spot_img
Tuesday, November 3, 2026
spot_img

ಹೆಂಗವಳ್ಳಿ: ಹೈನುಗಾರಿಕೆ ತರಬೇತಿ ಮಾಹಿತಿ ಕಾರ್ಯಕ್ರಮ

ಹೆಂಗವಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಕುಂದಾಪುರ-2 ಯೋಜನ ಕಚೇರಿ ವ್ಯಾಪ್ತಿಯ ಹೆಂಗವಳ್ಳಿ ವಲಯ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘ ಹೆಂಗವಳ್ಳಿ ಇವರ ಸಹಯೋಗದಲ್ಲಿ ಕಚೇರಿಬೆಟ್ಟು ನಾರಾಯಣ ಕುಲಾಲ್ ಅವರ ಮನೆಯಲ್ಲಿ ಹೈನುಗಾರಿಕೆ ತರಬೇತಿ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮವನ್ನು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ರಘುರಾಮ್ ರೈ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ.ರಾಜೀವ್ ಶೆಟ್ಟಿ ಮಾಹಿತಿ ನೀಡಿ, ಗ್ರಾಮೀಣ ಭಾಗದ ಜನರು ಕೃಷಿ ಜೊತೆಗೆ ಹೈನುಗಾರಿಕೆಯನ್ನು ಅವಲಂಬಿಸಿಕೊಂಡಿದ್ದಾರೆ. ರೈತರು ಪರಸ್ಪರ ಅನುಭವಗಳನ್ನು ಹಂಚಿಕೊಳ್ಳಬೇಕು. ಈ ರೀತಿಯಾದಾಗ ಹೊಸ ಪ್ರಯೋಗಗಳನ್ನು ಮಾಡಲು ಸಾಧ್ಯವಾಗುತ್ತದೆ. ಹೈನುಗಾರಿಕೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇರುತ್ತವೆ.ಸರಿಯಾದ ಮಾಹಿತಿಯನ್ನು ಪಡೆದು, ವೈಜ್ಞಾನಿಕ ರೀತಿಯಲ್ಲಿ ನಿರ್ವಹಣೆ ಮಾಡಿದಲ್ಲಿ ಲಾಭದಾಯಕವಾಗಿ ಹೈನುಗಾರಿಕೆ ಮಾಡಲು ಸಾಧ್ಯ ಎಂದರು.

ಮುಖ್ಯವಾಗಿ ಜಾನುವಾರುಗಳಿಗೆ ಬರುವ ರೋಗಗಳು, ನುಸಿಗಳ ನಿರ್ವಹಣೆ, ಮಾದರಿ ಹಟ್ಟಿ ರಚನೆ, ಇನ್ಸೂರೆನ್ಸ್ ಮಾಡುವುದರಿಂದ ಆಗುವ ಉಪಯೋಗಗಳು, ಗರ್ಭಧಾರಣೆ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಪ್ರವೀಣ್ ಹೆಗ್ಡೆ ವಹಿಸಿದ್ದರು.

ಮನೆಯ ಮಾಲೀಕರಾದ ನಾರಾಯಣ ಕುಲಾಲ್, ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷರಾದ ಜಯಪ್ರಕಾಶ್ ಶೆಟ್ಟಿ ಮಟ್ನಗದ್ದೆ, ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಕೃಷಿ ಮೇಲ್ವಿಚಾರಕರಾದ ಪ್ರದೀಪ್ ಕುಮಾರ್, ಒಕ್ಕೂಟದ ಮಾಜಿ ಅಧ್ಯಕ್ಷರಾದ ರಘುರಾಮ್ ಶೆಟ್ಟಿ ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಗೀತಾ ಸ್ವಾಗತಿಸಿ, ಚೈತ್ರ ವಂದಿಸಿದರು.ಕೃಷಿ ಮೇಲ್ವಿಚಾರಕರಾದ ಪ್ರದೀಪ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಒಕ್ಕೂಟ ಪದಾಧಿಕಾರಿಗಳು, ಹೈನುಗಾರ ರೈತರು ಭಾಗವಹಿಸಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!