spot_img
Thursday, October 29, 2026
spot_img

ವಂಡ್ಸೆ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಕರ್ಣಾಟಕ ಬ್ಯಾಂಕ್ ನಿಂದ ಆರ್ಥಿಕ ನೆರವು

ಕುಂದಾಪುರ: ಗ್ರಾಮ ಪಂಚಾಯತ್ ವಂಡ್ಸೆ ಹಾಗೂ ಹಿಂದೂ ರುದ್ರಭೂಮಿ ಸಮಿತಿ ಇವರಿಂದ ನೂತನವಾಗಿ ನಿರ್ಮಾಣಗೊಂಡ ಚಿತಾಗಾರಕ್ಕೆ ಕರ್ಣಾಟಕ ಬ್ಯಾಂಕಿನ ಸಿ.ಎಸ್.ಆರ್ ನಿಧಿಯಿಂದ ಆರ್ಥಿಕ ನೆರವು ನೀಡಲಾಯಿತು.

ಪಂಚಾಯತ್ ಕಾರ್ಯಾಲಯದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬ್ಯಾಂಕಿನ ಎ.ಜಿ.ಎಂ ರಮೇಶ ವೈದ್ಯ ಅವರು ಡಿ.ಡಿಯನ್ನು ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಅವರು ವಂಡ್ಸೆ ಗ್ರಾಮ ಪಂಚಾಯತ್ ಈಗಾಗಲೇ ಎಸ್.ಎಲ್.ಆರ್.ಎಂ., ನಿರಾಮಯ ಸೊಸೈಟಿ ಮೂಲಕ ಗಮನ ಸಳೆದಿದೆ. ಹಿಂದೂ ರುದ್ರಭೂಮಿಯ ಅಭಿವೃದ್ಧಿ ಪಡಿಸುವ ಮೂಲಕ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಾ ಮಾದರಿ ಪಂಚಾಯತ್ ಆಗಿದೆ ಎಂದರು.

ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಉದಯಕುಮಾರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿ ಕರ್ಣಾಟಕ ಬ್ಯಾಂಕ್ ನ ಕಾರ್ಯವೈಖರಿ ಶ್ಲಾಘಿಸಿ ತನ್ನ ಸಿ.ಎಸ್.ಆರ್ ನಿಧಿಯ ಮೂಲಕ ಹಿಂದೂ ರುದ್ರುಭೂಮಿ ಅಭಿವೃದ್ಧಿಗೆ ಸಹಕಾರ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.

ಕರ್ಣಾಟಕ ಬ್ಯಾಂಕ್ ಚಿತ್ತೂರು ಶಾಖಾ ವ್ಯವಸ್ಥಾಪಕರಾದ ಸದಾಶಿವ, ಬ್ಯಾಂಕಿನ ಮುಖ್ಯ ಪ್ರಬಂಧಕರಾದ ಪ್ರಕಾಶ್ಚಂದ್ರ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಉದಯ ಜಿ ಪೂಜಾರಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿ.ಕೆ ಶಿವರಾಮ ಶೆಟ್ಟಿ, ಶ್ರೀನಿವಾಸ ಪೂಜಾರಿ, ಸಂಜೀವ ಪೂಜಾರಿ, ಮಾಜಿ ಉಪಾಧ್ಯಕ್ಷರಾದ ಗೋವರ್ಧನ ಜೋಗಿ, ಹಿಂದೂ ರುದ್ರಭೂಮಿ ಸಮಿತಿಯ ಅಧ್ಯಕ್ಷ ಉದಯ ಕೆ.ನಾಯ್ಕ, ವಿಜಯಮಕ್ಕಳಕೂಟ ಸಮೂಹ ಶಿಕ್ಷಣ ಸಂಸ್ಥೆ ಸಂಚಾಲಕ ಸುಭಾಶ್ಚಂದ್ರ ಶೆಟ್ಟಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಆನಂದ ನಾಯ್ಕ್ ನ್ಯಾಗಳಮನೆ, ಗ್ರಾಮ ಸಹಾಯಕ ಗಿರೀಶ ನಾಯ್ಕ, ಸಾರ್ವಜನಿಕ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರಾದ ದಿವಾಕರ ಸುಜಿ ವಂಡ್ಸೆ, ಗುರುರಾಜ ಗಾಣಿಗ, ಸುಶಾಂತ ವಂಡ್ಸೆ, ನಾಗು ನಾಯ್ಕ, ಮಹಾಬಲ ನಾಯ್ಕ, ಅವಿನಾಶ ಶಾರ್ಕೆ, ಸುಧಾಕರ ಮೇಲ್ಮನೆ, ಗುಂಡು ಪೂಜಾರಿ ಹರವರಿ, ವೆಂಕಟೇಶ ಶೆಟ್ಟಿ ತೆಂಕೊಡಿಗೆ, ಮಂಜು, ಪ್ರಭಾಕರ ಸೀತಾಗೀತಾ, ಭಾಸ್ಕರ ಮೇಸ್ತ್ರಿಮನೆ, ಹನೀಪ್ ಟೈಲರ್, ಪ್ರಸನ್ನ ಪೂಜಾರಿ ಜಡ್ಡು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಕರ ಆಚಾರ್ಯ ಸ್ವಾಗತಿಸಿ, ಕಾರ್ಯದರ್ಶಿ ಸುರೇಶ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!