spot_img
Monday, October 26, 2026
spot_img

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆ, ಕಿರಿಮಂಜೇಶ್ವರ ಅಥ್ಲೆಟಿಕ್ಸ್‌ನಲ್ಲಿ ಮುಂದುವರೆದ ಸಾಧನೆ

ಕಿರಿಮಂಜೇಶ್ವರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಬೈಂದೂರು ಇವರು ವಂಡ್ಸೆಯ ನೆಂಪುವಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಿದ್ದ ಬೈಂದೂರು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯು ವಿಶೇಷ ಸಾಧನೆಗೈದಿತು. ೧೭ರ ವಯೋಮಾನದ ಬಾಲಕಿಯರ ಚಕ್ರ ಎಸೆತ ಮತ್ತು ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ಮುಡಿಗೇರಿಸಿಕೊಂಡ ಜನತಾದ ವಿದ್ಯಾರ್ಥಿನಿ ಶರಣ್ಯಾ ವೈಯಕ್ತಿಕ ಚಾಂಪಿಯನ್ ಗೌರವದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡರು.

ಗುಂಡೆಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಹಾಗೂ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ಜನತಾದ ವಿದ್ಯಾರ್ಥಿನಿ ಕೃತಿಕಾ ಸಹ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದರು.

೧೭ರ ವಯೋಮಾನದ ಬಾಲಕರ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಜನತಾದ ಪ್ರವೀಶ್ ಕಂಚಿನ ಪದಕ ಗಳಿಸಿದರು.

ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸತತ ಸಾಧನೆಗಳೊಂದಿಗೆ ಉತ್ತಮ ಫಲಿತಾಂಶವನ್ನು ನೀಡುತ್ತಿರುವ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯು ಬೈಂದೂರು ತಾಲೂಕಿನಲ್ಲಿ ಅತಿ ಹೆಚ್ಚು ಜನಪ್ರಿಯತೆ ಗಳಿಸುತ್ತಿದೆ. ಆಡಳಿತ ಮಂಡಳಿಯ ಪ್ರೋತ್ಸಾಹ, ನುರಿತ ಅನುಭವಿಗಳ ನಿರಂತರ ತರಬೇತಿ, ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಹಾಗೂ ಸಿಬ್ಬಂದಿ ವರ್ಗದವರ ಬೆಂಬಲದೊಂದಿಗೆ ಜನತಾ ಶಿಕ್ಷಣ ಸಂಸ್ಥೆಯ ಜೈತ್ರಯಾತ್ರೆ ಮುಂದುವರಿದಿದೆ.

ಬೈಂದೂರು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ, ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ- ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!