spot_img
Tuesday, November 3, 2026
spot_img

ಬಾರ್ಕೂರು: ಸುಜ್ಞಾನ ನ್ಯಾಷನಲ್ ಪಿಯು ಕಾಲೇಜಿನಲ್ಲಿ ಕನ್ನಡ ಸಿರಿನುಡಿ ಸಂಭ್ರಮ

ಮಾತೃಭಾಷೆಯನ್ನು ಪ್ರೀತಿಸಿ ಗೌರವಿಸಬೇಕು-ಡಾ.ರಮೇಶ ಶೆಟ್ಟಿ
ಬಾರ್ಕೂರು: “ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಯಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಕನ್ನಡವನ್ನು ಕೇವಲ ಒಂದು ಭಾಷೆಯಾಗಿ ಕಲಿಯದೆ, ಪ್ರೀತಿಸಿ, ಗೌರವಿಸಿ, ದೈನಂದಿನ ಬದುಕಿನಲ್ಲಿ ಹೆಮ್ಮೆಯಿಂದ ಬಳಸಬೇಕು” ಎಂದು ಸುಜ್ಞಾನ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಹೇಳಿದರು.

ಅವರು ಬಾರಕೂರು ಸುಜ್ಞಾನ ನ್ಯಾಷನಲ್ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ‘ಕನ್ನಡ ಸಿರಿನುಡಿ ಸಂಭ್ರಮ’ ಕಾರ್ಯಕ್ರಮವನ್ನು ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ದೀಪ ಬೆಳಗಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಟ್ರಸ್ಟ್‌ನ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, “ಕನ್ನಡ ರಾಜ್ಯೋತ್ಸವದ ಆಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ, ವರ್ಷವಿಡೀ ಭಾಷೆಯ ಬೆಳವಣಿಗೆ ಹಾಗೂ ಪ್ರಚಾರಕ್ಕೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು” ಎಂದರು.

ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಆಚಾರ್ಯ ಮಾತನಾಡಿ, “ನಮ್ಮ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯ. ಮುಂದಿನ ಪೀಳಿಗೆಗೂ ಕನ್ನಡದ ಮಹತ್ವವನ್ನು ತಲುಪಿಸುವ ಕೆಲಸವಾಗಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಸೌರಭ:
ಕಾರ್ಯಕ್ರಮದ ಭಾಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಂದ ಕನ್ನಡ ನಾಡು-ನುಡಿಯ ಅಭಿಮಾನವನ್ನು ಬಿಂಬಿಸುವ ವಿವಿಧ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಪ್ರಸ್ತುತಿಗಳು ಜರುಗಿದವು. ಕನ್ನಡದ ಸೊಗಡು ಮತ್ತು ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸಿದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಸಭಿಕರ ಮೆಚ್ಚುಗೆ ಪಾತ್ರವಾಯಿತು.

ಕಾಲೇಜಿನ ಕನ್ನಡ ಉಪನ್ಯಾಸಕಿ ನೈನಾ ಜೆ. ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ಪ್ರಗತಿ ಶೆಟ್ಟಿ ವಂದಿಸಿದರು. ವಿದ್ಯಾರ್ಥಿಗಳಾದ ನಿಖಿತಾ, ಗಾಯತ್ರಿ, ಮುಝಮ್ಮಿಲ್, ಸುಪ್ರೀತ್ ಹಾಗೂ ಆದಿತ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!