spot_img
Monday, November 16, 2026
spot_img

ಕಂಡ್ಲೂರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಟ್ಯೂಷನ್ ತರಗತಿ ಉದ್ಘಾಟನೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕಿನ ಬಸ್ರೂರು ವಲಯದ ಕಂಡ್ಲೂರು ಕಾರ್ಯಕ್ಷೇತ್ರದ ವರಲಕ್ಷ್ಮಿ ಜ್ಞಾನವಿಕಾಸ ಕೇಂದ್ರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನಾ ಕಾರ್ಯಕ್ರಮವು ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಮ್ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು ಇಲ್ಲಿಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುರೇಶ್ ಮೊಗವೀರ ಅವರು ವಹಿಸಿದ್ದರು.

ಕುಂದಾಪುರ ತಾಲೂಕಿನ ಯೋಜನಾಧಿಕಾರಿ ಉಮೇಶ್ ಶೆಟ್ಟಿ ಮಾತನಾಡಿ, ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಜರಗುವ ಅನೇಕ ಕಾರ್ಯಕ್ರಮಗಳಲ್ಲಿ ಟ್ಯೂಷನ್ ಕ್ಲಾಸ್ ಒಂದಾಗಿದೆ. ಗ್ರಾಮೀಣ ಭಾಗದಲ್ಲಿರುವ ಮಕ್ಕಳ ಸರ್ವತೋಮುಖ ಅಭಿವೃದ್ಧಿಯಲ್ಲಿ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಇಂದಿನ ಮಕ್ಕಳೇ ಮುಂದಿನ ಜನಾಂಗಕ್ಕೆ ಭದ್ರ ಬುನಾದಿ ಎಂದು ಹೇಳಿದರು.

ಕಂಡ್ಲೂರು ಒಕ್ಕೂಟದ ಅಧ್ಯಕ್ಷರಾದ ಗೌರಿ ಆರ್.ಶ್ರೀಯಾನ್ ಮಾತನಾಡಿ, ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ಉತ್ತಮವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಇಂತಹ ಗ್ರಾಮೀಣ ಭಾಗದ ಸರಕಾರಿ ಪ್ರೌಢಶಾಲೆಗೆ ವಿಶೇಷವಾದ ಅವಕಾಶವನ್ನು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒದಗಿಸಿದೆ ಎಂದರು.

ವೇದಿಕೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಸುಜಾತ ಹೊಳ್ಳ, ಕುಂದಾಪುರ ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು, ಕಂಡ್ಲೂರು ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಪ್ರೇಮ ,ರಾಮ್ಸನ್ ಸರಕಾರಿ ಪ್ರೌಢಶಾಲೆಯ ಶಿಕ್ಷಕವೃಂದ, ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಸುಜಾತ ಹೊಳ್ಳ ಸ್ವಾಗತಿಸಿದರು. ರಾಮ್ಸನ್ ಸರಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ ಕೋಡಪದವು ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!