spot_img
Saturday, November 7, 2026
spot_img

ಸ.ಹಿ.ಪ್ರಾ.ಶಾಲೆ ನೂಜಾಡಿ-2 ಬಗ್ವಾಡಿಯಲ್ಲಿ ಹೊಸಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜಾಡಿ ೨ ಬಗ್ವಾಡಿ ಬೈಂದೂರು ವಲಯ ಇಲ್ಲಿ ಹೊಸಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿ‌ಎಂಸಿ ಅಧ್ಯಕ್ಷರಾದ ರಾಧಾಕೃಷ್ಣ ಗಾಣಿಗ ವಹಿಸಿದ್ದರು. ಊರಿನ ಹಿರಿಯ ಪುರೋಹಿತರಾದ ನಾಗಪ್ಪಯ್ಯ ಭಟ್ ದೀಪ ಬೆಳಗಿಸುವುದರ ಮೂಲಕ ಸಭೆಯನ್ನು ಉದ್ಘಾಟಿಸಿದರು.

ಪ್ರತಿಭೆಯ ಅನಾವರಣ ಪ್ರತಿಭಾ ಕಾರಂಜಿ ಉದ್ಘಾಟನೆಯನ್ನು ಸಮೂಹ ಸಂಪನ್ಮೂಲ ಕೇಂದ್ರ ಬೈಂದೂರು ಸಮನ್ವಯಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ನೆರವೇರಿಸಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಗುರುವಂದನೆ ಸ್ವೀಕರಿಸಿದ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾದ ರಾಜೀವ ಶೆಟ್ಟಿ ಇವರನ್ನು ಅಭಿನಂದಿಸಲಾಯಿತು. ಚಿತ್ರಕಲೆಯಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸ್ಥಳೀಯ ಪ್ರೌಢಶಾಲಾ ಚಿತ್ರಕಲಾ ಶಿಕ್ಷಕ ರಾಜಶೇಖರ್ ತಾಳಿಕೋಟೆ ಇವರನ್ನು ಗೌರವಿಸಲಾಯಿತು. ಸಭೆಯಲ್ಲಿ ಶಿಕ್ಷಣ ಸಂಯೋಜಕರಾದ ಯೋಗೀಶ್ ಸಿ‌ಆರ್.ಪಿ ಸತೀಶ್ ಶೆಟ್ಟಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯದ ಚಂದ್ರ ಬಿಲ್ಲವ ಹಿರಿಯರಾದ ವೆಂಕಟೇಶ್ ನಾಯಕ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಬೈಂದೂರು ವಲಯದ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷರಾದ  ಸಂದೀಪ್ ನಾಯಕ್, ಶಾಲಾ ನಾಯಕ ಅಮಿತ್ ಆಚಾರ್ಯ ಚನ್ನಕೇಶವ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಕಿಶೋರ್ ಗಾಣಿಗ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಶೈಲಜಾ ಶೆಟ್ಟಿ ಸ್ವಾಗತಿಸಿದರು. ಬೈಂದೂರು ವಲಯದ ಪ್ರತಿಭಾ ಕಾರಂಜಿ ನೋಡಲ್ ಸತ್ಯನಾ ಕೊಡೇರಿ ಇವರು ಪ್ರಾಸ್ತಾವಿಕ ಮಾತುಗಳಾಡಿದರು. ಸಹ ಶಿಕ್ಷಕಿಯರಾದ ಶ್ರೀಮತಿ ಪೂರ್ಣಿಮಾ ಶೆಟ್ಟಿ ಮತ್ತು ಶ್ರೀಮತಿ ಉಷಾ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿ ಸತ್ಯವತಿ ವಂದಿಸಿದರು. ತದನಂತರ ೮ ಕೊಠಡಿಗಳಲ್ಲಿ ಪ್ರತಿಭಾ ಕಾರಂಜಿಯ ೪೨ಸ್ಪರ್ಧೆಗಳು ನಡೆದು ಪ್ರಶಸ್ತಿ ಪ್ರದಾನ ಮಾಡಲಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!