spot_img
Friday, November 20, 2026
spot_img

ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ ಬಿ.ಎಂ.ಸುಕುಮಾರ ಶೆಟ್ಟಿ ಪುನರಾಯ್ಕೆ

ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿಯ ೨೦೨೭-೨೦೩೧ನೇ ಅವಧಿಯ ಅಧ್ಯಕ್ಷರಾಗಿ ಮಾಜಿ ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನ.18 ಬುಧವಾರ ನಡೆದ ಕುಂದಾಪುರ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿಯ ಸಭೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಗೊಂಡರು.

ಉಪಾಧ್ಯಕ್ಷರಾಗಿ ಡಾ.ವೈ.ಎಸ್ ಹೆಗ್ಡೆ, ಕಾರ್ಯದರ್ಶಿಯಾಗಿ ಸೀತಾರಾಮ ನಕ್ಕತ್ತಾಯ, ಜಂಟಿ ಕಾರ್ಯದರ್ಶಿಯಾಗಿ ಕೆ.ಸುಧಾಕರ ಶೆಟ್ಟಿ, ಕೋಶಾಧಿಕಾರಿಯಾಗಿ ಡಾ.ಎಂ.ಸಚ್ಚಿದಾನಂದ ಶೆಟ್ಟಿ ಪುನರಾಯ್ಕೆಯಾಗಿದ್ದಾರೆ.

ಸದಸ್ಯರಾಗಿ ಬಿ.ಅರುಣ್ ಕುಮಾರ್ ಶೆಟ್ಟಿ, ಡಾ.ಸಂತೋಷ್ ಕುಮಾರ ಶೆಟ್ಟಿ ಎಂ ಪುನಾರಾಯ್ಕೆಯಾಗಿದ್ದಾರೆ. ಸತ್ಯಮೋಹನ್ ಶೆಟ್ಟ, ಸಂಪತ್ ಕುಮಾರ ಶೆಟ್ಟಿ, ಡಾ.ಶಿಶಿರ್ ಶೆಟ್ಟಿ ಮೊದಲ ಬಾರಿ ಆಯ್ಕೆಯಾಗಿದ್ದಾರೆ.

ಸುವರ್ಣ ಮಹೋತ್ಸವ ಪೂರೈಸಿರುವ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಎಂ.ಸುಕುಮಾರ ಶೆಟ್ಟಿ ಅವರು ಸಂಸ್ಥೆಯ ಅಧ್ಯಕ್ಷರಾಗಿ ೨೫ ವರ್ಷ ಪೂರೈಸಿದ್ದಾರೆ. ಈ ಸಂಸ್ಥೆ ಅಧೀನದಲ್ಲಿರುವ ಎಚ್.ಎಂ.ಎಂ, ವಿಕೆ‌ಆರ್ ಆಚಾರ್ಯ ಪ್ರೌಢಶಾಲೆ, ಆರ್.ಎನ್.ಶೆಟ್ಟಿ ಕಾಲೇಜು, ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಒಟ್ಟು ನಾಲ್ಕು ಸಂಸ್ಥೆಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುತ್ತಿದ್ದಾರೆ.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!