spot_img
Sunday, November 15, 2026
spot_img

ಸಮಾಜಕ್ಕಾಗಿ ಒಗ್ಗಟ್ಟಾಗಿರೋಣ-ಡಾ.ಜಿ.ಶಂಕರ್ |ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿವೇತನ ವಿತರಣೆ

ಕುಂದಾಪುರ: ಸಮಾಜಕ್ಕಾಗಿ ನಾವು ಒಗ್ಗಟ್ಟಾಗಿ ಮುನ್ನೆಡೆದಾಗ ಯಶಸ್ಸು ಸಾಧ್ಯವಾಗುತ್ತದೆ. ಸಮಾಜದ ಏಳ್ಗೆಯ ಬಗ್ಗೆ ಆಲೋಚನೆ ಮಾಡಬೇಕು. ಸಮಾಜದ ಪ್ರತಿಯೊಂದು ಮಗುವೂ ಕೂಡಾ ಉತ್ತಮ ಶಿಕ್ಷಣ ಪಡೆದು ಶಕ್ತಿಯಾಗಿ ಬೆಳೆಯಬೇಕು, ಸಹಕಾರ ಸಂಘದ ಮೂಲಕ ವೈದ್ಯಕೀಯ, ಇಂಜಿನಿಯರ್, ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ೨೫ಸಾವಿರ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ರೂಪಿಸಬೇಕು, ನೀವು ಮುಂದೆ ಹೆಜ್ಜೆ ಇಡಿ, ಹಿಂದೆ ನಾನು ಇರುತ್ತೇನೆ ಎಂದು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ.ಜಿ.ಶಂಕರ್ ಹೇಳಿದರು.

ಅವರು ಹೆಮ್ಮಾಡಿಯ ಮತ್ಸ್ಯಸೌಧದಲ್ಲಿ ನಡೆದ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ., ಹೆಮ್ಮಾಡಿ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಭಾ ಪುರಸ್ಕಾರ ನೆರವೇರಿಸಿ ಮಾತನಾಡಿದರು.

ನಾನು ಕೂಡಾ ಬಡತನದಿಂದ ಬೆಳೆದು ಬಂದವರ. ಬಡತನದ ಅರಿವು ನನಗೆ ಸ್ಪಷ್ಟವಾಗಿ ಗೊತ್ತಿದೆ. ಶಿಕ್ಷಣಕ್ಕೆ ಬಡತನ ಅಡ್ಡಿಯಾಗಬಾರದು. ಶಿಕ್ಷಣಕ್ಕೆ ಇಂಥಹ ಸಂಸ್ಥೆಗಳು ನಿರಂತರ ಸಹಕಾರ ಮಾಡುತ್ತವೆ. ಎಲ್ಲರೂ ಕೂಡಾ ಮೊಗವೀರ ಸಮಾಜದ ಅಭಿವೃದ್ಧಿಯ ಬಗ್ಗೆ ಚಿಂತನೆ ಹರಿಸೋಣ, ಇನ್ನೂ ಯಾವ ರೀತಿಯ ರೂಪುರೇಷೆ ಸಿದ್ಧಪಡಿಸಬೇಕು ಎನ್ನುವ ಬಗ್ಗೆ ಸಭೆ ನಡೆಸಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಅವರು ಹೇಳಿದರು.

ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ಇನ್ನೂ ಚೆನ್ನಾಗಿ ಬೆಳೆಯಬೇಕು. ಸಿಬ್ಬಂದಿಗಳು ಇನ್ನಷ್ಟು ಪರಿಶ್ರಮದಿಂದ ಸಂಘದ ಅಭಿವೃದ್ದಿ, ಸದಸ್ಯರಿಗೆ ಇನ್ನೂ ಹೆಚ್ಚಿನ ಸೇವೆ ನೀಡಲು ಚಿಂತನೆ ಮಾಡಬೇಕು. ಸಂಘ ಇನ್ನೂ ಬಲಿಷ್ಠವಾಗಿ ಬೆಳೆಯಬೇಕು ಎಂದರು.
ಸಂಘದ ಅಧ್ಯಕ್ಷರಾದ ರಾಜೀವ ಶ್ರೀಯಾನ್ ಅಧ್ಯಕ್ಷತೆ ವಹಿಸಿ ಸಂಘವು ನಿರಂತರ ತನ್ನ ಸದಸ್ಯರ ಮಕ್ಕಳ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ಪ್ರಕ್ರಿಯೆ ನಿರಂತರವಾಗಲಿದೆ ಎಂದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಹಟ್ಟಿಯಂಗಡಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಬೆಳವಣಿಗೆಯಲ್ಲಿ ನಾಡೋಜ ಡಾ.ಜಿ.ಶಂಕರ್ ಅವರ ಮಾರ್ಗದರ್ಶನ ಸಂಪೂರ್ಣ ಸಹಕಾರವಿದೆ. ಸರ್ಕಾರದ ಸಾಲಮನ್ನಾದ ಸೌಲಭ್ಯವನ್ನು ಸಂಘದ ಸದಸ್ಯರಿಗೂ ದೊರಕಿಸಿಕೊಟ್ಟಿದ್ದು ನಮ್ಮ ಹೆಗ್ಗುರುತು. ನಮ್ಮ ಸಂಘದ ಸಾಧನೆಗೆ ಎರಡು ರಾಷ್ಟ್ರೀಯ ಪ್ರಶಸ್ತಿ, ಮೂರು ರಾಜ್ಯ, ಮೂರು ಜಿಲ್ಲಾ ಪ್ರಶಸ್ತಿಗಳು ಲಭಿಸಿವೆ. ನಮ್ಮ ಸಂಘವು ಸಾಲಗಾರ ಸದಸ್ಯ ಮರಣಹೊಂದಿದ್ದರೆ ಸಂಘದ ಸ್ವಂತ ನಿಧಿಯಿಂದ 25 ಸಾವಿರ ತನಕ ರಿಯಾಯತಿ ನೀಡಲಾಗುತ್ತಿದೆ. ವೈದ್ಯಕೀಯ ಚಿಕಿತ್ಸೆಗೆ ನೆರವು, ಶೈಕ್ಷಣಿಕ ಸಾಧಕರಿಗೆ ಪುರಸ್ಕಾರ, ವಿದ್ಯಾರ್ಥಿವೇತನ ನಿರಂತರವಾಗಿ ನೀಡುತ್ತಾ ಬಂದಿದ್ದೇವೆ ಎಂದರು.

ಸಂಘದ ಉಪಾಧ್ಯಕ್ಷೆ ಸುಮತಿ ಮೊಗವೀರ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮಾಜಿ ಅಧ್ಯಕ್ಷರಾದ ಎಂ.ಎಂ ಸುವರ್ಣ, ಸಂಘದ ನಿರ್ದೇಶಕರಾದ ರವೀಂದ್ರ ಜಿ ಮೆಂಡನ್, ರಾಮ ಮೊಗವೀರ ಬೈಂದೂರು, ವಸಂತ ಆರ್.ಮೊಗವೀರ, ಸುಶೀಲ ಕೆ ಮೊಗವೀರ, ಸಂಘದ ಮಾಜಿ ಅಧ್ಯಕ್ಷರಾದ ಶೀನ ಮೊಗವೀರ, ಸುರೇಶ ಪುತ್ರನ್ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಮಾರ್ಗದರ್ಶನ:
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾರ್ಗದರ್ಶನ ನೀಡಲಾಯಿತು. ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಹಾಗೂ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ಉಪನ್ಯಾಸಕ ಉದಯ ನಾಯ್ಕ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಉತ್ತಮ ಮಾಹಿತಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಯಿತು.

ಸುಮತಿ ಮೊಗವೀರ ಪ್ರಾರ್ಥಿಸಿದರು. ಉಪನ್ಯಾಸಕ ಪ್ರವೀಣ್ ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಮುಖ್ಯ ಲೆಕ್ಕಿಗ ಸಂತೋಷ್ ಎಸ್.ಎಂ ವಂದಿಸಿದರು.

ಸುಮತಿ ಮೊಗವೀರ ಪ್ರಾರ್ಥಿಸಿದರು. ಉಪನ್ಯಾಸಕ ಪ್ರವೀಣ್ ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಸಂಘದ ಮುಖ್ಯ ಲೆಕ್ಕಿಗ ಸಂತೋಷ್ ಎಸ್.ಎಂ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!