spot_img
Saturday, November 14, 2026
spot_img

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳ ದೇವಸ್ಥಾನ ಪ್ರವಾಸೋದ್ಯಮ ಕಾರಿಡಾರ್ ಅಭಿವೃದ್ಧಿಗೆ ಖಾಸಗಿ ವಿಧೇಯಕ: ಶಾಸಕ ಗುರುರಾಜ್ ಗಂಟಿಹೊಳೆ

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ ಕುರಿತು ಖಾಸಗಿ ವಿಧೇಯಕ ಸಮಿತಿಯಲ್ಲಿ ಚರ್ಚೆ

ಕುಂದಾಪುರ: ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಮುಖ ಧಾರ್ಮಿಕ ಕ್ಷೇತ್ರಗಳನ್ನು ಸಂಪರ್ಕಿಸುವ ದೇವಸ್ಥಾನ ಪ್ರವಾಸೋದ್ಯಮ ಕಾರಿಡಾರ್ ಅಭಿವೃದ್ಧಿ ಉದ್ದೇಶದ ಖಾಸಗಿ ವಿಧೇಯಕವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ವಿಧಾನಸಭೆಯಲ್ಲಿ ಮಂಡಿಸಲು ಮುಂದಾಗಿದ್ದು, ಈ ಕುರಿತು ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ ೧೦೬ರಲ್ಲಿ ಕರ್ನಾಟಕ ವಿಧಾನಸಭೆಯ ಉಪಸಭಾಪತಿಗಳು ಹಾಗೂ ಖಾಸಗಿ ವಿಧೇಯಕ ಸಮಿತಿಯ ಅಧ್ಯಕ್ಷರಾದ ಮಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಹಣಕಾಸು ಇಲಾಖೆ ಕಾರ್ಯದರ್ಶಿಗಳು, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಗಳು, ಮುಜರಾಯಿ ಇಲಾಖೆಯ ಆಯುಕ್ತರು, ಖಾಸಗಿ ವಿಧೇಯಕ ಸಮಿತಿಯ ಕಾರ್ಯದರ್ಶಿಗಳು ಹಾಗೂ ಸಮಿತಿಯ ಸದಸ್ಯರು ಮತ್ತು ವಿಧಾನಸಭಾ ಸದಸ್ಯರು ಉಪಸ್ಥಿತರಿದ್ದರು.
ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸದರಿ ಖಾಸಗಿ ವಿಧೇಯಕವನ್ನು ಮಂಡಿಸುವ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು. ಈ ಹಿಂದೆ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಉದ್ದೇಶದಿಂದ ಶಾಸಕರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದರು. ಇದೀಗ ಕರಾವಳಿಯ ಧಾರ್ಮಿಕ ಪರಂಪರೆ ಮತ್ತು ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ದೇವಸ್ಥಾನ ಪ್ರವಾಸೋದ್ಯಮ ಕಾರಿಡಾರ್ ಅಭಿವೃದ್ಧಿಗೆ ಖಾಸಗಿ ವಿಧೇಯಕವನ್ನು ಮಂಡಿಸಲು ಮುಂದಾಗಿದ್ದಾರೆ.
ಸಭೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ದೇವಸ್ಥಾನಗಳ ಮೂಲಸೌಕರ್ಯ ವೃದ್ಧಿ ಹಾಗೂ ಸಮಗ್ರ ಪ್ರವಾಸೋದ್ಯಮ ಪ್ರಾಧಿಕಾರದ ರಚನೆಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚಿಸಲಾಯಿತು.

ಕರಾವಳಿ ಕರ್ನಾಟಕದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಬಳಸಿಕೊಂಡು ಸ್ಥಳೀಯ ಯುವಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಹಾಗೂ ಈ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡುವುದು ಈ ವಿಧೇಯಕದ ಪ್ರಮುಖ ಆಶಯವಾಗಿದೆ ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!