spot_img
Tuesday, November 10, 2026
spot_img

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಗೋಪೂಜಾ ಕಾರ್ಯಕ್ರಮ

ಕುಂದಾಪುರ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಿಳಯ್ಯನ್ ಕೆ. ಗೋವಿಂದ ಶೇರಿಗಾರ್ ಮನೆ, ಒಂಬತ್ತುದಂಡಿಗೆ, ಪಡುಕೇರಿ, ಕುಂದಾಪುರದಲ್ಲಿ ಗೋ ಪೂಜಾ ಕಾರ್ಯಕ್ರಮವು ಭಕ್ತಿ-ಶ್ರದ್ಧೆಯಿಂದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ಅವರು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು, ಗೋವು ಕೇವಲ ಪ್ರಾಣಿಯಲ್ಲ, ಅದು ನಮ್ಮ ಸಂಸ್ಕೃತಿ, ನಮ್ಮ ಶ್ರದ್ಧೆ, ನಮ್ಮ ಜೀವನದ ಅವಿಭಾಜ್ಯ ಅಂಗ. ಗೋವನ್ನು ಪೂಜಿಸುವುದೆಂದರೆ ಪ್ರಕೃತಿಯನ್ನು ಪೂಜಿಸಿದಂತೆ. ದೀಪಾವಳಿಯ ಈ ಪವಿತ್ರ ಸಂದರ್ಭದಲ್ಲಿ ಗೋಮಾತೆಯ ಆರಾಧನೆ ಮಾಡುವುದರಿಂದ ಸಮಾಜದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ. ಗೋ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಮಹಿಳಾ ಮೋರ್ಚಾ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದ ಬಗ್ಗೆ ಮಾತನಾಡಿದ ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು, ಮಹಿಳಾ ಮೋರ್ಚಾ ಸಂಘಟನೆಯೊಂದಿಗೆ ಸಂಸ್ಕೃತಿ ಉಳಿಸುವ ಕೆಲಸವನ್ನೂ ಮಾಡುತ್ತಿದೆ. ಗೋ ಪೂಜೆಯಂತಹ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ನಮ್ಮ ಪರಂಪರೆಯನ್ನು ಪರಿಚಯಿಸುತ್ತವೆ ಎಂದರು.

ಇದೇ ವೇಳೆ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್, ಜಿಲ್ಲಾ ಕಾರ್ಯದರ್ಶಿಗಳಾದ ಸದಾನಂದ ಬಳ್ಕೂರು, ಅನಿತಾ ಶ್ರೀಧರ್* ಕುಂದಾಪುರ ಪುರಸಭಾ ಮಾಜಿ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಶೇರಿಗಾರ್* ಬೂತ್ ಅಧ್ಯಕ್ಷರಾದ ಜಯರಾಜ್. ಹಿರಿಯರಾದ ಅನ್ನಪೂರ್ಣೇಶ್ವರಿ ಶೇರಿಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿದ್ಯಾ ಸಾಲಿಯಾನ್ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ವೇತಾ ಶ್ರೀನಿಧಿ ಉಪಾಧ್ಯಾಯ ಅವರು ವಂದಿಸಿದರು.

ಇದೇ ವೇಳೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಹಿಳಾ ಮೋರ್ಚ ಪದಾಧಿಕಾರಿಗಳು, ಪುರಸಭೆಯ ಮಾಜಿ ಸದಸ್ಯರು ಪಕ್ಷದ ಪ್ರಮುಖರು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!