spot_img
Monday, November 23, 2026
spot_img

ಸಹಕಾರ ರತ್ನ ಪ್ರಶಸ್ತಿ ಪಡೆದ ಎಸ್. ಜಯರಾಮ ಶೆಟ್ಟಿ ಟಿ.ಎ.ಪಿ.ಎಸ್.ಎಂ. ಎಸ್ ವತಿಯಿಂದ ಸನ್ಮಾನ

ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ ವತಿಯಿಂದ ಸಹಕಾರ ರತ್ನ ಪ್ರಶಸ್ತಿ ಪಡೆದ ಸಂಸ್ಥೆಯ ನಿರ್ದೇಶಕ ಮತ್ತು ಬೆಳ್ವೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಎಸ್. ಜಯರಾಮ ಶೆಟ್ಟಿಯವರಿಗೆ ಸನ್ಮಾನ ಸಮಾರಂಭವು ಸಂಘದ ಅಧ್ಯಕ್ಷರಾದ ಹೆಚ್.ಹರಿಪ್ರಸಾದ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಎಸ್. ಜಯರಾಮ ಶೆಟ್ಟಿಯವರು ತಾನು ರೈತರ ಪರವಾಗಿ ಕೆಲಸ ಮಾಡಲು ಸದಾ ಪ್ರಯತ್ನಿಸುತ್ತೇನೆ. ಸಾಕಷ್ಟು ಒತ್ತಡಗಳಿದ್ದರೂ ರೈತರು ಕಷ್ಟದಲ್ಲಿರುತ್ತಾರೆ ಎಂಬುದನ್ನು ನಾವು ಕಂಡುಕೊಳ್ಳಬೇಕು. ನಮ್ಮ ಸಂಘವು ರೈತರಿಗೆ ಸೌಲಭ್ಯವನ್ನು ಒದಗಿಸಲು ಸದಾ ಶ್ರಮಿಸುತ್ತಿದೆ. ರೈತರಿಗೆ ಬೇಕಾದ ಕಟಾವು ಯಂತ್ರ, ಉಳುಮೆ ಯಂತ್ರ ಎಲ್ಲವೂ ಕೂಡ ಕಡಿಮೆ ದರದಲ್ಲಿ ಬಾಡಿಗೆ ನೀಡುತ್ತೇವೆ. ಸಾಕಷ್ಟು ಕೆಲಸವಾದರೂ ಅದು ರೈತರಿಗೆ ಮಾಡುವ ಸೇವೆ ಎಂದುಕೊಳ್ಳುತ್ತೇವೆ ಎಂದು ಹೇಳಿದ ಅವರು ಸಾಧನೆಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಎಂ. ಮಹೇಶ್ ಹೆಗ್ಡೆ ಎಲ್ಲಾ ನಿರ್ದೇಶಕರ ಪರವಾಗಿ ಶುಭ ಕೋರಿ, ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಸಲ್ಲಿಸಿ ಮಾದರಿಯಾಗಿ ಗುರುತಿಸಿಕೊಳ್ಳಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಎಸ್. ನ ಉಪಾಧ್ಯಕ್ಷರಾದ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ, ನಿರ್ದೇಶಕರಾದ ಎಂ. ಮೋಹನದಾಸ್ ಶೆಟ್ಟಿ, ಆನಂದ ಬಿಲ್ಲವ, ಎಸ್. ಜಯರಾಮ ಶೆಟ್ಟಿ, ಪ್ರಭಾಕರ ಶೆಟ್ಟಿ ಜಡ್ಕಲ್, ಉಮೇಶ್ ಶೆಟ್ಟಿ ಕಲ್ಗದ್ದೆ, ಸದಾನಂದ ಬಳ್ಕೂರು, ಎ. ಕಿರಣ್ ಹೆಗ್ಡೆ ಅಂಪಾರು, ಪ್ರಭಾಕರ ಶೆಟ್ಟಿ ಕೆರಾಡಿ, ಸತೀಶ್ ಶೆಟ್ಟಿ ಕುಂದಾಪುರ, ವಿಜಯ ಪುತ್ರನ್, ರಕ್ಷಿತ್ ಶೆಟ್ಟಿ ಕಾಳಾವರ ಉಪಸ್ಥಿತರಿದ್ದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಪ್ರಸಾದ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!