spot_img
Monday, November 16, 2026
spot_img

ಬಿದ್ಕಲ್‌ಕಟ್ಟೆ ವಲಯದ ಒಕ್ಕೂಟಗಳ ಪದಗ್ರಹಣ

kundapura: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ, ಕುಂದಾಪುರ-2 ತಾಲೂಕಿನ ಬಿದ್ಕಲ್ಕಟ್ಟೆ ವಲಯದ ಒಕ್ಕೂಟಗಳ ಪದಗ್ರಹಣ ಹೊಂಬಾಡಿಯ ಕುಲಾಲ ಸಭಾ ಭವನದಲ್ಲಿ ನಡೆಯಿತು.

ಉದ್ಯಮಿ ಅರುಣ್ ಕುಮಾರ್ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಎಲ್ಲಾ ಕೆಲಸಗಳು ಸಮಾಜಕ್ಕೆ ಉಪಯುಕ್ತವಾಗಿದ್ದು ವಿಭಿನ್ನ ಸಂದೇಶ ಸಾರುವಂತಹ ಕಾರ್ಯಕ್ರಮಗಳನ್ನು ನೀಡುತ್ತಿದೆ. ಕಾರ್ಯಕ್ರಮಗಳು ಕೇವಲ ಆಚರಣೆಗೆ ಸೀಮಿತವಾಗದೇ, ಗ್ರಾಮದ ಅಭಿವೃದ್ಧಿಗೆ ಸಹಕಾರಿಯಾಗುವ ಕೆಲಸಗಳಲ್ಲಿ ನಿರಂತರವಾಗಿ ಕೊಡುಗೆ ನೀಡುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕುಲಾಲ ಸಮಾಜ ಸುಧಾರಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಕುಲಾಲ್ ರವರು ಮಾತನಾಡುತ್ತಾ ಒಕ್ಕೂಟಗಳು ಬಲಗೊಂಡಷ್ಟು ಸಂಘಗಳ ಅಭಿವೃದ್ಧಿ, ಗುಣಮಟ್ಟ ಸುಲಭವಾಗುತ್ತದೆ. ಹೆಗ್ಗಡೆಯವರ ದೂರದೃಷ್ಟಿಯಲ್ಲಿ ಮೂಡಿಬರುವ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ವಿಶೇಷತೆಯನ್ನು ಕಾಣಬಹುದು ಎಂದರು.

ಯೋಜನಾಧಿಕಾರಿ ಸುಧೀರ್ ಹಂಗಳೂರು ಮಾತನಾಡಿ ಈ ವಲಯದಲ್ಲಿ 6 ಒಕ್ಕೂಟಗಳಿದ್ದು ಪ್ರತಿಯೊಂದು ಒಕ್ಕೂಟಗಳು ಸಂಘಗಳ ಅಭಿವೃದ್ಧಿ ಜೊತೆಗೆ ತಮ್ಮ ಗ್ರಾಮದ ಅಭಿವೃದ್ಧಿಗೆ ಶ್ರಮಿಸಬೇಕು. ಪದಾಧಿಕಾರಿಗಳು ನಿಸ್ವಾರ್ಥ ಸೇವಾ ಮನೋಭಾವನೆಯೊಂದಿಗೆ ಕೆಲಸ ಮಾಡಿ, ಗ್ರಾಮದ ಕಟ್ಟ್ಟ ಕಡೆಯ ವ್ಯಕ್ತಿಗೂ ಯೋಜನೆಯ ಪ್ರಯೋಜನವನ್ನು ತಲುಪಿಸುವ ಕೆಲಸವನ್ನು ಒಕ್ಕೂಟದ ಪದಾಧಿಕಾರಿಗಳು ಮಾಡಬೇಕು ಎಂದರು.

ನಿವೃತ್ತ ಶಿಕ್ಷಕರಾದ ರಾಜೀವ ಶೆಟ್ಟಿ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಪ್ರದೀಪ್ ಚಂದ್ರ ಶೆಟ್ಟಿ, ಜಿಲ್ಲಾ ಜನಜಾಗೃತಿ ಸದಸ್ಯರಾದ ಸುಲೇಖಾ ಶೆಟ್ಟಿ, ಉದ್ಯಮಿ ದೀಪಕ್ ಶೆಟ್ಟಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಗಣೇಶ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷರುಗಳಾದ ಹರೀಶ್ ಕುಲಾಲ್, ಉಮೇಶ್, ದಿವ್ಯ ಜ್ಯೋತಿ, ಸುಮನಾ, ರಮೇಶ್ ಪೂಜಾರಿ, ಕೃಷ್ಣಯ್ಯ ಶೆಟ್ಟಿ ಉಪಸ್ಥಿತರಿದ್ದರು.

ವಲಯದ ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು. ಮೇಲ್ವಿಚಾರಕಿ ಶರ್ಮಿಳಾ ಎಸ್ ಸ್ವಾಗತಿಸಿದರು. ಸೇವಾ ಪ್ರತಿನಿಧಿ ಪೂರ್ಣಿಮಾ ವಂದಿಸಿದರು. ಸುಧೀರ್ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!