spot_img
Monday, November 2, 2026
spot_img

ಹಾಲಾಡಿ ಪ್ರೌಢಶಾಲೆಯಲ್ಲಿ ಉಚಿತ ಟ್ಯೂಷನ್ ತರಗತಿ ಉದ್ಘಾಟನೆ

ಹಾಲಾಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ, ಕುಂದಾಪುರ-೨ ಯೋಜನಾ ಕಚೇರಿ ವ್ಯಾಪ್ತಿಯ ಹಾಲಾಡಿ ವಲಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ನೇತೃತ್ವದಲ್ಲಿ ಮೂರು ತಿಂಗಳ ಉಚಿತ ಟ್ಯೂಷನ್ ಕ್ಲಾಸ್ ಹಾಲಾಡಿಯ ಹೆಗ್ಗುಂಜೆ ರಾಜೀವ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟಿಸಲಾಯಿತು.

ಕಾರ್ಯಕ್ರಮವನ್ನು ತಾಲೂಕು ಯೋಜನಾಧಿಕಾರಿ ಸುಧೀರ್ ಹಂಗಳೂರು ಉದ್ಘಾಟಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಶಿಕ್ಷಣಕ್ಕೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಶಿಕ್ಷಕರ ಕೊರತೆ ಇರುವಲ್ಲಿ ಜ್ಞಾನದೀಪ ಶಿಕ್ಷಕರನ್ನು, ಶಾಲೆಗಳಿಗೆ ಡೆಸ್ಕ್ ಬೆಂಚ್ ವಿತರಣೆ, ಸರ್ಕಾರಿ ಶಾಲೆಗಳಲ್ಲಿ ಉಚಿತ ಟ್ಯೂಷನ್ ಕ್ಲಾಸ್ ತರಬೇತಿ, ಸ್ಕಾಲರ್ಶಿಪ್ ವಿತರಣೆ ಯೋಜನೆಯಲ್ಲಿ ಶಿಕ್ಷಣಕ್ಕೆ ಪೂರಕವಾಗಿ ಮಾಡುತ್ತಿರುವ ಕೆಲಸಗಳ ಬಗ್ಗೆ ತಿಳಿಸಿ, ವಿದ್ಯಾರ್ಥಿಯ ಜೀವನದಲ್ಲಿ ಎಸ್.ಎಸ್.ಎಲ್ ಸಿ ಬಹಳ ಪ್ರಮುಖ ಘಟ್ಟವಾಗಿದ್ದು ವಿದ್ಯಾರ್ಥಿಗಳು ಧ.ಗ್ರಾ ಯೋಜನೆಯಿಂದ ನೀಡುತ್ತಿರುವ ಟ್ಯೂಷನ್ ಕ್ಲಾಸಿನ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಪತಿ ಐತಾಳ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ಯೂಷನ್ ಕ್ಲಾಸಿಗೆ ನಮ್ಮ ಶಾಲೆಯನ್ನು ಆಯ್ಕೆ ಮಾಡಿಕೊಂಡಿರುವುದು ಸಂತಷದ ವಿಚಾರ, ಎಲ್ಲ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತೀಶ್ ಹೆಗಡೆ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ಗ್ರಾಮದಲ್ಲಿ ಮಾಡದ ಕೆಲಸವಿಲ್ಲ, ಆಡು ಮುಟ್ಟದ ಸೊಪ್ಪಿಲ್ಲ ಗ್ರಾಮಾಭಿವೃದ್ಧಿ ಯೋಜನೆ ಮಾಡದ ಕೆಲಸವಿಲ್ಲವೆಂದು ಯೋಜನೆಯ ಕಾರ್ಯ ವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ಪಲ್ಲವಿ, ಮುಖ್ಯೋಪಾದಯರಾದ ಶ್ರೀಪತಿ ಐತಾಳ್, ಟ್ಯೂಷನ್ ಶಿಕ್ಷಕರದ ಶ್ವೇತ ಕುಲಾಲ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತಾ ಗೌಡ, ಸೇವಾ ಪ್ರತಿನಿಧಿ ಜ್ಯೋತಿ, ಶಾಲೆಯ ಶಿಕ್ಷಕರು, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕವಿತ ಗೌಡ ನಿರೂಪಿಸಿ ಸೇವ ಪ್ರತಿನಿಧಿ ಜ್ಯೋತಿ ಸ್ವಾಗತಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!