spot_img
Saturday, October 24, 2026
spot_img

ಯಡಾಡಿ ಮತ್ಯಾಡಿ ವಿದ್ಯಾರಣ್ಯ ಕ್ಯಾಂಪಸ್ ನಲ್ಲಿ ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಕುಂದಾಪುರ: ಕುಂದಾಪುರ ತಾಲೂಕು ಯಡಾಡಿ-ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಶಾಲಾ ಶಿಕ್ಷಣ ಇಲಾಖೆ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಸುಜ್ಞಾನ ಎಜುಕೇಷನ್ ಟ್ರಸ್ಟ್ ಆಶ್ರಯದಲ್ಲಿ ಶುಕ್ರವಾರ 2026-27ನೇ ಸಾಲಿನ ತಾಲ್ಲೂಕು ಮಟ್ಟದ 14 ಮತ್ತು 17 ವರ್ಷ ವಯಸ್ಸಿನೊಳಗಿನ ಬಾಲಕ-ಬಾಲಕಿಯರ ಕ್ರೀಡಾಕೂಟ ನಡೆಯಿತು.

ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು, ಪರಿಶ್ರಮ, ಬದ್ದತೆ, ದೂರದೃಷ್ಟಿ ಶಿಕ್ಷಣ ಸಂಸ್ಥೆಯ ಬೆಳವಣಿಗೆಗೆ ಅಗತ್ಯ. ಉತ್ತಮ ಸಾಧನೆ ಮಾಡಿರುವ ಶಿಕ್ಷಣ ಸಂಸ್ಥೆಗಳನ್ನು ಇತರರು ಮಾದರಿಯಾಗಿ ಸ್ವೀಕರಿಸಿ, ತಮ್ಮ ಸಂಸ್ಥೆಗಳ ಅಭಿವೃದ್ಧಿಗೆ ಶ್ರಮಿಸಬೇಕು. ವಿದ್ಯಾರಣ್ಯ ಶಿಕ್ಷಣ ಸಂಸ್ಥೆ ಅಲ್ಪಾವಧಿಯಲ್ಲಿಯೇ ವಿದ್ಯಾರ್ಥಿಗಳ ಕಲಿಕೆ, ಪ್ರತಿಭಾನ್ವೇಷಣೆಯಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದೆ. ಅಂಕ ಗಳಿಕೆ ಮಾತ್ರವಲ್ಲದೆ ಕ್ರೀಡೆ, ಸಾಂಸ್ಕೃತಿಕವಾಗಿಯೂ ವಿದ್ಯಾರ್ಥಿಯಲ್ಲಿ ಅಡಗಿರುವ ಪ್ರತಿಭೆ ಗುರುತಿಸುವಂತಾಗಬೇಕು ಎಂದರು.

ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆ ಮಾತನಾಡಿ, ನಿರಂತರ ಅಭ್ಯಾಸ, ಸೂಕ್ತ ತರಬೇತಿ, ಮಾರ್ಗದರ್ಶನದ ಮೂಲಕ ಕ್ರೀಡೆಯಲ್ಲಿ ಭವಿಷ್ಯದ ಸಾಧನೆ ಸಾಧ್ಯ. ಕ್ರಿಕೆಟ್‌ಗೆ ದೊರೆಯುವ ಜನಪ್ರಿಯತೆ, ಪ್ರೋತ್ಸಾಹ ಅಥ್ಲೆಟಿಕ್ಸ್ ಸೇರಿದಂತೆ ಇತರ ಕ್ರೀಡೆಗಳಿಗೂ ದೊರೆಯಬೇಕು. ಕ್ರೀಡಾಕ್ಷೇತ್ರದಲ್ಲಿಯೂ ಕೂಡಾ ವಿದ್ಯಾರ್ಥಿಗಳು ಬೆಳೆಯಬೇಕು ಎಂದು ಹೇಳಿದರು.

ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಜ್ಞಾನ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಶುಭ ಹಾರೈಸಿದರು.

ಗುತ್ತಿಗೆದಾರರಾದ ಅರುಣ್ ಕುಮಾರ್ ಶೆಟ್ಟಿ ಬಲೂನ್ ಹಾರಿಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್. ಹರಿಪ್ರಸಾದ್ ಶೆಟ್ಟಿ ಕ್ರೀಡಾ ಜ್ಯೋತಿ ಬೆಳಗಿಸಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ವಿವಿಧ ಶಾಲೆಗಳ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.

ಸುಜ್ಞಾನ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಪ್ರತಾಪ್‌ಚಂದ್ರ ಶೆಟ್ಟಿ, ಖಜಾಂಚಿ ಭರತ್ ಕುಮಾರ್ ಶೆಟ್ಟಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಚಂದ್ರ ನಾಯಕ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸತ್ಯನಾರಾಯಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ಶೆಟ್ಟಿ, ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು, ವಿದ್ಯಾರಣ್ಯ ಮತ್ತು ಸುಜ್ಞಾನ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ವಾಲಿಬಾಲ್‌ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಶ್ರೀಹರಿ ಅವರನ್ನು ಗೌರವಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್. ಶೆಟ್ಟಿ ಸ್ವಾಗತಿಸಿದರು. ಸತ್ಯನಾರಾಯಣ ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಲಾಸ್ಯ ಮಧ್ಯಸ್ಥ ಪ್ರತಿಜ್ಞಾವಿಧಿ ಬೋಧಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಚಂದ್ರಶೇಖರ ಬೀಜಾಡಿ, ರತ್ನಾಕರ, ವಿಜಯ ಕುಮಾರ್ ಶೆಟ್ಟಿ ನಿರೂಪಿಸಿದರು. ಸುಜ್ಞಾನ ಪದವಿಪೂರ್ವ ಕಾಲೇಜಿನ ರಜತ್ ಭಟ್ ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!