spot_img
Monday, October 26, 2026
spot_img

ಕಮಲಶಿಲೆಯಲ್ಲಿ ಮಹಿಳಾ ವಿಚಾರಗೋಷ್ಠಿ | ಗ್ರಾಮಾಭಿವೃದ್ಧಿ ಯೋಜನೆಯಿಂದ ಜನರ ಒಗ್ಗೂಡುವಿಕೆ-ಸಚ್ಚಿದಾನಂದ ಚಾತ್ರ

 

  

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ಉಡುಪಿ ಜಿಲ್ಲೆಯ ಕುಂದಾಪುರ-೨ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಕಮಲಶಿಲೆ ಶ್ರೀ ಬ್ರಾಹ್ಮಿದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕಮಲಶಿಲೆ ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಸಚ್ಚಿದಾನಂದ ಚಾತ್ರ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಹೆಗ್ಗಡೆಯವರ ಸಮಾಜಮುಖಿ ಚಿಂತನೆಗಳ ಬಗ್ಗೆ, ಗ್ರಾಮಾಭಿವೃದ್ಧಿ ಯೋಜನೆಯ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಗ್ರಾಮ ಅಭಿವೃದ್ಧಿ ಯೋಜನೆ ಜನರನ್ನು ಒಗ್ಗೂಡಿಸುವ ಕೆಲಸವನ್ನು ಮಾಡುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಗ್ರಾಮಾಭಿವೃದ್ಧಿ ಯೋಜನೆ ಅನ್ನುವಂತದ್ದು ದೊಡ್ಡ ಹೆಮ್ಮರ, ಅದರ ಹಲವಾರು ಮಜಲುಗಳ ಮೂಲಕ ಸಮಾಜವನ್ನು ಅಭಿವೃದ್ಧಿಪಡಿಸುವ ಕಾರ್ಯಕ್ರಮವನ್ನು ಹೆಗ್ಗಡೆಯವರು ಮಾಡುತ್ತಿದ್ದಾರೆ, ಮಾತಶ್ರೀ ಅಮ್ಮನವರ ಜ್ಞಾನವಿಕಾಸ ಕಾರ್ಯಕ್ರಮ ಬಹಳ ಅತ್ಯುತ್ತಮ ಕಾರ್ಯಕ್ರಮ ಎಂದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೆಟ್ಟಿ ವಹಿಸಿದ್ದರು.
ರಾಷ್ಟ್ರೀಯ ಸ್ವಸಹಾಯ ಸಂಘ ತರಬೇತಿ ಸಂಸ್ಥೆ ಉಡುಪಿ ಇಲ್ಲಿನ ಪ್ರಾಂಶುಪಾಲರಾದ ಶ್ರೀಮತಿ ಅನಿತಾ ಶೆಟ್ಟಿ ಮೇಡಮ್ ಅವರು ಕಾರ್ಯಕ್ರಮದ ವಿಚಾರಗೋಷ್ಠಿ ವಿಷಯವಾದ ” ಕುಟುಂಬದ ಪರಿವರ್ತನೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಪಾತ್ರದ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸುಲೇಖ ಶೆಟ್ಟಿ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ನಾಗು ಕುಲಾಲ್, ಕೆ.ಎಸ್. ಮಡಿವಾಳ, ಗೋಪಾಲ್ ಕಾಂಚನ್, ವಾಸುದೇವ ಪೈ, ವಲಯಯಾಧ್ಯಕ್ಷರಾದ ಉದಯ್ ನಾಯಕ್, ಸ್ಥಳೀಯ ಒಕ್ಕೂಟದ ಅಧ್ಯಕ್ಷರಾದ ಸತೀಶ್, ಶೌರ್ಯ ಪ್ರತಿನಿಧಿ ಭಾಗಿರತಿ , ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕವಿತಾ, ಪ್ರದೀಪ್, ಮೇಲ್ವಿಚಾರಕರಾದ ಸಿಂಧು, ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ತಾಲೂಕಿನ ಯೋಚನಾಧಿಕಾರಿ ಸುಧೀರ್ ಹಂಗಳೂರು ಪ್ರಾಸ್ತವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ತಾಲೂಕಿನ ೬೦೦ಕ್ಕೂ ಅಧಿಕ ಜ್ಞಾನವಿಕಾಸ ಕೇಂದ್ರ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ರಂಗೋಲಿ ಹಾಗೂ ಪುಷ್ಪಗುಚ್ಛ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸುಜ್ಞಾನನಿಧಿ ಶಿಷ್ಯವೇತನ ಫಲಾನುಭವಿ ಮಕ್ಕಳಿಗೆ ಮಂಜೂರಾತಿ ಪತ್ರ, ಜ್ಞಾನದೀಪ ಶಿಕ್ಷಕರಿಗೆ ಮಂಜೂರಾತಿ ಪತ್ರವನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯಧಿಕಾರಿ ಕವಿತ ನಿರೂಪಿಸಿ, ಕೃಷಿ ಅಧಿಕಾರಿ ಪ್ರದೀಪ್ ಸ್ವಾಗತಿಸಿ, ಮೇಲ್ವಿಚಾರಕರಾದ ಸಿಂಧು ವಂದಿಸಿದರು. ಬಳಿಕ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!