spot_img
Saturday, November 7, 2026
spot_img

ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಪ್ರೌಢಶಾಲಾ ಹಾಗೂ ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆ: ‘ಉಗಮ-2026’ ಉದ್ಘಾಟನೆ

ಕುಂದಾಪುರ: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಧನಾತ್ಮಕ ಚಿಂತನೆ ಬೆಳೆಯುತ್ತದೆ. ಸಹಾಯ, ಸಹಕಾರಗಳು ಸಾಧ್ಯವಾಗುವುದು ಇಂತಹ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ಶಿಕ್ಷಣದ ನಿಜವಾದ ಅರ್ಥವನ್ನು ಅರ್ಥೈಸಿಕೊಳ್ಳಿ ಎಂದು ಅರಣ್ಯ ಗುತ್ತಿಗೆದಾರ, ಉದ್ಯಮಿ ಜಯಪ್ರಕಾಶ್ ಶೆಟ್ಟಿ ಕಟ್ಕೇರಿ ಹೇಳಿದರು.

ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪದವಿ-ಪೂರ್ವ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ’ಉಗಮ ೨೦೨೬’ನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಪ್ರತಿನಿಧಿಗಳಾದ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಕಾಸ್ ಶೆಟ್ಟಿ, ಎಸ್ಕ್ಯೂ‌ಎಸಿ ಪ್ರತಿನಿಧಿ ಖುಷಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಅಭಿಷೇಕ್, ಕ್ರೀಡಾ ಕಾರ್ಯದರ್ಶಿ ನಿಶಾಂತ್ ಡಿಸೋಜ ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ತನುಜಾ ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ಸಂಯೋಜಕಿ ಶ್ರೀಮತಿ ರೇಷ್ಮಾ ಶೆಟ್ಟಿ ವಂದಿಸಿ, ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಯೋಗೀಶ್ ಶಾನುಭೋಗ್ ನಿರೂಪಿಸಿದರು. ವಿದ್ಯಾರ್ಥಿ ಆದಿತ್ಯ ಪ್ರಾರ್ಥಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!