spot_img
Friday, November 6, 2026
spot_img

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿಕ್ಟರಿ 2026

ಕುಂದಾಪುರ : ನವೆಂಬರ್ 4 ರಂದು ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ‘ವಿಕ್ಟರಿ 2026’ ಅನ್ನು ಕ್ರೀಡಾಪಟು, ಉದ್ಯಮಿ ಹಾಗೂ ಹಿರಿಯ ರಾಜಕೀಯ ಮತ್ತು ಸಾಮಾಜಿಕ ನಾಯಕರಾದ ರಾಜೇಶ್ ಕಾವೇರಿ ಅವರು ಉದ್ಘಾಟಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ವಿದ್ಯಾರ್ಥಿ ಜೀವನವು ವ್ಯಕ್ತಿತ್ವ ನಿರ್ಮಾಣದ ಮಹತ್ವದ ಹಂತ. ಈ ಹಂತದಲ್ಲಿಯೇ ಉತ್ತಮ ಗುಣಗಳನ್ನು ಬೆಳೆಸಿಕೊಂಡು, ಶಿಸ್ತು ಮತ್ತು ಪರಿಶ್ರಮವನ್ನು ಜೀವನದ ಮೌಲ್ಯಗಳನ್ನಾಗಿಸಿಕೊಂಡು ಸಾಧನೆಯ ಹಾದಿಯಲ್ಲಿ ಮುನ್ನಡೆಯಬೇಕು. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಅದಕ್ಕೆ ಸೂಕ್ತ ವೇದಿಕೆಯನ್ನು ಬಳಸಿಕೊಳ್ಳಬೇಕು. ಆಗ ಮಾತ್ರ ಅವರ ಭವಿಷ್ಯ ಉಜ್ವಲವಾಗಿ ರೂಪುಗೊಳ್ಳಲು ಸಾಧ್ಯ,” ಎಂದು ಆಶಯ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್‌ನ ಕಾರ್ಯದರ್ಶಿ ಶ್ರೀ. ಕೆ.ರಾಧಾಕೃಷ್ಣ ಶೆಣೈ ಅವರು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಪ್ರಾಸ್ತಾವಿಕ ಮಾತನಾಡಿ, ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ನಿರೂಪಿಸಿ, ಉಪಪ್ರಾಂಶುಪಾಲರಾದ ಸುಜೇಯ್ ಕೋಟೆಗಾರ್ ವಂದಿಸಿದರು.

ವಿಕ್ಟರಿ-೨೦೨೬ ರ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಒಟ್ಟು ೨೦ ಶಾಲೆಗಳು ಉತ್ಸಾಹದಿಂದ ಭಾಗವಹಿಸಿದ್ದವು. ವಿವಿಧ ಸ್ಪರ್ಧೆಗಳ ಮೂಲಕ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣಗೊಳಿಸಿದರು. ಸಮಗ್ರ ಪ್ರಶಸ್ತಿಯಲ್ಲಿ ತೃತೀಯ ಸ್ಥಾನವನ್ನು
ಎಸ್.ಎಂ.ಎಸ್ ಇಂಗ್ಲೀಷ್ ಮೀಡಿಯಂ ಶಾಲೆ ಬ್ರಹ್ಮಾವರ ತೃತೀಯ ಸ್ಥಾನವನ್ನು ಪಡೆದುಕೊಂಡರೆ, ಸಂದೀಪನ್ ಇಂಗ್ಲೀಷ್ ಮೀಡಿಯಂ ಶಾಲೆ ಕಂಬದಕೋಣೆ ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಜಿ.ಎಂ ವಿದ್ಯಾನಿಕೇತನ ಪ್ರಥಮ ಸ್ಥಾನವನ್ನು ಪಡೆದು ಚಾಂಪಿಯನ್ ಪಟ್ಟವನ್ನು ಅಲಂಕರಿಸಿ ಗಮನಾರ್ಹ ಸಾಧನೆ ಮಾಡಿತು.

ವಿಜೇತ ತಂಡಗಳಿಗೆ ಆಕರ್ಷಕ ಟ್ರೋಫಿಯೊಂದಿಗೆ ನಗದು ಬಹುಮಾನಗಳನ್ನು ನೀಡಿ ಗೌರವಿಸಲಾಯಿತು. ಪ್ರಥಮ ಸ್ಥಾನ ಪಡೆದವರಿಗೆ ರೂ.12,222,, ದ್ವಿತೀಯ ಸ್ಥಾನ ಪಡೆದವರಿಗೆ ರೂ.8,888 ಹಾಗೂ ತೃತೀಯ ಸ್ಥಾನ ಪಡೆದವರಿಗೆ ರೂ.5,555 ನಗದು ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!