spot_img
Monday, November 2, 2026
spot_img

ಶ್ರೀ ಕ್ಷೇ ದ. ಗ್ರಾ. ಯೋ. ಬಿ.ಸಿ ಟ್ರಸ್ಟ್: ಹಾಲಾಡಿ ವಲಯ ಪದಗ್ರಹಣ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕುಂದಾಪುರ- 2 ರ ಹಾಲಾಡಿ ವಲಯ ಮತ್ತು ಪ್ರಗತಿ ಬಂಧು ಸ್ವಸಹಾಯ ಒಕ್ಕೂಟ ಹಾಲಾಡಿ ವಲಯದ ಜಂಟಿ ಸಹಯೋಗದೊಂದಿಗೆ ನವಂಬರ್ 1 ರ ಆದಿತ್ಯವಾರದಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮವು ಹಾಲಾಡಿ ಸಮೀಪದ ಮುಂಡುಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

ಕ್ಷೇತ್ರದ ಅರ್ಚಕರಾದ ನರಹರಿ ಭಟ್ಟರು ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಧಾರ್ಮಿಕ ವಿಧಿಪೂರ್ವಕವಾಗಿ ನಡೆಸಿದರು.. ಬೆಳಿಗ್ಗೆ ೭.೩೦ ಕ್ಕೆ ಕಾರ್ಯಕ್ರಮ ಪ್ರಾರಂಭಗೊಂಡಿದ್ದು, ಸುಮಾರು ೫೦ ಕ್ಕೂ ಅಧಿಕ ದಂಪತಿಗಳು ಈ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಬೆಳಿಗ್ಗೆ ೧೦ ಗಂಟೆಗೆ ಮಹಾಮಂಗಳಾರತಿ ನೆರವೇರಿದ್ದು, ನಂತರ ತೀರ್ಥಪ್ರಸಾದ ವಿತರಣೆ ನಡೆಯಿತು.
ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸುಬ್ರಮಣ್ಯ ಶೆಟ್ಟಿ ಉದ್ಘಾಟಿಸಿದರು. ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷರಾದ, ಪ್ರಗತಿಪರ ಕೃಷಿಕರಾದ ಸತೀಶ ಹೆಗ್ಡೆ ಕೆಳಸುಂಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಂಡುಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ರಾಜೀವ ಹೆಗ್ಡೆ, ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹೇಮಂತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) , ಕುಂದಾಪುರ- ೨ ರ ಯೋಜನಾಧಿಕಾರಿ ಸುಧೀರ್ ಹಂಗ್ಳೂರು,ಮಾರಿಕಾನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಜ್ಞಾನೇಶ ಶೆಟ್ಟಿ, ಹಾಲಾಡಿ ನಾಗರೀಕ ಹಿತರಕ್ಷಣಾ ವೇದಿಕೆಯ ಕಾರ್ಯದರ್ಶಿ ಸೂರ್ಯಪ್ರಕಾಶ ದಾಮ್ಲೆ, ಸಾಮೂಹಿಕಾ ಸತ್ಯನಾರಾಯಣ ಪೂಜಾ ಸಮಿತಿಯ ಪದಾಧಿಕಾರಿಗಳಾದ ಆನಂದ ಕುಲಾಲ್, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಸತ್ಯನಾರಾಯಣ ರಾವ್, ಹಾಲಾಡಿ ವಲಯ ಮೇಲ್ವಿಚಾರಕಿ ಶ್ರೀಮತಿ ಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.

ಸ್ಪರ್ಧಾ ಸಾರಥಿ ಕೆ. ಎ.ಎಸ್ ಅಕಾಡೆಮಿ ಕುಂದಾಪುರ ಇದರ ನಿರ್ದೇಶಕರಾದ ಆದರ್ಶ ಕೆಲಾ ಧಾರ್ಮಿಕ ಉಪನ್ಯಾಸ ನೀಡಿದರು, ಸುಧೀರ್ ಹಂಗ್ಳೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಹಾಲಾಡಿ ವಲಯ ಮೇಲ್ವಿಚಾರಕಿ ಶ್ರೀಮತಿ ಲಕ್ಷ್ಮಿ ವರದಿಯನ್ನು ಮಂಡಿಸಿದರು, ಜ್ಞಾನ ವಿಕಾಸದ ಮೇಲ್ವಿಚಾರಕಿ ಕವಿತಾ ಕಾರ್ಯಕ್ರಮ ನಿರೂಪಿಸಿದರು ಮಂಜುಳಾ ಶೆಟ್ಟಿ ಹಾಲಾಡಿ ಸ್ವಾಗತಿಸಿ, ಗೀತಾ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!