spot_img
Saturday, October 31, 2026
spot_img

ಕಾಳಾವರ ವರದರಾಜ ಸರಕಾರಿ ಕಾಲೇಜಿನಲ್ಲಿ ವಿ.ವಿ. ಮಟ್ಟದ ಉಡುಪಿ ವಲಯದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ಕುಂದಾಪುರ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಕೋಟೇಶ್ವರ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಉಡುಪಿ ವಲಯದ ಪುರುಷರ ಕಬಡ್ಡಿ ಮತ್ತು ಮಹಿಳೆಯರ ತ್ರೋಬಾಲ್ ಪಂದ್ಯಕೂಟವನ್ನು ಕುಂದಾಪುರದ ಶಾಸಕರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಆಗಿರುವ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿ ಶಿಕ್ಷಣ ಸಂಸ್ಥೆಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಕೂಡ ಪ್ರೋತ್ಸಾಹ ನೀಡಿದಾಗ ಶಿಕ್ಷಣ ಸಂಸ್ಥೆಗಳು ಬೆಳೆಯುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ ಆಗುತ್ತದೆ. ಅಲ್ಲದೆ ಇಂತಹ ಪಂದ್ಯಕೂಟಗಳು ಯುವಕರಲ್ಲಿ ಸಂಘಟನಾ ಕೌಶಲ್ಯಗಳು ಬೆಳೆಯಲು ಸಹಕಾರಿಯಾಗಲಿವೆ ಎಂದು ಪಂದ್ಯಕೂಟಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ವೈದ್ಯ. ಎಮ್. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಸಿ ಕ್ರೀಡಾ ಸ್ಪೂರ್ತಿಯೊಂದಿಗೆ ಈ ಪಂದ್ಯಾಟಗಳಲ್ಲಿ ಭಾಗವಹಿಸಿ ಪಂದ್ಯಕೂಟವನ್ನು ಯಶಸ್ವಿಗೊಳಿಸುವಂತೆ ಕರೆಯಿತ್ತರು.

ಸಮಾರಂಭದಲ್ಲಿ ಕಾಲೇಜು ಅಭಿವೃದ್ಧಿಯ ಸದಸ್ಯರಾದ ಜಯಪ್ರಕಾಶ್ ಶೆಟ್ಟಿ ಕಟ್ಕೆರೆ, ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಶೀಲ ಶೆಟ್ಟಿ, ಉದ್ಯಮಿಗಳಾದ ರಾಜೇಶ್ ಕಾವೇರಿ, ಕಾಲೇಜಿನ ಹಳೆ ವಿದ್ಯಾರ್ಥಿ ಸುಧೀರ್ ಕುಮಾರ್ ಶೆಟ್ಟಿ ಮಲ್ಯಾಡಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ರಂಗನಾಥ ಭಟ್, ಸೂರ್ಯಕಾಂತಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ಸುಬ್ರಮಣ್ಯ ಎ., ಐ.ಕ್ಯೂ.ಎ.ಸಿ. ಸಂಚಾಲಕರಾದ ಮೋಹಿನಿ ಅತ್ತಿಮನಿ ಉಪಸ್ಥಿತರಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ರಾಮಚಂದ್ರ ಪಾಟ್ಕರ್ ಸ್ವಾಗತಿಸಿ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಉದಯಕುಮಾರ್ ಶೆಟ್ಟಿ ವಂದನಾರ್ಪಣೆ ಗೈದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಆಚಾರಿ ಕಾರ್ಯಕ್ರಮವನ್ನು ನಿರೂಪಿಸಿದರು. ಉಡುಪಿ ವಲಯದ ಸುಮಾರು ೨೨ ಪುರುಷರ ಕಬಡ್ಡಿ ತಂಡಗಳು ಹಾಗೂ ೨೦ ಮಹಿಳೆಯರ ತ್ರೋಬಾಲ್ ತಂಡಗಳು ಪಂದ್ಯಕೂಟದಲ್ಲಿ ಭಾಗವಹಿಸಿದ್ದವು

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!