spot_img
Saturday, November 14, 2026
spot_img

ನೆಟ್ ಬಾಲ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ

ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಮೂಕಾಂಬಿಕಾ ದೇವಾಳದ ಅನುದಾನಿತ ಪ್ರೌಢಶಾಲೆ, ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ೧೪ ವರ್ಷದ ಬಾಲಕ- ಬಾಲಕಿಯರ ನೆಟ್ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದರೆ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಅವಳಿ ಪ್ರಶಸ್ತಿಗೆ ಭಾಜನವಾಗಿದೆ.

ಬಾಲಕರ ತಂಡದಲ್ಲಿ ಸಮರ್ಥ್, ಸಮರ್ಥ್ ಖಾರ್ವಿ, ವೈಭವ್, ನಾಗರಾಜ್, ಅರವ್, ವಿಗ್ನೇಶ್, ಯಶ್ವಿಕ್ ಮತ್ತು ಬಾಲಕಿಯರ ತಂಡದಲ್ಲಿ ಮನ್ವಿತಾ, ಸನ್ನಿಧಿ, ಶ್ರೀ ಲಕ್ಷ್ಮಿ, ಅಪೇಕ್ಷಾ, ಧನ್ಯ ಖಾರ್ವಿ, ಸನ್ನಿಧಿ ಖಾರ್ವಿ, ಶ್ರಾವಣಿ, ಪ್ರತಿನಿಧಿಸಿದ್ದರು. ಒಟ್ಟು ಎಂಟು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ದೈಹಿಕ ಶಿಕ್ಷಣ ಶಿಕ್ಷಕರಾದ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು. ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ ಬೋಧಕೇತರ ವೃಂದ ಮತ್ತು ಶಿಕ್ಷಕ-ರಕ್ಷಕ ಸಮಿತಿ ವಿದ್ಯಾರ್ಥಿಗಳ ಈ ಸಾಧನೆಯನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!