spot_img
Tuesday, November 10, 2026
spot_img

ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಭಜನೋತ್ಸವದ ಆಮಂತ್ರಣ

ಧರ್ಮಸ್ಥಳ: ಶ್ರೀ ಆನೆಗುಡ್ಡೆ ವಿನಾಯಕ ದೇವಸ್ಥಾನ ಕುಂಭಾಸಿ. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್ (ರಿ) ಕುಂದಾಪುರ ಇದರ ವತಿಯಿಂದ ಆಯೋಜಿಸಲ್ಪಟ್ಟಿರುವ ಭಜನಾ ತರಬೇತಿ ಸಮಾರೋಪ ಸಮಾರಂಭ ಹಾಗೂ ಭಜನೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಪ್ರಾದೇಶಿಕ ಭಜನಾ ಪರಿಷತ್ತಿನ ಉಪಾಧ್ಯಕ್ಷರಾದ ರಾಜೇಂದ್ರ ಕುಮಾರ್ ಬಸ್ರೂರವರು ಗೌರವಪೂರ್ವಕವಾಗಿ ಭೇಟಿಯಾಗಿ, ಆಮಂತ್ರಣ ಪತ್ರಿಕೆಯನ್ನು ಸಮರ್ಪಿಸಿ, ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಭಜನೆ ಎಂಬುದು ಕೇವಲ ಸಂಗೀತದ ಅಭಿವ್ಯಕ್ತಿಯಲ್ಲ, ಅದು ಭಕ್ತಿ, ಸಂಸ್ಕಾರ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಚಿಂತನೆಗಳನ್ನು ಸಮಾಜದಲ್ಲಿ ಬಿತ್ತುವ ಪವಿತ್ರ ಸಾಧನವಾಗಿದೆ. ಇಂತಹ ಭಜನಾ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಯೋಜಿಸುತ್ತಿರುವ ಭಜನೋತ್ಸವ ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ಶುಭ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ರವರಿಗೆ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಭಜನಾ ಪರಿಷತ್ತಿನ ಸಂಚಾಲಕರಾದಂತಹ ಜಿ.ಸುಬ್ರಮಣ್ಯ ಪ್ರಸಾದ್ ರವರಿಗೆ ಭಜನೋತ್ಸವದ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರವೀಂದ್ರ ಎಸ್ ಬಸ್ರೂರು, ವಲಯ ಸಂಯೋಜಕಿ ಜಯಲಕ್ಷ್ಮಿ, ಭಜನಾ ಸಮಿತಿಯ ಗೌರವ ಸಲಹೆಗಾರರಾದ ಗಣೇಶ ಎಂ, ಹಾಗೂ ಗೋರಕ್ ನಾಥ್, ಭಜನಾ ಸಮಿತಿಯ ಸದಸ್ಯ ಮಹೇಶ್ ಅಸೋಡು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!