spot_img
Tuesday, November 17, 2026
spot_img

ಸಿ‌ಎಸ್‌ಇ‌ಇಟಿ-2026 ಫಲಿತಾಂಶದಲ್ಲಿ ಕುಂದಾಪುರದ ಎಕ್ಸಲೆಂಟ್‌ನ ಹ್ಯಾಟ್ರಿಕ್ ಸಾಧನೆ

ಸಿ‌ಎ, ಸಿ‌ಎಸ್‌ಇ‌ಇಟಿ ವೃತ್ತಿ ಪರ ಕೋರ್ಸ್‌ಗಳಿಗೆ 15 ವರ್ಷಗಳಿಂದ ತರಬೇತಿ ನೀಡುತ್ತಿರುವ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ, ಕುಂದಾಪುರ ಸತತ 3 ವರ್ಷಗಳಿಂದಲೂ ಸಿ‌ಎಸ್‌ಇ‌ಇಟಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದು,The Institute of Company Secretaries of India ಸಂಸ್ಥೆ ನಡೆಸಿದ ಸಿ‌ಎಸ್ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ್ದಾರೆ.
ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳಲ್ಲಿ 10 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಕಾಲೇಜಿನ ಒಟ್ಟು ಫಲಿತಾಂಶ ೯೧% ಆಗಿದ್ದು. ಸಂಸ್ಥೆಯ ವಿದ್ಯಾರ್ಥಿಗಳಾದ ವಿವೇಕ್ ಕಾಂಚನ್ (೨೭೦), ಶ್ರಾವ್ಯಾ (೨೬೪), ಮನ್ವಿತಾ (೨೪೬), ಸೃಜನ್ ಜಿ (೨೪೦), ಸಮೀಕ್ಷಾ ಎ ಕುಂದರ್ (೨೩೫), ಧನುಷ್ (೨೦೮), ಪ್ರತ್ವಿಕ್ ಎ (೨೦೬), ಮನೋಜ್ ವಿ (೨೦೩), ಹೆಚ್ ಎಸ್ ವಿನುತಾ (೨೦೧), ಅನಿರುದ್ಧ್ ನಾಯಕ್ (೨೦೦) ಅಂಕಗಳನ್ನು ಪಡೆದು ಉತ್ತೀರ್ಣರಾಗುವ ಮೂಲಕ ಮುಂದಿನ ಹಂತಕ್ಕೆ ಅರ್ಹತೆಯನ್ನು ಪಡೆದಿದ್ದಾರೆ.
ಈ ಎಲ್ಲಾ ವಿದ್ಯಾರ್ಥಿಗಳ ಸಾಧನೆಯನ್ನು ಎಂ.ಎಂ ಹೆಗ್ಡೆ ಎಜುಕೇಶನಲ್ & ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಎಂ ಮಹೇಶ್ ಹೆಗ್ಡೆ, ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಹಾಗೂ ಬೋಧಕ ಮತ್ತು ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!