spot_img
Monday, November 2, 2026
spot_img

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು: ‘ಸಹಕಾರ ರತ್ನ’ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ 95 ವರ್ಷಗಳ ಸುದೀರ್ಘ ಹಾಗೂ ಯಶಸ್ವಿ  ಇತಿಹಾಸ ಹೊಂದಿರುವ ದಕ್ಷಿಣ  ಕನ್ನಡ ಸಹಕಾರಿ ನೌಕರರ ಸಹಕಾರ ಸಂಘವು ಪ್ರತಿಷ್ಠಿತ ದಕ್ಷಿಣ  ಕನ್ನಡ ಜಿಲ್ಲಾ ರಾಜ್ಯೋತ್ಸವ  ಪ್ರಶಸ್ತಿಗೆ ಭಾಜನವಾಗಿದೆ.

ಮಂಗಳೂರಿನ ನೆಹರೂ ಮೈದಾನದಲ್ಲಿ ಭಾನವಾರ ನಡೆದ ಕನ್ನಡ ರಾಜ್ಯೋತ್ಸವ  ಸಮಾರಂಭದಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ  ಯು.ಟಿ. ಖಾದರ್ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ನಿರೀಕ್ಷಕರಾದ ಎಸ್. ಜಗದೀಶ್ಚಂದ್ರ ಅಂಚನ್ ಅವರು ಸಂಘದ ಅಧ್ಯಕ್ಷ ನೆಲೆಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸಹಕಾರಿ ಸಂಘಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಆರ್ಥಿಕ ಶರೇಯೋಭಿವೃದ್ಧಿಯ ಉದ್ದೇಶದಿಂದ ಸ್ಥಾಪನೆಯಾದ ಈ ಸಂಘವು, ಸದಸ್ಯರ ವಿಶ್ವಾಸ ಹಾಗೂ ಸಹಕಾರದೊಂದಿಗೆ ಆರ್ಥಿಕವಾಗಿ ಸದೃಢವಾಗಿ ಬೆಳೆದು, ಜಿಲ್ಲೆಯ ಮಾದರಿ ಸಹಕಾರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ.

ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ಅವರ ಉತ್ತಮ ನಾಯಕತ್ವದಲ್ಲಿ,  ಆಡಳಿತ  ಮಂಡಳಿಯ ನಿರ್ದೇಶಕರ  ಸಹಕಾರ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು  ಸಿಬ್ಬಂದಿ  ವರ್ಗದ ಅವಿರತ ಪರಿಶ್ರಮದಿಂದ  ಸಂಘವು  ನಿರಂತರ ಲಾಭದೊಂದಿಗೆ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ. ಸಹಕಾರಿ ನೌಕರರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಸಂಘವು ತನ್ನ ಸದಸ್ಯರಿಗೆ ಗುಣಮಟ್ಟದ ಸೇವೆ ಒದಗಿಸುವ ಮೂಲಕ ವಿಶ್ವಾಸಾರ್ಹ ಸಂಸ್ಥೆಯಾಗಿ ಬೆಳೆದಿದೆ.

ಸಂಘದ ನಿರಂತರ ಸಾಧನೆ, ಉತ್ತಮ ಆಡಳಿತ ವ್ಯವಸ್ಥೆ ಹಾಗೂ ಸದಸ್ಯರಿಗೆ ಸಲ್ಲಿಸುತ್ತಿರುವ ಗುಣಮಟ್ಟದ ಸೇವೆಯನ್ನು ಗುರುತಿಸಿ ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಸಾಧನಾ ಪ್ರಶಸ್ತಿ’ಯನ್ನು 2017-18ರಿಂದ 2025-26ನೇ ಸಾಲಿನವರೆಗೆ  ಸತತ ಒಂಬತ್ತು ವರ್ಷಗಳ ಕಾಲ  ಪಡೆದುಕೊಂಡಿರುವುದು ಸಂಘದ ಹೆಗ್ಗಳಿಕೆಯಾಗಿದೆ.

ಇದೀಗ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯೂ ಲಭಿಸಿರುವುದು ಸಂಘದ ಸಂಘಟಿತ ಪ್ರಯತ್ನ, ಸಮರ್ಥ ಆಡಳಿತ ಹಾಗೂ ಒಗ್ಗಟ್ಟಿನ ಕಾರ್ಯನಿರ್ವಹಣೆಗೆ ಸಂದ ಮತ್ತೊಂದು ಮಹತ್ವದ ಗೌರವವಾಗಿದೆ. ಈ ಪ್ರಶಸ್ತಿಯು ಸಂಘದ ಮುಂದಿನ ಅಭಿವೃದ್ಧಿ ಕಾರ್ಯಗಳಿಗೆ ಹೊಸ ಹುರುಪು ಮತ್ತು ಪ್ರೇರಣೆ ನೀಡಿದೆ.

ಈ ಸಂದರ್ಭದಲ್ಲಿ ಸಂಸದ ಕ್ಯಾ. ಬೃಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಸಂಘದ ಉಪಾಧ್ಯಕ್ಷ ರಾಘವ ಆರ್. ಉಚ್ಚಿಲ್, ನಿರ್ದೇಶಕರಾದ ಚಂದ್ರಕಲಾ ಕೆ., ಕಿರಣ್ ಕುಮಾರ್ ಶೆಟ್ಟಿ, ನಿಶಿತಾ ಜಯರಾಮ್, ಪ್ರೇಮ್ ರಾಜ್ ಭಂಡಾರಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಸತೀಶ್ ಪೂಜಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!