spot_img
Saturday, November 14, 2026
spot_img

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೆಳ್ಕೋಡು: ವಾರ್ಷಿಕ ಕ್ರೀಡಾಕೂಟ

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೆಳ್ಕೋಡು ಇಲ್ಲಿ ಅಕ್ಷರ ಪರ್ವ-2026ರ ಅಂಗವಾಗಿ ವಾರ್ಷಿಕ ಕ್ರೀಡೋತ್ಸವ-2026 ಶನಿವಾರ ನಡೆಯಿತು.

ಕೊಲ್ಲೂರು ಪೊಲೀಸ್ ಠಾಣೆಯ ಎ.ಎಸ್.ಐ ನರೇಶ್ ಅವರು ಪಥಸಂಚಲನದ ಗೌರವ ರಕ್ಷೆ ಸ್ವೀಕರಿಸಿ, ಗ್ರಾಮೀಣ ಪ್ರದೇಶದ ಈ ಶಾಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಕ್ರೀಡಾಚಟುವಟಿಕೆಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಕ್ರೀಡಾಪ್ರತಿಭೆಯನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನಾರ್ಹ ಕಾರ್ಯ ಎಂದರು.

ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿದ ಚಿತ್ತೂರು ಪಿ‌ಎಂಶ್ರೀ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಶಾಲಾ ವಾರ್ಷಿಕ ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಮಹತ್ವವಾದುದು. ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಪೂರ್ತಿಯನ್ನು ವೃದ್ಧಿಸಲು ಅನುಕೂಲ ಎಂದು ಶುಭ ಹಾರೈಸಿದರು.

ಮೂಕಾಂಬಿಕಾ ದೇವಳ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಬಡಿಯ ಅವರು ಕ್ರೀಡಾಧ್ವಜರೋಹಣಗೈದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಬ್ಬಯ್ಯ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ, ಸುವರ್ಣನಿಧಿ ಯೋಜನೆಯ ಅಧ್ಯಕ್ಷ ನೇತ್ರಾಡಿ ಸುರೇಂದ್ರ ನಾಯ್ಕ, ಸಭಾಭವನ ಸಮಿತಿ ಅಧ್ಯಕ್ಷೆ ಪ್ರೇಮಾ ಎಸ್ ನಾಯ್ಕ್, ಎಸ್,ಡಿ,ಎಂ.ಸಿ ಉಪಾಧ್ಯಕ್ಷೆ ನಾಗರತ್ನ ಶೆಟ್ಟಿ, ಮೂಕಾಂಬಿಕಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ, ಮೂಕಾಂಬಿಕಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜೀವ ಶೆಟ್ಟಿ, ವಿದ್ಯಾರ್ಥಿ ನಾಯಕಿ ತನುಶ್ರೀ ಶೆಟ್ಟಿ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಎಂ.ನಾಗರಾಜ ಶೆಟ್ಟಿ ಅವರು ಮಾತನಾಡಿ, ಮಕ್ಕಳ ದಿನಾಚರಣೆಯ ದಿನದಂದೇ ಕ್ರೀಡಾಕೂಟವನ್ನು ಆಚರಿಸಲಾಗುತ್ತಿದೆ. ವಿದ್ಯಾರ್ಥಿಗಳು ಕೇವಲ ಕಲಿಕೆಯ ಜೊತೆಯಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಯಲ್ಲಿಯೂ ತೊಡಗಿಸಿಕೊಳ್ಳಲು ಶಾಲೆಯಲ್ಲಿ ನಿರಂತರ ಕಾರ್ಯಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನಿರಂತರ ಕಾರ್ಯಕ್ರಮ ಶಾಲೆಯಲ್ಲಿ ನಡೆಯುತ್ತಿದೆ ಎಂದರು.

ಹಿರಿಯ ಶಿಕ್ಷಕ ಭಾಸ್ಕರ ನಾಯ್ಕ್ ಶಾಲೆಯ ಬಗ್ಗೆ ಹಿನ್ನೋಟ ನೀಡಿ, ತೀರಾ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ವ್ಯಾಸಂಗ ಮಾಡುತ್ತಿರುವ ಈ ಶಾಲೆಯಲ್ಲಿ 2016ರಿಂದ ವಾರ್ಷಿಕ ಕ್ರೀಡಾಕೂಟ, ವಾರ್ಷಿಕೋತ್ಸವ ನಡೆಸಿಕೊಂಡು ಬರಲಾಗುತ್ತಿದೆ. ಎಸ್.ಡಿ.ಎಂ.ಸಿ, ದಾನಿಗಳ ಸಹಕಾರ, ಶಿಕ್ಷಕವೃಂದ ತಂಡವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟ, ವಿಭಾಗ ಮಟ್ಟವನ್ನು ಪ್ರತಿನಿಧಿಸಿದ್ದಾರೆ ಎಂದರು.

ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಪೂಜಾರಿ ಸ್ವಾಗತಿಸಿದರು. ಸಹ ಶಿಕ್ಷಕ ಉದಯ ವಂದಿಸಿದರು. ಶಿಕ್ಷಕ ಸತೀಶ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಗಿರೀಶ, ಗೀತಪ್ರಿಯ, ಷೀಜಾ, ಸುಜಾತ, ಸೌಮ್ಯ ಕಾರ್ಯಕ್ರಮಕ್ಕೆ ಸಹಕರಿಸಿದರು.
ಪಥ ಸಂಚಲನದಲ್ಲಿ ಪ್ರಥಮ ಸ್ಥಾನ ಪಡೆದ ಪಿಂಕ್ ಹೌಸ್, ದ್ವಿತೀಯ ಸ್ಥಾನ ಪಡೆದ ಗ್ರೀನ್ ಹೌಸ್ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

ಅರ್ಥಪೂರ್ಣ ಕ್ರೀಡೋತ್ಸವ:
ಸೆಳ್ಕೋಡು ಶಾಲೆ ಹಲವು ವಿಶೇಷ, ವಿಶಿಷ್ಠತೆಯಿಂದ ಜಿಲ್ಲೆಯ ಗಮನ ಸಳೆಯುತ್ತಿರುವ ಸರಕಾರಿ ಶಿಕ್ಷಣ ಸಂಸ್ಥೆ. ತೀರಾ ಗ್ರಾಮೀಣ ಪ್ರದೇಶದಲ್ಲಿ ಇರುವ ಈ ಶಾಲೆಯಲ್ಲಿ 190 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಗುಣಮಟ್ಟದ ಶಿಕ್ಷಣದೊಂದಿಗೆ ನಗರ ಪ್ರದೇಶದಲ್ಲಿರುವ ಆಧುನಿಕ ಸೌಲಭ್ಯ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಕ್ರೀಡಾಕೂಟವನ್ನು ಕೂಡಾ ಅರ್ಥಪೂರ್ಣವಾಗಿ ವ್ಯವಸ್ಥಿತವಾಗಿ ನಡೆಸಲಾಯಿತು. ಬೇರೆ ಬೇರೆ ಸಮವಸ್ತ್ರದೊಂದಿಗೆ ವಿದ್ಯಾರ್ಥಿಗಳು ನಡೆಸಿದ ಪಥಸಂಚಲನ ಅದ್ಬುತವಾಗಿತ್ತು. ಪ್ರತಿಯೊಂದು ಕ್ರೀಡಾಚಟುವಟಿಕೆಯನ್ನು ಕ್ರಮಬದ್ಧವಾಗಿ ನಿರ್ವಹಿಸಲಾಯಿತು. ಸ್ಪರ್ಧೆಗಿಂತ ವ್ಯವಸ್ಥಿತ ಕ್ರೀಡಾಕೂಟ ಹೇಗೆ ನಡೆಯುತ್ತದೆ ಎನ್ನುವುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲು ಇದು ಸಹಕಾರಿಯಾಯಿತು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!