತು. ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು.

ವಿನೋದ ಕ್ರಾಸ್ಟೋ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!