spot_img
Monday, November 2, 2026
spot_img

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ‘ಕನ್ನಡ ಡಿಂಡಿಮ’

ಕುಂದಾಪುರ : ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಭಾಷಾ ಸಂಘದ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಕನ್ನಡ ಡಿಂಡಿಮ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನವಂಬರ್ 1 ರಂದು ನಡೆಯಿತು.
ಕರ್ನಾಟಕ ಪಬ್ಲಿಕ್ ಸ್ಕೂಲ್, ಬಿದ್ಕಲ್ ಕಟ್ಟೆ ಇಲ್ಲಿನ ಉಪ ಪ್ರಾಂಶುಪಾಲರಾದ ಕರುಣಾಕರ ಶೆಟ್ಟಿ ಎಮ್. ಅವರು ಮಾತನಾಡಿ, “ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ; ಅದು ನಮ್ಮ ಅಸ್ಮಿತೆ, ಸಂಸ್ಕೃತಿ ಮತ್ತು ಸ್ವಾಭಿಮಾನದ ಪ್ರತೀಕ. ಕನ್ನಡಿಗರಾದ ನಾವು ನಮ್ಮ ಭಾಷೆಯ ಬಗ್ಗೆ ಅಭಿಮಾನ ಹೊಂದುವುದಷ್ಟೇ ಅಲ್ಲದೆ, ದೈನಂದಿನ ಬದುಕಿನಲ್ಲಿ ಕನ್ನಡದ ಬಳಕೆಯನ್ನು ಹೆಚ್ಚಿಸಬೇಕು. ಕನ್ನಡ ಶಾಲೆಗಳು, ಕನ್ನಡ ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಜಾಗತೀಕರಣದ ಈ ಕಾಲಘಟ್ಟದಲ್ಲಿ ಅನ್ಯಭಾಷೆಗಳನ್ನು ಕಲಿಯುವ ಜೊತೆಗೆ ಮಾತೃಭಾಷೆಯಾದ ಕನ್ನಡವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು.
 ಕಾಲೇಜಿನ ಪ್ರಾಂಶುಪಾಲ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಭಾಷಾ ಸಂಘದ ಸಂಯೋಜಕರಾದ ಸ್ವಾತಿ ಜಿ. ರಾವ್, ಮೇಘ ಎಸ್. ಭಟ್, ಸರೋಜಾ ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು.
ಇದೇ ಸಂದರ್ಭ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಆಯೋಜಿಸಿದ ಕನ್ನಡ ಗೀತ ಗಾಯನ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕನ್ನಡ ಗೀತೆಗಳನ್ನು ಹಾಡಿದರು.
    ಉಪ ಪ್ರಾಂಶುಪಾಲ, ಕನ್ನಡ ವಿಭಾಗದ ಮುಖ್ಯಸ್ಥ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಭಾಷಾ ಸಂಘದ ಸಂಯೋಜಕಿ ಪ್ರವೀಣಾ ಎಮ್. ಪೂಜಾರಿ ವಂದಿಸಿದರು. ವಿದ್ಯಾರ್ಥಿಗಳಾದ ಸಿಂಚನ ಅತಿಥಿಗಳನ್ನು ಪರಿಚಯಿಸಿ, ನಾಗರತ್ನ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!