spot_img
Friday, November 13, 2026
spot_img

ಬಿಜೆಪಿ ವಂಡ್ಸೆ ಮಹಾಶಕ್ತಿ ಕೇಂದ್ರದ ಸಂಘಟನಾ ಸಭೆ

ವಂಡ್ಸೆ: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲದ ವತಿಯಿಂದ ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳ ಪೂರ್ವಭಾವಿ ಸಿದ್ಧತೆಗಾಗಿ ವಂಡ್ಸೆ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಶಕ್ತಿ ಕೇಂದ್ರಗಳ ಸಂಘಟನಾ ಸಭೆಯನ್ನು ವಂಡ್ಸೆಯಲ್ಲಿ ನ.12ರಂದು ನಡೆಸಲಾಯಿತು.

ಸಭೆಯಲ್ಲಿ ಮುಂಬರುವ ಚುನಾವಣೆಗಳ ಪೂರ್ವಸಿದ್ಧತೆ, ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದು, ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಜವಾಬ್ದಾರಿಗಳು ಹಾಗೂ ಚುನಾವಣಾ ಕಾರ್ಯತಂತ್ರಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ, ಮಂಡಲ ಕಾರ್ಯಕಾರಿಣಿ ಹಾಗೂ ಕೋರ್ ಕಮಿಟಿ ಸದಸ್ಯರಾದ ಡಾ. ಅತುಲ್ ಕುಮಾರ್ ಶೆಟ್ಟಿ, ವಂಡ್ಸೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಶೇಖರ್ ಶೆಟ್ಟಿ ಚಿತ್ತೂರು, ಪಂಚಾಯತ್ ರಾಜ್ ಪ್ರಕೋಷ್ಠದ ಸಂಚಾಲಕರಾದ ಉದಯ್ ಕುಮಾರ್ ಶೆಟ್ಟಿ ವಂಡ್ಸೆ, ಶಕ್ತಿ ಕೇಂದ್ರ ಅಧ್ಯಕ್ಷರಾದ ದೀಪಕ್ ಶೆಟ್ಟಿ ವಂಡ್ಸೆ ಹಾಗೂ ಸುದರ್ಶನ್ ಶೆಟ್ಟಿ ಬೆಳ್ಳಾಲ, ಪಕ್ಷದ ಮುಖಂಡರಾದ ಪ್ರದೀಪ್ ಶೆಟ್ಟಿ ಕೆರಾಡಿ, ನಿರ್ಮಲ ವಂಡ್ಸೆ, ವಿ.ಕೆ ಶಿವರಾಮ್ ಶೆಟ್ಟಿ , ವೆಂಕಟೇಶ್ ಶೆಟ್ಟಿ ಅಬ್ಬಿ ಹಾಗೂ ಪಕ್ಷದ ಇತರ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!